ಇಲ್ಲಿನ ಚಿದಂಬರಂ ಸ್ಟೇಡಿಯಂನಲ್ಲಿ ಗೆಲ್ಲಲು ಕೇವಲ 114 ರನ್ ಗುರಿ ಪಡೆದ ಕೋಲ್ಕತಾ ನೈಟ್ ರೈಡರ್ಸ್ ತಂಡವು ಇನ್ನೂ 57 ಎಸೆತ ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತು. ಶಾರುಖ್ ಖಾನ್ ಒಡೆತನದ ಗೌತಮ್ ಗಂಭೀರ್ ಮೆಂಟರ್ ಆಗಿರುವ ತಂಡ ಮತ್ತೊಮ್ಮೆ ಐಪಿಎಲ್ ಟ್ರೋಫಿ ಎತ್ತಿಹಿಡಿಯುವಲ್ಲಿ ಯಶಸ್ವಿಯಾಯಿತು. 

ಚೆನ್ನೈ(ಮೇ.26): 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತಾ ನೈಟ್ ರೈಡರ್ಸ್ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಎರಡನೇ ಬಾರಿಗೆ ಐಪಿಎಲ್‌ ಟ್ರೋಫಿಗೆ ಮುತ್ತಿಕ್ಕುವ ಕಾವ್ಯಾ ಮಾರನ್ ಒಡೆತನದ ಸನ್‌ರೈಸರ್ಸ್ ಹೈದರಾಬಾದ್ ತಂಡದ ಕನಸು ನುಚ್ಚುನೂರು ಮಾಡಿದ ಕೆಕೆಆರ್, ಮೂರನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಇಲ್ಲಿನ ಚಿದಂಬರಂ ಸ್ಟೇಡಿಯಂನಲ್ಲಿ ಗೆಲ್ಲಲು ಕೇವಲ 114 ರನ್ ಗುರಿ ಪಡೆದ ಕೋಲ್ಕತಾ ನೈಟ್ ರೈಡರ್ಸ್ ತಂಡವು ಇನ್ನೂ 57 ಎಸೆತ ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತು. ಶಾರುಖ್ ಖಾನ್ ಒಡೆತನದ ಗೌತಮ್ ಗಂಭೀರ್ ಮೆಂಟರ್ ಆಗಿರುವ ತಂಡ ಮತ್ತೊಮ್ಮೆ ಐಪಿಎಲ್ ಟ್ರೋಫಿ ಎತ್ತಿಹಿಡಿಯುವಲ್ಲಿ ಯಶಸ್ವಿಯಾಯಿತು.

Scroll to load tweet…

IPL 2024: ಐಪಿಎಲ್‌ ಫೈನಲ್‌ನಲ್ಲಿ ಅತ್ಯಂತ ಕನಿಷ್ಠ ಮೊತ್ತ ದಾಖಲಿಸಿದ ಸನ್‌ರೈಸರ್ಸ್‌!

ಗೆಲ್ಲಲು ಸಾಧಾರಣ ಗುರಿ ಬೆನ್ನತ್ತಿದ ಕೆಕೆಆರ್ ತಂಡವು ಆರಂಭದಲ್ಲೇ ಸುನಿಲ್ ನರೈನ್ ವಿಕೆಟ್ ಕಳೆದುಕೊಂಡಿತು. ಆದರೆ ಎರಡನೇ ವಿಕೆಟ್‌ಗೆ ರೆಹಮನುಲ್ಲಾ ಗುರ್ಬಾಜ್ ಹಾಗೂ ವೆಂಕಟೇಶ್ ಅಯ್ಯರ್ ಕೇವಲ 45 ಎಸೆತಗಳಲ್ಲಿ 91 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಗುರ್ಬಾಜ್ 39 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರೆ, ವೆಂಕಟೇಶ್ ಅಯ್ಯರ್ ಅಜೇಯ 51 ರನ್ ಸಿಡಿಸಿ ಗೆಲುವಿನ ರೂವಾರಿ ಎನಿಸಿದರು.

Scroll to load tweet…

ಇದಕ್ಕೂ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಸನ್‌ರೈಸರ್ಸ್ ಹೈದರಾಬಾದ್‌ ತಂಡವು ಮಿಚೆಲ್ ಸ್ಟಾರ್ಕ್ ಮಾರಕ ದಾಳಿಗೆ ತತ್ತರಿಸಿ ಹೋಯಿತು. ಇನ್‌ ಫಾರ್ಮ್ ಬ್ಯಾಟರ್ ಅಭಿಷೇಕ್ ಶರ್ಮಾ ಅವರನ್ನು ಮೊದಲ ಓವರ್‌ನಲ್ಲೇ ಪೆವಿಲಿಯನ್ನಿಗಟ್ಟುವಲ್ಲಿ ಯಶಸ್ವಿಯಾದರು. ಇನ್ನು ಟ್ರ್ಯಾವಿಸ್ ಹೆಡ್ ಮತ್ತೊಮ್ಮೆ ಖಾತೆ ತೆರೆಯುವ ಮುನ್ನವೇ ವಿಕೆಟ್ ಒಪ್ಪಿಸುವ ಮೂಲಕ ಮತ್ತೊಮ್ಮೆ ಶೂನ್ಯ ಸುತ್ತಿ ನಿರಾಸೆ ಅನುಭವಿಸಿದರು.

'RCB-CSK ಮ್ಯಾಚೇ ಸಖತ್‌ ಆಗಿತ್ತು..' ಕೆಕೆಆರ್‌ ಚಾಂಪಿಯನ್‌ ಆದ ಬೆನ್ನಲ್ಲೇ Worst IPL Final ಟ್ರೆಂಡಿಂಗ್‌!

ಇನ್ನು ಮಧ್ಯಮ ಕ್ರಮಾಂಕದಲ್ಲಿ ಏಯ್ಡನ್ ಮಾರ್ಕ್‌ರಮ್(20), ನಿತೀಶ್ ರೆಡ್ಡಿ(13), ಹೆನ್ರಿಚ್ ಕ್ಲಾಸೆನ್(16) ಹಾಗೂ ನಾಯಕ ಪ್ಯಾಟ್ ಕಮಿನ್ಸ್(24) ಹೊರತುಪಡಿಸಿ ಉಳಿದ್ಯಾವ ಬ್ಯಾಟರ್‌ಗಳು ಎರಡಂಕಿ ಮೊತ್ತ ದಾಖಲಿಸಲು ಯಶಸ್ವಿಯಾಗಲಿಲ್ಲ. 

ಕೆಕೆಆರ್ ಪರ ಮಾರಕ ದಾಳಿ ನಡೆಸಿದ ಆಂಡ್ರೆ ರಸೆಲ್ 19 ರನ್ ನೀಡಿ 3 ವಿಕೆಟ್ ಪಡೆದರೆ, ಸ್ಟಾರ್ಕ್ ಹಾಗೂ ಹರ್ಷಿತ್ ರಾಣಾ ತಲಾ ಎರಡು ವಿಕೆಟ್ ಕಬಳಿಸಿದರು. ಇನ್ನು ವರುಣ್ ಚಕ್ರವರ್ತಿ, ವೈಭವ್ ಅರೋರ, ಸುನಿಲ್ ನರೈನ್ ತಲಾ ಒಂದೊಂದು ವಿಕೆಟ್ ಹಂಚಿಕೊಂಡರು.

10 ವರ್ಷಗಳ ಬಳಿಕ ಟ್ರೋಫಿ ಗೆದ್ದ ಕೆಕೆಆರ್: ಕೋಲ್ಕತಾ ನೈಟ್ ರೈಡರ್ಸ್ ತಂಡವು ಗೌತಮ್ ಗಂಭೀರ್ ನಾಯಕತ್ವದಲ್ಲಿ 2014ರಲ್ಲಿ ಕೊನೆಯ ಬಾರಿಗೆ ಚಾಂಪಿಯನ್ ಆಗಿತ್ತು. ಇದೀಗ ಬರೋಬ್ಬರಿ 10 ವರ್ಷಗಳ ಬಳಿಕ ಗಂಭೀರ್ ಮಾರ್ಗದರ್ಶನದಲ್ಲಿ ಕೆಕೆಆರ್ ತಂಡವು ಮತ್ತೊಮ್ಮೆ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿದೆ.

ಐಪಿಎಲ್ ಟ್ರೋಫಿ ಗೆದ್ದ 5ನೇ ಭಾರತೀಯ ಕ್ಯಾಪ್ಟನ್ ಅಯ್ಯರ್: ಹೌದು, ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ 5ನೇ ಭಾರತೀಯ ಕ್ಯಾಪ್ಟನ್ ಎನ್ನುವ ಹಿರಿಮೆಗೆ ಶ್ರೇಯಸ್ ಅಯ್ಯರ್ ಪಾತ್ರರಾಗಿದ್ದಾರೆ. ಈ ಮೊದಲು ಎಂ ಎಸ್ ಧೋನಿ, ರೋಹಿತ್ ಶರ್ಮಾ, ಗೌತಮ್ ಗಂಭೀರ್ ಹಾಗೂ ಹಾರ್ದಿಕ್ ಪಾಂಡ್ಯ ನಾಯಕರಾಗಿ ತಮ್ಮ ತಂಡವನ್ನು ಚಾಂಪಿಯನ್ ಪಟ್ಟಕ್ಖೇರಿಸಿದ್ದರು.