Asianet Suvarna News Asianet Suvarna News

#JusticeForSamson: ರಿಷಭ್ ಪಂತ್ ಫೇಲ್ ಬೆನ್ನಲ್ಲೇ ಸಂಜು ಸ್ಯಾಮ್ಸನ್‌ ಪರ ನೆಟ್ಟಿಗರ ಅಭಿಯಾನ..!

* ಮೂರನೇ ಏಕದಿನ ಪಂದ್ಯದಲ್ಲಿ ರಿಷಭ್ ಪಂತ್ ಮತ್ತೊಮ್ಮೆ ಫೇಲ್
* ಕೇವಲ 10 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ವಿಕೆಟ್ ಕೀಪರ್ ಬ್ಯಾಟರ್
* ಇದರ ಬೆನ್ನಲ್ಲೇ ಸಂಜು ಸ್ಯಾಮ್ಸನ್‌ಗೆ ನ್ಯಾಯ ಸಿಗಲಿ ಎನ್ನುವ ಅಭಿಯಾನ ಆರಂಭ

JusticeForSamson Trends After Rishabh Pant Fails During 3rd ODI against New Zealand kvn
Author
First Published Nov 30, 2022, 10:29 AM IST

ಕ್ರೈಸ್ಟ್‌ಚರ್ಚ್‌(ನ.30): ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾ, ನ್ಯೂಜಿಲೆಂಡ್ ಎದುರಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಯಾವುದೇ ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಇಲ್ಲಿನ ಹೇಗ್ಲೆ ಓವಲ್ ಮೈದಾನದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಲಿಳಿದ ಟೀಂ ಇಂಡಿಯಾ, ಬ್ಯಾಟಿಂಗ್‌ನಲ್ಲಿ ದಯನೀಯ ವೈಫಲ್ಯ ಅನುಭವಿಸಿದೆ. ಇನ್ನು ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದು, ನೆಟ್ಟಿಗರು ಸಂಜು ಸ್ಯಾಮ್ಸನ್‌ಗೆ ನ್ಯಾಯ ಸಿಗಲಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದ್ದಾರೆ.

ಈಗಾಗಲೇ ಮೊದಲ ಏಕದಿನ ಪಂದ್ಯ ಸೋತು ಸರಣಿಯಲ್ಲಿ 0-1ರ ಹಿನ್ನಡೆ ಅನುಭವಿಸಿರುವ ಟೀಂ ಇಂಡಿಯಾ, ಸರಣಿ ಸಮಬಲ ಸಾಧಿಸಬೇಕಿದ್ದರೇ ಮೂರನೇ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಎರಡನೇ ಪಂದ್ಯ ಮಳೆಯಿಂದ ರದ್ದಾಗಿದ್ದರಿಂದಾಗಿ, ಇದೀಗ ಮೂರನೇ ಪಂದ್ಯವು ಶಿಖರ್ ಧವನ್ ಪಡೆಗೆ ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿಕೊಂಡಿದೆ. ಈ ಪಂದ್ಯದಲ್ಲಿ ಶುಭ್‌ಮನ್ ಗಿಲ್ 13 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ನಾಯಕ ಶಿಖರ್ ಧವನ್ ಬ್ಯಾಟಿಂಗ್ 28 ರನ್‌ಗಳಿಗೆ ಸೀಮಿತವಾಯಿತು. ಇನ್ನು ಶ್ರೇಯಸ್ ಅಯ್ಯರ್‌ 49 ರನ್ ಬಾರಿಸಿ ಕೇವಲ 1 ರನ್ ಅಂತರದಲ್ಲಿ ಅರ್ಧಶತಕ ಬಾರಿಸುವ ಅವಕಾಶವನ್ನು ಕೈಚೆಲ್ಲಿದರೆ, ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ 10 ಹಾಗೂ ಸೂರ್ಯಕುಮಾರ್ ಯಾದವ್ ಕೇವಲ 6 ರನ್‌ಗೆ ವಿಕೆಟ್ ಒಪ್ಪಿಸುವ ಮೂಲಕ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು. ಟೀಂ ಇಂಡಿಯಾ 24.1 ಓವರ್‌ ಆಡುವಷ್ಟರಲ್ಲಿ ಟೀಂ ಇಂಡಿಯಾ ಅಗ್ರಕ್ರಮಾಂಕದ ಐವರು ಬ್ಯಾಟರ್‌ಗಳು ಪೆವಿಲಿಯನ್ ಸೇರಿದ್ದರು. 

ಪಂತ್ ಫೇಲ್, ಸಂಜು ಪರ ನೆಟ್ಟಿಗರು ಬ್ಯಾಟಿಂಗ್: ಸಂಜು ಸ್ಯಾಮ್ಸನ್‌ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದರೂ ಸಹಾ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇನ್ನು ಮೊದಲ ಏಕದಿನ ಪಂದ್ಯದಲ್ಲಿ ಸಮಯೋಚಿತ 36 ರನ್ ಬಾರಿಸಿದ್ದ ಸಂಜು ಅವರನ್ನು ಎರಡನೇ ಹಾಗೂ ಮೂರನೇ ಏಕದಿನ ಪಂದ್ಯದಿಂದ ಟೀಂ ಇಂಡಿಯಾ ಆಡುವ ಹನ್ನೊಂದರ ಬಳಗದಿಂದ ಕೈಬಿಡಲಾಗಿತ್ತು. ಇನ್ನು ಟಿ20 ಹಾಗೂ ಏಕದಿನ ಸರಣಿಯಲ್ಲಿ ಪಂತ್‌ಗೆ ಸಾಕಷ್ಟು ಅವಕಾಶ ನೀಡಿದರೂ ಸಹ ಅದನ್ನು ಸದುಪಯೋಗ ಪಡಿಸಿಕೊಳ್ಳಲು ರಿಷಭ್ ಪಂತ್ ವಿಫಲವಾಗುತ್ತಲೇ ಬಂದಿದ್ದಾರೆ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ, ಪಂತ್ ಕೈಬಿಟ್ಟು ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಲಿ, ಸಂಜು ಸ್ಯಾಮ್ಸನ್‌ಗೆ ನ್ಯಾಯ ಸಿಗಲಿ ಎಂದು ಅಭಿಯಾನ ಆರಂಭಿಸಿದ್ದಾರೆ.

Ind vs NZ 3rd ODI: ಭಾರತ ಎದುರು ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ, ಒಂದು ಬದಲಾವಣೆ

ಇನ್ನು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಕೃಷ್ಣಮಾಚಾರಿ ಶ್ರೀಕಾಂತ್ ಕೂಡಾ, ರಿಷಭ್ ಪಂತ್‌ಗೆ ಕೆಲ ಸಮಯ ಟೀಂ ಇಂಡಿಯಾದಿಂದ ವಿಶ್ರಾಂತಿ ನೀಡಲಿ. ಸಿಕ್ಕ ಅವಕಾಶವನ್ನು ಅವರು ಬಳಸಿಕೊಳ್ಳಲು ವಿಫಲವಾಗುತ್ತಿರುವುದನ್ನು ನೋಡಿದರೆ ಬೇಸರವಾಗುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Follow Us:
Download App:
  • android
  • ios