ಗುವಾಹಟಿ(ಜ.03): ಭಾರತ ವಿರುದ್ಧ 3 ಪಂದ್ಯಗಳ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲಿರುವ ಶ್ರೀಲಂಕಾ ತಂಡ, ಭಾನುವಾರ ನಡೆಯಲಿರುವ ಮೊದಲ ಪಂದ್ಯವನ್ನಾಡಲು ಗುರುವಾರ ಇಲ್ಲಿಗೆ ಆಗಮಿಸಿತು. ಲಸಿತ್‌ ಮಾಲಿಂಗ ನೇತೃತ್ವದ ತಂಡವನ್ನು ಬಿಗಿ ಭದ್ರತೆ ನಡುವೆ ವಿಮಾನ ನಿಲ್ದಾಣದಿಂದ ಹೋಟೆಲ್‌ಗೆ ಕರೆದೊಯ್ಯಲಾಯಿತು. 

ಇದನ್ನೂ ಓದಿ: ಭಾರತ vs ಶ್ರೀಲಂಕಾ ಟಿ20 ಸರಣಿ ವೇಳಾಪಟ್ಟಿ, ತಂಡದ ವಿವರ ಇಲ್ಲಿದೆ!

ಪೌರತ್ವ ಮಸೂದೆ ವಿರೋಧಿಸಿ ಇತ್ತೀಚೆಗೆಗಷ್ಟೇ ಇಲ್ಲಿ ಭಾರೀ ಪ್ರತಿಭಟನೆ ನಡೆದಿತ್ತು. ರಣಜಿ ಟ್ರೋಫಿ ಹಾಗೂ ಅಂಡರ್‌-19 ಪಂದ್ಯಗಳು ರದ್ದುಗೊಂಡಿದ್ದವು. ಹೀಗಾಗಿ ಪಂದ್ಯ ನಡೆಯುವುದು ಅನುಮಾನ ಎನ್ನಲಾಗಿತ್ತು. ಆದರೆ ಸದ್ಯ ಪರಿಸ್ಥಿತಿ ಶಾಂತವಾಗಿದ್ದು, ಪಂದ್ಯ ನಡೆಸಲು ಯಾವುದೇ ಅಡ್ಡಿಯಿಲ್ಲ ಎಂದು ಅಸ್ಸಾಂ ಕ್ರಿಕೆಟ್‌ ಸಂಸ್ಥೆ ಅಧಿಕಾರಿ ತಿಳಿಸಿದ್ದಾರೆ. 

ಇದನ್ನೂ ಓದಿ: ಭಾರತ-ಆಸೀಸ್‌ ಬೆಂಗಳೂರು ಪಂದ್ಯ: ನಾಳೆಯಿಂದ ಟಿಕೆಟ್‌ ಮಾರಾಟ

ಶುಕ್ರವಾರ ಭಾರತ ತಂಡದ ಆಟಗಾರರು ಆಗಮಿಸಲಿದ್ದು, ಸಂಜೆ ಅಭ್ಯಾಸ ನಡೆಸುವ ಸಾಧ್ಯತೆ ಇದೆ. 2ನೇ ಟಿ20 ಪಂದ್ಯ ಜ.7ರಂದು ಇಂದೋರ್‌ನಲ್ಲಿ ನಡೆದರೆ, ಜ.10ಕ್ಕೆ ಪುಣೆಯಲ್ಲಿ ಅಂತಿಮ ಪಂದ್ಯ ನಡೆಯಲಿದೆ. ಟಿ20 ವಿಶ್ವಕಪ್‌ ದೃಷ್ಟಿಯಿಂದ ಎರಡೂ ತಂಡಗಳಿಗೆ ಈ ಸರಣಿ ಮಹತ್ವದೆನಿಸಿದೆ.

ಭಾರತ ತಂಡ:
ವಿರಾಟ್ ಕೊಹ್ಲಿ(ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ರವೀಂದ್ರ ಜಡೇಜಾ, ಶಿವಂ ದುಬೆ, ಯಜುವೇಂದ್ರ ಚಹಾಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ನವದೀಪ್ ಸೈನಿ, ಶಾರ್ದೂಲ್ ಠಾಕೂ್, ಮನೀಶ್ ಪಾಂಡೆ, ವಾಶಿಂಗ್ಟನ್ ಸುಂದರ್, ಸಂಜು ಸಾಮ್ಸನ್