'ಐಪಿಎಲ್‌ ಕಿಂಗ್' ನನ್ನ ರೋಲ್‌ ಮಾಡೆಲ್ ಎಂದ ರಿಂಕು ಸಿಂಗ್..!

2023ರ ಐಪಿಎಲ್‌ನಲ್ಲಿ ಮಿಂಚಿದ್ದ ರಿಂಕು ಸಿಂಗ್, ಈಗ ಟೀಂ ಇಂಡಿಯಾಗೆ ಎಂಟ್ರಿ
ತಮ್ಮ ರೋಲ್ ಮಾಡೆಲ್ ಕ್ರಿಕೆಟಿಗನ ಹೆಸರಿಸಿದ ಕೆಕೆಆರ್ ಸ್ಟಾರ್
ಏಷ್ಯನ್ ಗೇಮ್ಸ್‌ಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿರುವ ರಿಂಕು ಸಿಂಗ್

KKR star Rinku Singh On His Idol It is Not Virat Kohli Or MS Dhoni kvn

ನವದೆಹಲಿ(ಜು.19): ಹಲವು ವರ್ಷಗಳ ನಿರಂತರ ಪರಿಶ್ರಮದ ಫಲವಾಗಿ ಕೊನೆಗೂ ರಿಂಕು ಸಿಂಗ್, ಭಾರತ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಏಷ್ಯನ್‌ ಗೇಮ್ಸ್‌ ಟೂರ್ನಿಗೆ ಈಗಾಗಲೇ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಿದ್ದು, 2023ರ ಐಪಿಎಲ್ ಟೂರ್ನಿಯಲ್ಲಿ ಮಿಂಚಿನ ಪ್ರದರ್ಶನ ತೋರಿದ್ದ ಎಡಗೈ ಸ್ಪೋಟಕ ಬ್ಯಾಟರ್ ರಿಂಕು ಸಿಂಗ್, ಇದೇ ಮೊದಲ ಬಾರಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಚೀನಾದಲ್ಲಿ ಮುಂಬರುವ ಸೆಪ್ಟೆಂಬರ್ 23ರಿಂದ ಅಕ್ಟೋಬರ್ 08ರ ವರೆಗೆ ನಡೆಯಲಿದೆ.

ಇಂಡಿಯನ್‌ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್‌ ಪರ ಮಿಂಚಿದ್ದ ರಿಂಕು ಸಿಂಗ್, ಇದೀಗ ಟೀಂ ಇಂಡಿಯಾ ಜೆರ್ಸಿ ತೊಟ್ಟು ಅಬ್ಬರಿಸಲು ರೆಡಿಯಾಗಿದ್ದಾರೆ. ಇತ್ತೀಚೆಗಿನ ಸಂದರ್ಶನವೊಂದರಲ್ಲಿ ರಿಂಕು ಸಿಂಗ್, ಹಲವು ವಿಚಾರಗಳ ಕುರಿತು ಮನಬಿಚ್ಚಿ ಮಾತನಾಡಿದ್ದಾರೆ. ಈ ಪೈಕಿ ತಮ್ಮ ಕ್ರಿಕೆಟ್ ಮಾಡೆಲ್ ಕುರಿತಂತೆಯೂ ರಿಂಕು ಇದೇ ಮೊದಲ ಬಾರಿಗೆ ತುಟಿಬಿಚ್ಚಿದ್ದಾರೆ. 25 ವರ್ಷದ ರಿಂಕು ಸಿಂಗ್, ತಾವು ಯಾವಾಗಲೂ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅವರನ್ನು ನೋಡಿಯೇ ಬೆಳೆದಿದ್ದಾಗಿ ತಿಳಿಸಿದ್ದಾರೆ. ತಾವು ನಿರಂತರವಾಗಿ ಸುರೇಶ್‌ ರೈನಾ ಅವರ ಸಂಪರ್ಕದಲ್ಲಿದ್ದುದಾಗಿ ತಿಳಿಸಿದ್ದಾರೆ. ಸುರೇಶ್ ರೈನಾ ಅವರು ನೀಡುತ್ತಿದ್ದ ಕೆಲವು ಸಲಹೆ ಸೂಚನೆಗಳಿಂದಾಗಿಯೇ ತಮ್ಮ ಆಟದಲ್ಲಿ ಸುಧಾರಣೆ ಕಂಡುಕೊಳ್ಳಲು ಸಾಧ್ಯವಾಯಿತು ಎಂದಿದ್ದಾರೆ. ಇನ್ನು ಇದೇ ವೇಳೆ ಟೀಂ ಇಂಡಿಯಾ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರ ಬೆಂಬಲವನ್ನು ಸಹ ಮೆಲುಕು ಹಾಕಿದ್ದಾರೆ.

Asian Games 2023: ಭಾರತ ಕ್ರಿಕೆಟ್‌ ತಂಡ ಪ್ರಕಟ, ಗಾಯಕ್ವಾಡ್‌ಗೆ ನಾಯಕ ಪಟ್ಟ, ರಿಂಕು ಸಿಂಗ್‌ಗೆ ಜಾಕ್‌ಪಾಟ್

"ಸುರೇಶ್ ರೈನಾ ನನ್ನ ಪಾಲಿನ ಆದರ್ಶಪ್ರಾಯ ವ್ಯಕ್ತಿ. ನಾನು ಅವರ ಜತೆ ನಿರಂತರ ಸಂಪರ್ಕದಲ್ಲಿದ್ದೇನೆ. ಅವರು ಐಪಿಎಲ್‌ನ ರಾಜ. ಅವರು ಯಾವಾಗಲೂ ನನಗೆ ಉತ್ತಮ ಸಲಹೆಗಳನ್ನು ನೀಡುತ್ತಾ ಬಂದಿದ್ದಾರೆ. ನನ್ನ ಕ್ರಿಕೆಟ್ ಬದುಕಿನ ಬೆಳವಣಿಗೆಯಲ್ಲಿ ಅವರ ಪಾತ್ರವೂ ಇದೆ. ನನ್ನ ಇದರ ಜತೆಗೆ ನನ್ನ ಕ್ರಿಕೆಟ್‌ ಜರ್ನಿ ಬೆಳವಣಿಗೆಯಲ್ಲಿ ಹರ್ಭಜನ್ ಸಿಂಗ್ ಅವರ ಸಹಕಾರವೂ ಇದೆ. ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಯಾವಾಗೆಲ್ಲ ಇಂತಹ ದೊಡ್ಡ ಆಟಗಾರ ಜತೆ ಮಾತನಾಡಿದಾಗ, ನಾವು ಮತ್ತಷ್ಟು ಚೆನ್ನಾಗಿ ಆಡಲು ಪ್ರೇರಣೆ ನೀಡುತ್ತದೆ ಎಂದು ರಿಂಕು ಸಿಂಗ್ RevSportz ಜತೆಗಿನ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ, ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅತ್ಯಂತ ಸ್ಥಿರ ಪ್ರದರ್ಶನ ತೋರುವ ಮೂಲಕ ಮಿಸ್ಟರ್ ಐಪಿಎಲ್ ಎಂದೇ ಕರೆಸಿಕೊಳ್ಳುತ್ತಿದ್ದರು. ಚೆನ್ನೈ ಸೂಪರ್ ಕಿಂಗ್ಸ್ ತಂಡವು ಇದುವರೆಗೂ 5 ಬಾರಿ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ಈ ಪೈಕಿ ರೈನಾ 4 ಬಾರಿ ಸಿಎಸ್‌ಕೆ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

India vs West Indies: 100ನೇ ಟೆಸ್ಟ್‌ ಕದನಕ್ಕೆ ಭಾರತ-ವೆಸ್ಟ್ ಇಂಡೀಸ್ ಸನ್ನದ್ದ..!

2023ರ ಐಪಿಎಲ್ ಟೂರ್ನಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವು ಪ್ಲೇ ಆಫ್‌ ಹಂತ ಪ್ರವೇಶಿಸಲು ವಿಫಲವಾದರೂ ಸಹಾ, ರಿಂಕು ಸಿಂಗ್ ಅದ್ಬುತ ಬ್ಯಾಟಿಂಗ್ ಕ್ರಿಕೆಟ್ ಅಭಿಮಾನಿಗಳ ಮನ ಗೆದ್ದಿತ್ತು. ರಿಂಕು ಸಿಂಗ್, 16ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ 474 ರನ್ ಸಿಡಿಸಿದ್ದರು. ಐಪಿಎಲ್‌ನಲ್ಲಿ ಮಿಂಚಿರುವ ರಿಂಕು ಸಿಂಗ್, ಇದೀಗ ಭಾರತ ತಂಡದಲ್ಲೂ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ. 

ಏಷ್ಯನ್‌ ಗೇಮ್ಸ್‌ಗೆ ಭಾರತ ಕ್ರಿಕೆಟ್ ತಂಡ ಹೀಗಿದೆ:

ಋತುರಾಜ್ ಗಾಯಕ್ವಾಡ್(ನಾಯಕ), ಯಶಸ್ವಿ ಜೈಸ್ವಾಲ್, ರಾಹುಲ್ ತ್ರಿಪಾಠಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಪ್ರಭ್‌ಸಿಮ್ರನ್ ಸಿಂಗ್(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶೆಹಬಾಜ್ ಅಹಮದ್, ರವಿ ಬಿಷ್ಣೋಯ್, ಆವೇಶ್ ಖಾನ್, ಆರ್ಶದೀಪ್ ಸಿಂಗ್, ಮುಕೇಶ್ ಕುಮಾರ್, ಶಿವಂ ಮಾವಿ, ಶಿವಂ ದುಬೆ.

Latest Videos
Follow Us:
Download App:
  • android
  • ios