COVID-19 ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ನೀಡಿದ ಕರ್ನಾಟಕ ಕ್ರಿಕೆಟ್ ಸಂಸ್ಥೆ!

ಕೊರೋನಾ ವೈರಸ್ ಹೊಡೆತಕ್ಕೆ ಸಂಪೂರ್ಣ ಭಾರತವೇ ನಲುಗಿ ಹೋಗಿದೆ. ಇತ್ತ ವೈರಸ್ ತೊಲಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೋರಾಟ ನಡೆಸುತ್ತಿದೆ. ಈಗಾಗಲೇ ಭಾರತವನ್ನು 21 ದಿನಗಳ ಕಾಲ ಲಾಕ್‌ಡೌನ್ ಮಾಡಲಾಗಿದೆ.  ಕೊವಿಡ್-19 ವಿರುದ್ಧದ ಸರ್ಕಾರದ ಹೋರಾಟಕ್ಕೆ ಇದೀಗ ಕ್ರಿಕೆಟಿಗರು, ಸೆಲೆಬ್ರೆಟಿಗಳು, ಸಂಘ ಸಂಸ್ಥಗಳು ಕೋಟಿ ಕೋಟಿ ರೂಪಾಯಿ ನೀಡುತ್ತಿದೆ. ಇದೀಗ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಬರೋಬ್ಬರಿ 1 ಕೋಟಿ ರೂಪಾಯಿ ನೀಡಿದೆ.
 

KSCA contribute rs 1 crore rupee to COVID-19 relief fund

ಬೆಂಗಳೂರು(ಮಾ.29):  ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(KSCA) ಕೈಜೋಡಿಸಿದೆ. ಕೋವಿಡ್-19 ಪರಿಹಾರ ನಿಧಿಗೆ ಒಟ್ಟು 1 ಕೋಟಿ ರೂಪಾಯಿ ನೀಡಿದೆ. ಇದರಲ್ಲಿ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿ ಹಾಗೂ ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿ ಸೇರಿದಂತೆ ಒಟ್ಟು 1 ಕೋಟಿ ರೂಪಾಯಿ ಹಣವನ್ನು ನೀಡಿದೆ. ಈ ಮೂಲಕ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಸರ್ಕಾರದ ಜೊತೆ ಸದಾ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ನಿಲ್ಲಲಿದೆ ಎಂದಿದೆ.

ಕೊರೋನಾ ಸಂಕಷ್ಟ: ದೇಶಕ್ಕೆ ಬರೋಬ್ಬರಿ 51 ಕೋಟಿ ರುಪಾಯಿ ದೇಣಿಗೆ ನೀಡಿದ ಬಿಸಿಸಿಐ..!

KSCA ಅಧ್ಯಕ್ಷ ರೋಜರ್ ಬಿನ್ನಿ ಹಾಗೂ ಪದಾಧಿಕಾರಿಗಳು ದೇಣಿಗೆ ಮೊತ್ತವನ್ನು ಘೋಷಿಸಿದ್ದಾರೆ. ದೇಶ ಮಾತ್ರವಲ್ಲ ವಿಶ್ವವೇ ಆರೋಗ್ಯ ತುರ್ತು ಪರಿಸ್ಥಿತಿ ಎದರಿಸುತ್ತಿದೆ. ಕೊರೋನಾ ವೈರಸ್ ವಿರುದ್ಧದ ಸರ್ಕಾರದ ಹೋರಾಟಕ್ಕೆ KSCA ಸಂಪೂರ್ಣ ಬೆಂಬಲ ನೀಡಲಿದೆ. ಇದಕ್ಕಾಗಿ  ಕರ್ನಾಟಕ ಸರ್ಕಾರ ಹಾಗೂ ಸರ್ಕಾರದ ವಿವಿದ ಇಲಾಖೆ ಜೊತೆ ಕೈಜೋಡಿಸಲಿದ್ದೇವೆ. ಇಷ್ಟೇ ಅಲ್ಲ ಎಲ್ಲಾ ರೀತಿಯ ಸಹಾಯ ಮಾಡಲು ಸದಾ ಸಿದ್ದರಾಗಿದ್ದೇವೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಖಜಾಂಚಿ ಹಾಗೂ ಮಾಧ್ಯಮ ವಕ್ತಾರ ವಿನಯ್ ಮೃತ್ಯುಂಜಯ್ ಹೇಳಿದ್ದಾರೆ.

ಕೊರೋನಾ ವೈರಸ್ ವಿರುದ್ಧ ಹೋರಾಟ; ಸರ್ಕಾರಕ್ಕೆ 50 ಲಕ್ಷ ರೂ ನೀಡಿದ ಸಚಿನ್ ತೆಂಡುಲ್ಕರ್

ಬಿಸಿಸಿಐ ಈಗಾಗಲೇ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ 51 ಕೋಟಿ ರೂಪಾಯಿ ನೀಡಿದೆ. ಆರೋಗ್ಯ ಪ್ರಮುಖ ಆದ್ಯತೆಯಾಗಿದೆ. ಕೇಂದ್ರ ಸರ್ಕಾರಕ್ಕೆ ಬಿಸಿಸಿಐ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಕೊರೋನಾ ವೈರಸ್‌ನಿಂದ ಹರಡುತ್ತಿದ್ದಂತೆ ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಸರಣಿಯನ್ನು ಬಿಸಿಸಿಐ ರದ್ದುಗೊಳಿಸಿತು. ಇನ್ನು ಮಾರ್ಚ್ 29ಕ್ಕೆ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿಯನ್ನೂ ರದ್ದು ಮಾಡಿದೆ.

Latest Videos
Follow Us:
Download App:
  • android
  • ios