ಮುಂಬೈ(ಮೇ.24):  ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಲಾಕ್‌ಡೌನ್ ಕಾರಣ ಮನೆಯೊಳಗೆ ಬಂಧಿಯಾಗಿದ್ದಾರೆ. ಆದರೆ ಸಾಮಾಜಿಕ ತಾಲತಾಣದಲ್ಲಿ ಹಲವು ಫೋಟೋಗಳನ್ನು ಶೇರ್ ಮಾಡುತ್ತಿದ್ದಾರೆ. ಪತ್ನಿ ಅನುಷ್ಕಾ ಶರ್ಮಾ ಕೂಡ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಕೊಹ್ಲಿಯ ಹಲವು ಫೋಟೋಗಳನ್ನು ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಇದೀಗ ಕೊಹ್ಲಿ ಹಳೇ ಫೋಟೋವೊಂದನ್ನು ಶೇರ್ ಮಾಡಿದ್ದಾರೆ.

ಸಿನಿಮಾದಲ್ಲಿ ನಟಿಸಲು ಓಕೆ, ಆದ್ರೆ ಒಂದು ಕಂಡೀಷನ್: ವಿರಾಟ್ ಕೊಹ್ಲಿ 

ಕೊಹ್ಲಿ ಇನ್ಸ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿದ ಫೋಟೋಗೆ ಇಂಗ್ಲೆಂಡ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಕೆವಿನ್ ಪೀಟರ್ಸನ್ ಮನವಿ ಮಾಡಿದ್ದಾರೆ. ಕೊಹ್ಲಿ ನಿಮ್ಮ ಗಡ್ಡ ತೆಗೆಯಿರಿ ಎಂದು ಪೀಟರ್ಸನ್ ಹೇಳಿದ್ದಾರೆ. ಈಗಾಗಲೇ ಹಲವು ಬಾರಿ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಪೀಟರ್ಸನ್ ಗಡ್ಡ ಶೇವ್ ಮಾಡಲು ಹೇಳಿದ್ದಾರೆ. 

 

 
 
 
 
 
 
 
 
 
 
 
 
 

Throwback 👀

A post shared by Virat Kohli (@virat.kohli) on May 24, 2020 at 3:46am PDT

ಇತ್ತೀಚೆಗೆ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ತಮ್ಮ ಅಪಾರ್ಟ್‌ಮೆಂಟ್ ಟೆರೆಸ್‌ನಲ್ಲಿ ಕ್ರಿಕೆಟ್ ಆಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಕೊಹ್ಲಿ ಜೊತೆ ಸೇರಿ ಅನುಷ್ಕಾ ಕೂಡ ಬ್ಯಾಟಿಂಗ್ ಮಾಡಿದ್ದರು. ಪಕ್ಕದ ಅಪಾರ್ಟ್‌ಮೆಂಟ್‌ನಿಂದ ವಿಡಿಯೋ ಶೂಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

ಲಾಕ್‌ಡೌನ್ ಸಮಯದಲ್ಲಿ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಮನೆಯೊಳಗೆ ಬಂಧಿಯಾಗಿದ್ದಾರೆ. ಇಷ್ಟೇ ಅಲ್ಲ ಅಭಿಮಾನಿಗಳು ಮನೆಯಿಂದ ಹೊರಬರಬೇಡಿ, ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಮನವಿ ಮಾಡಿದ್ದರು. 

ಇತ್ತ ಬಿಸಿಸಿಸಿ ಐಸೋಲೇಶನ್ ಕ್ಯಾಂಪ್ ಆಯೋಜಿಸಲು ಸಿದ್ದತೆ ನಡೆಸುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಆಯೋಜಿಸುತ್ತಿದ್ದ ತರಬೇತಿ ಶಿಬಿರವನ್ನು ಧರ್ಮಶಾಲಾಗೆ ಸ್ಥಳಾಂತರ ಮಾಡಲಾಗಿದೆ.