* 4ನೇ ಟಿ20 ಸರಣಿಯನ್ನು ಜಯಿಸಿದ ವೆಸ್ಟ್‌ ಇಂಡೀಸ್‌* 5 ಪಂದ್ಯಗಳ ಟಿ20 ಸರಣಿಯಲ್ಲಿ 2-2ರ ಸಮಬಲ* ಕುತೂಹಲ ಮೂಡಿಸಿದ ನಿರ್ಣಾಯಕ ಟಿ20 ಪಂದ್ಯ

ಗ್ರೆನಡಾ(ಜು.02): ನಾಯಕ ಕೀರನ್ ಪೊಲ್ಲಾರ್ಡ್‌ ಸ್ಪೋಟಕ ಬ್ಯಾಟಿಂಗ್ ಹಾಗೂ ಡ್ವೇನ್‌ ಬ್ರಾವೋ ಚಾಣಾಕ್ಷ ಬೌಲಿಂಗ್ ನೆರವಿನಿಂದ 4ನೇ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಎದುರು ವೆಸ್ಟ್‌ ಇಂಡೀಸ್‌ ಕ್ರಿಕೆಟ್ ತಂಡವು 21 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಇದರೊಂದಿಗೆ 5 ಪಂದ್ಯಗಳ ಟಿ20 ಸರಣಿಯಲ್ಲಿ 2-2ರ ಸಮಬಲ ಸಾಧಿಸಿದೆ. ಇದರೊಂದಿಗೆ ಶನಿವಾರ ನಡೆಯಲಿರುವ ನಿರ್ಣಾಯಕ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ.

ಮೊದಲ ಬ್ಯಾಟ್‌ ಮಾಡಿದ್ದ ವೆಸ್ಟ್ ಇಂಡೀಸ್‌ ತಂಡಕ್ಕೆ ಆರಂಭಿಕ ಬ್ಯಾಟ್ಸ್‌ಮನ್‌ ಲಿಂಡ್ಲ್‌ ಸಿಮನ್ಸ್‌(47) ಸ್ಪೋಟಕ ಬ್ಯಾಟಿಂಗ್ ನಡೆಸಿದರಾದರು ಕೇವಲ 3 ರನ್‌ ಅಂತರದಲ್ಲಿ ಅರ್ಧಶತಕ ವಂಚಿತರಾದರು. ಲೆವಿಸ್‌, ಗೇಲ್ ಹಾಗೂ ಹೆಟ್ಮೇಯರ್ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದಾಗ ಕೆರಿಬಿಯನ್‌ ಪಾಳಯದಲ್ಲಿ ಆತಂಕ ಮನೆಮಾಡಿತ್ತು. ಆದರೆ ನಾಯಕ ಕೀರನ್‌ ಪೊಲ್ಲಾರ್ಡ್‌ 25 ಎಸೆತಗಳಲ್ಲಿ 2 ಬೌಂಡರಿ ಹಾಗೂ 5 ಸಿಕ್ಸರ್‌ಗಳ ನೆರವಿನಿಂದ ಅಜೇಯ 51 ರನ್‌ ಬಾರಿಸುವ ಮೂಲಕ ವಿಂಡೀಸ್ ತಂಡವು 167 ರನ್‌ ಕಲೆಹಾಕಲು ನೆರವಾದರು.

Scroll to load tweet…

ಸ್ಯಾಮ್ ಕರ್ರನ್‌ಗೆ 5 ವಿಕೆಟ್; ಲಂಕಾ ಎದುರಿನ ಏಕದಿನ ಸರಣಿ ಇಂಗ್ಲೆಂಡ್ ಪಾಲು

ಇನ್ನು ಈ ಸವಾಲಿನ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡಕ್ಕೆ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಕ್ವಿಂಟನ್‌ ಡಿ ಕಾಕ್‌(60) ಅರ್ಧಶತಕ ಬಾರಿಸುವ ಮೂಲಕ ತಂಡಕ್ಕೆ ಆಸರೆಯಾದರು. ಆದರೆ ಮತ್ತೊಂದೆಡೆ ಉಳಿದ ಬ್ಯಾಟ್ಸ್‌ಮನ್‌ಗಳು ಡಿ ಕಾಕ್‌ಗೆ ಸಾಥ್ ನೀಡಲಿಲ್ಲ. ಡ್ವೇನ್‌ ಬ್ರಾವೋ ಕೇವಲ 19 ರನ್‌ ನೀಡಿ 4 ವಿಕೆಟ್ ಕಬಳಿಸುವ ಮೂಲಕ ದಕ್ಷಿಣ ಆಫ್ರಿಕಾ ತಂಡವನ್ನು 146 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು.