ವಿಶ್ವಕಪ್ ಉದ್ಘಾಟನಾ ಪಂದ್ಯದಲ್ಲಿ ಕಿವೀಸ್‌ಗೆ ಸ್ಪರ್ಧಾತ್ಮಕ ಗುರಿ ನೀಡಿದ ಹಾಲಿ ಚಾಂಪಿಯನ್ ಇಂಗ್ಲೆಂಡ್

ಒಂದು ಕಡೆ ನಿರಂತರವಾಗಿ ವಿಕೆಟ್ ಬೀಳುತ್ತಿದ್ದರೂ ಮತ್ತೊಂದೆಡೆ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ಅನುಭವಿ ಬ್ಯಾಟರ್ ಜೋ ರೂಟ್ ಸಮಯೋಚಿತ ಅರ್ಧಶತಕ ಸಿಡಿಸುವ ಮೂಲಕ ತಂಡ ಸವಾಲಿನ ಮೊತ್ತ ಕಲೆಹಾಕಲು ಯಶಸ್ವಿಯಾದರು. ಕಿವೀಸ್ ಬೌಲರ್‌ಗಳನ್ನು ದಿಟ್ಟವಾಗಿ ಎದುರಿಸಿದ ಜೋ ರೂಟ್‌ 86 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ ಒಂದು ಆಕರ್ಷಕ ಸಿಕ್ಸರ್ ನೆರವಿನಿಂದ 77 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. 

Joe Root fifty powers England set 283 runs target to New Zealand World Cup Opening clash kvn

ಅಹಮದಾಬಾದ್‌(ಅ.05): 13ನೇ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು ನಿಗದಿತ 50 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 282 ರನ್ ಬಾರಿಸಿದೆ. ಈ ಮೂಲಕ ನ್ಯೂಜಿಲೆಂಡ್ ತಂಡಕ್ಕೆ ಮೊದಲ ಪಂದ್ಯ ಗೆಲ್ಲಲು ಸ್ಪರ್ಧಾತ್ಮಕ ಗುರಿ ನೀಡಿದೆ. ಕಳೆದ ವಿಶ್ವಕಪ್ ಫೈನಲ್‌ ಸೋಲಿಗೆ ಸೇಡು ತೀರಿಸಿಕೊಳ್ಳಬೇಕಿದ್ದರೇ ನ್ಯೂಜಿಲೆಂಡ್ ತಂಡವು 283 ರನ್ ಬಾರಿಸಬೇಕಿದೆ

ಇಲ್ಲಿನ ನರೇಂದ್ರ ಮೋದಿ ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು ಎಚ್ಚರಿಕೆಯ ಆರಂಭವನ್ನು ಪಡೆಯಿತು. ಹೀಗಿದ್ದೂ ಮೊದಲ ವಿಕೆಟ್‌ಗೆ ದೊಡ್ಡ ಮೊತ್ತದ ಜತೆಯಾಟ ಮೂಡಿ ಬರಲಿಲ್ಲ. ಇಂಗ್ಲೆಂಡ್ ಆರಂಭಿಕರಾದ ಡೇವಿಡ್ ಮಲಾನ್ ಹಾಗೂ ಜಾನಿ ಬೇರ್‌ಸ್ಟೋವ್ ಜೋಡಿ 7.4 ಓವರ್‌ಗಳಲ್ಲಿ 40 ರನ್‌ಗಳ ಜತೆಯಾಟ ನಿಭಾಯಿಸಿತು. ಡೇವಿಡ್ ಮಲಾನ್ ಕೇವಲ 14 ರನ್ ಬಾರಿ ಮ್ಯಾಟ್ ಹೆನ್ರಿಗೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಮತ್ತೋರ್ವ ಆರಂಭಿಕ ಬ್ಯಾಟರ್ ಜಾನಿ ಬೇರ್‌ಸ್ಟೋವ್ ಕೂಡಾ ಹೆಚ್ಚು ಹೊತ್ತು ಕ್ರೀಸ್‌ನಲ್ಲಿರಲು ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್ ಅವಕಾಶ ನೀಡಲಿಲ್ಲ. ಬೇರ್‌ಸ್ಟೋವ್ 35 ಎಸೆತಗಳಲ್ಲಿ 33 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಮೋದಿ ಸ್ಟೇಡಿಯಂ ಖಾಲಿ-ಖಾಲಿ, 'ವಿಶ್ವಕಪ್ ಉದ್ಘಾಟನಾ ಪಂದ್ಯದಲ್ಲಿ 22 ಆಟಗಾರರು, 2 ಅಂಪೈರ್, 17 ಪ್ರೇಕ್ಷಕರು'..!

ಇನ್ನು ಮಧ್ಯಮ ಕ್ರಮಾಂಕದಲ್ಲಿ ಹ್ಯಾರಿ ಬ್ರೂಕ್(25), ಮೋಯಿನ್ ಅಲಿ(11) ಹಾಗೂ ಲಿಯಾಮ್ ಲಿವಿಂಗ್‌ಸ್ಟೋನ್(20) ದೊಡ್ಡ ಮೊತ್ತ ಕಲೆಹಾಕಲು ಕಿವೀಸ್ ಬೌಲರ್‌ಗಳು ಅವಕಾಶ ನೀಡಲಿಲ್ಲ.

ಮತ್ತೆ ಇಂಗ್ಲೆಂಡ್‌ಗೆ ಜೋ ರೂಟ್ ಆಪತ್ಬಾಂದವ: ಒಂದು ಕಡೆ ನಿರಂತರವಾಗಿ ವಿಕೆಟ್ ಬೀಳುತ್ತಿದ್ದರೂ ಮತ್ತೊಂದೆಡೆ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ಅನುಭವಿ ಬ್ಯಾಟರ್ ಜೋ ರೂಟ್ ಸಮಯೋಚಿತ ಅರ್ಧಶತಕ ಸಿಡಿಸುವ ಮೂಲಕ ತಂಡ ಸವಾಲಿನ ಮೊತ್ತ ಕಲೆಹಾಕಲು ಯಶಸ್ವಿಯಾದರು. ಕಿವೀಸ್ ಬೌಲರ್‌ಗಳನ್ನು ದಿಟ್ಟವಾಗಿ ಎದುರಿಸಿದ ಜೋ ರೂಟ್‌ 86 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ ಒಂದು ಆಕರ್ಷಕ ಸಿಕ್ಸರ್ ನೆರವಿನಿಂದ 77 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. 

ವಿಶ್ವಕಪ್ ಪಂದ್ಯ ವೀಕ್ಷಿಸಲು ಮೈದಾನಕ್ಕೆ ಬರುವ ಪ್ರೇಕ್ಷಕರಿಗೆ ಗುಡ್‌ ನ್ಯೂಸ್ ಕೊಟ್ಟ ಜಯ್ ಶಾ..!

ಇನ್ನು ಇಂಗ್ಲೆಂಡ್ ಟೆಸ್ಟ್ ತಂಡದ ಮಾಜಿ ನಾಯಕ ಜೋ ರೂಟ್‌ಗೆ ಉತ್ತಮ ಸಾಥ್ ನೀಡಿದ ಕ್ಯಾಪ್ಟನ್ ಜೋಸ್ ಬಟ್ಲರ್ 42 ಎಸೆತಗಳನ್ನು ಎದುರಿಸಿ ತಲಾ 2 ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 43 ರನ್ ಬಾರಿಸಿ ಮ್ಯಾಟ್ ಹೆನ್ರಿಗೆ ವಿಕೆಟ್ ಒಪ್ಪಿಸಿದರು.

ನ್ಯೂಜಿಲೆಂಡ್ ತಂಡದ ಪರ ಮಾರಕ ದಾಳಿ ನಡೆಸಿದ ಮ್ಯಾಟ್ ಹೆನ್ರಿ 48 ರನ್ ನೀಡಿ 3 ವಿಕೆಟ್ ಪಡೆದರೆ, ಮಿಚೆಲ್ ಸ್ಯಾಂಟ್ನರ್ ಹಾಗೂ ಗ್ಲೆನ್ ಫಿಲಿಫ್ಸ್ ತಲಾ 2 ವಿಕೆಟ್ ಪಡೆದರು. ಇನ್ನು ಟ್ರೆಂಟ್ ಬೌಲ್ಟ್, ರಚಿನ್ ರವೀಂದ್ರ ತಲಾ ಒಂದೊಂದು ವಿಕೆಟ್ ತಮ್ಮ ಖಾತೆಗೆ ಸೇರಿಸಿಕೊಂಡರು.

Latest Videos
Follow Us:
Download App:
  • android
  • ios