ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಕೆ ಎಲ್ ರಾಹುಲ್ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಮೂಲಕ 2025ರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆರಂಭಿಕ ಎನಿಸಿಕೊಂಡು, 8 ವರ್ಷಗಳ ಬಳಿಕ ತವರಿನಲ್ಲಿ ಶತಕ ಬಾರಿಸಿದ ಅಪರೂಪದ ಸಾಧನೆ ಮಾಡಿದ್ದಾರೆ.

ಅಹಮದಾಬಾದ್: ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಕೆ ಎಲ್ ರಾಹುಲ್ ವೆಸ್ಟ್ ಇಂಡೀಸ್ ವಿರುದ್ದದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆಕರ್ಷಕ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಆಕರ್ಷಕ ಶತಕ ಸಿಡಿಸುವ ಮೂಲಕ ಅಪರೂಪದ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರವಾಸಿ ವೆಸ್ಟ್ ಇಂಡೀಸ್ ತಂಡವು ಮೊಹಮ್ಮದ್ ಸಿರಾಜ್ ಹಾಗೂ ಜಸ್ಪ್ರೀತ್ ಬುಮ್ರಾ ಮಾರಕ ದಾಳಿಗೆ ತತ್ತರಿಸಿದ ವೆಸ್ಟ್ ಇಂಡೀಸ್ ತಂಡವು ಕೇವಲ 162 ರನ್‌ಗಳಿಗೆ ಸರ್ವಪತನ ಕಂಡಿತು. ಇದಾದ ನಂತರ ಭಾರತ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಉತ್ತಮ ಆರಂಭ ಪಡೆದಿದೆ. ಎರಡನೇ ದಿನದ ಆಟವನ್ನು ಕೆಎಲ್ ರಾಹುಲ್ ಮತ್ತು ಶುಭಮನ್ ಗಿಲ್ ಆರಂಭಿಸಿದರು. ಕೆ ಎಲ್ ರಾಹುಲ್ ಶತಕ ಸಿಡಿಸಿ ವಿಕೆಟ್ ಒಪ್ಪಿಸಿದರು. ರಾಹುಲ್ ಅಹಮದಾಬಾದ್‌ ಟೆಸ್ಟ್‌ನಲ್ಲಿ ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ಧಾರೆ.

ರಾಹುಲ್ ಪಾಲಾದ ಅಪರೂಪದ ದಾಖಲೆಗಳು

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಕೆ ಎಲ್ ರಾಹುಲ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಇದರಿಂದಾಗಿ ಅವರು 2025 ರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆರಂಭಿಕ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಈ ವಿಷಯದಲ್ಲಿ ಅವರು ಇಂಗ್ಲೆಂಡ್‌ನ ಆರಂಭಿಕ ಆಟಗಾರ ಬೆನ್ ಡಕೆಟ್‌ರನ್ನು ಹಿಂದಿಕ್ಕಿದ್ದಾರೆ. ಕೆ ಎಲ್ ರಾಹುಲ್ ಈ ವರ್ಷ 7 ಪಂದ್ಯಗಳ 13 ಇನ್ನಿಂಗ್ಸ್‌ಗಳಲ್ಲಿ 644 ರನ್ ಗಳಿಸಿದ್ದಾರೆ, ಇದರಲ್ಲಿ ಮೂರು ಶತಕ ಮತ್ತು ಮೂರು ಅರ್ಧಶತಕಗಳು ಸೇರಿವೆ. ಅವರು ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಎರಡು ಶತಕಗಳನ್ನು ಬಾರಿಸಿದ್ದರು.

2025ರಲ್ಲಿ ಆರಂಭಿಕನಾಗಿ ಅತಿಹೆಚ್ಚು ರನ್ ಬಾರಿಸಿದ ಬ್ಯಾಟರ್ಸ್‌

644 - ಕೆ ಎಲ್ ರಾಹುಲ್ (13 Inns)

602 - ಬೆನ್‌ ಡಕೆಟ್ (10 Inns)

479 - ಯಶಸ್ವಿ ಜೈಸ್ವಾಲ್ (13 Inns)

461 - ಉಸ್ಮಾನ್ ಖವಾಜಾ (13 Inns)

414 - ಜಾಕ್ ಕ್ರಾಲಿ (10 Inns)

ಆರಂಭಿಕ ಬ್ಯಾಟ್ಸ್‌ಮನ್ ಆಗಿ ಅತಿ ಹೆಚ್ಚು ರನ್ ಗಳಿಸಿದ 5 ಆಟಗಾರರು

ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಕೆಎಲ್ ರಾಹುಲ್ ಇದ್ದಾರೆ, ಅವರು 13 ಇನ್ನಿಂಗ್ಸ್‌ಗಳಲ್ಲಿ 644 ರನ್ ಗಳಿಸಿದ್ದಾರೆ.

ಎರಡನೇ ಸ್ಥಾನದಲ್ಲಿ ಇಂಗ್ಲೆಂಡ್‌ನ ಬೆನ್ ಡಕೆಟ್ ಇದ್ದು, 10 ಇನ್ನಿಂಗ್ಸ್‌ಗಳಲ್ಲಿ 602 ರನ್ ಗಳಿಸಿದ್ದಾರೆ.

ಮೂರನೇ ಸ್ಥಾನದಲ್ಲಿ ಯಶಸ್ವಿ ಜೈಸ್ವಾಲ್ ಇದ್ದಾರೆ, ಅವರು 13 ಇನ್ನಿಂಗ್ಸ್‌ಗಳಲ್ಲಿ 479 ರನ್ ಗಳಿಸಿದ್ದಾರೆ.

ನಾಲ್ಕನೇ ಸ್ಥಾನದಲ್ಲಿ ಉಸ್ಮಾನ್ ಖವಾಜಾ ಇದ್ದಾರೆ, ಅವರು 13 ಇನ್ನಿಂಗ್ಸ್‌ಗಳಲ್ಲಿ 461 ರನ್ ಗಳಿಸಿದ್ದಾರೆ.

ಇನ್ನು, ಐದನೇ ಸ್ಥಾನದಲ್ಲಿ ಝಾಕ್ ಕ್ರಾಲಿ ಇದ್ದು, 10 ಇನ್ನಿಂಗ್ಸ್‌ಗಳಲ್ಲಿ 414 ರನ್ ಗಳಿಸಿದ್ದಾರೆ.

8 ವರ್ಷಗಳ ಬಳಿಕ ತವರಿನಲ್ಲಿ ಮೊದಲ ಶತಕ:

ಟೀಂ ಇಂಡಿಯಾ ಆರಂಭಿಕ ಬ್ಯಾಟರ್ ಕೆ ಎಲ್ ರಾಹುಲ್ ಬರೋಬ್ಬರಿ 8 ವರ್ಷಗಳ ಬಳಿಕ ತವರಿನಲ್ಲಿ ಟೆಸ್ಟ್‌ ಕ್ರಿಕೆಟ್‌ನಲ್ಲಿ ಶತಕ ಸಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೊದಲು ರಾಹುಲ್ 2016ರಲ್ಲಿ ಚೆನ್ನೈನಲ್ಲಿ ನಡೆದ ಇಂಗ್ಲೆಂಡ್ ಎದುರಿನ ಟೆಸ್ಟ್‌ ಪಂದ್ಯದಲ್ಲಿ ಕೊನೆಯ ಬಾರಿಗೆ ಶತಕ ಸಿಡಿಸಿದ್ದರು. ಆಗ ರಾಹುಲ್ 199 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇದಾದ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದಲ್ಲಿ ಮೂರಂಕಿ ಮೊತ್ತ ದಾಖಲಿಸಲು ರಾಹುಲ್‌ಗೆ ಸಾಧ್ಯವಾಗಿರಲಿಲ್ಲ. ಇದೀಗ ರಾಹುಲ್ 197 ಎಸೆತಗಳನ್ನು ಎದುರಿಸಿ 12 ಬೌಂಡರಿ ಸಹಿತ 100 ರನ್ ಗಳಿಸಿ ವಾರಿಕನ್‌ಗೆ ವಿಕೆಟ್ ಒಪ್ಪಿಸಿದರು.