ಸೋಷಿಯಲ್ ಮೀಡಿಯಾದಲ್ಲಿ ಧೂಳೇಬ್ಬಿಸಿದ ಧೋನಿ ನ್ಯೂ ಲುಕ್..! ಯಾರಿದು ಹೀರೋ ಎಂದ ಫ್ಯಾನ್ಸ್

ಪ್ರಖ್ಯಾತ ಕೇಶ ವಿನ್ಯಾಸಕಾರರಾಗಿರುವ ಅಲಿಮ್ ಹಕೀಂ, ಇದೀಗ ಧೋನಿಗೆ ಮತ್ತೊಮ್ಮೆ ಹೊಸ ಹೇರ್‌ಸ್ಟೈಲ್ ಮಾಡಿದ್ದು, ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಧೂಳೇಬ್ಬಿಸಿದ್ದು, ಯಾರಿದು ಹೀರೋ ಎಂದು ಅಭಿಮಾನಿಗಳು ಉದ್ಘಾರ ತೆಗೆದಿದ್ದಾರೆ.

Long Haired MS Dhoni Returns To Take Social Media By Storm pic goes viral kvn

ಬೆಂಗಳೂರು(ಅ.03): ಭಾರತ ಕ್ರಿಕೆಟ್ ಕಂಡ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿ, ಕಳೆದ ಒಂದೂವರೆ ದಶಕಗಳ ಕ್ರಿಕೆಟ್ ಬದುಕಿನಲ್ಲಿ ಹಲವಾರು ಬಾರಿ ತಮ್ಮ ಹೇರ್‌ಸ್ಟೈಲ್ ಮೂಲಕವೇ ಗಮನ ಸೆಳೆದಿದ್ದಾರೆ. ಈ ಪೈಕಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದಾಗಿನಿಂದ ಹಿಡಿದು 2007ರ ಐಸಿಸಿ ಟಿ20 ವಿಶ್ವಕಪ್ ಗೆಲ್ಲುವವರೆಗೆ ಇದ್ದ ಉದ್ದದ ಹೇರ್‌ಸ್ಟೈಲ್ ಹೆಚ್ಚು ಗಮನ ಸೆಳೆದಿತ್ತು. ಒಮ್ಮೆ ಭಾರತ ತಂಡವು ಪಾಕಿಸ್ತಾನ ಪ್ರವಾಸ ಮಾಡಿದ್ದಾಗ ಪಾಕಿಸ್ತಾನದ ಪ್ರಧಾನಿಯಾಗಿದ್ದ ಪರ್ವೇಜ್‌ ಮುಷರಫ್ ಕೂಡಾ ಧೋನಿ ಹೇರ್‌ಸ್ಟೈಲ್ ಗುಣಗಾನ ಮಾಡಿದ್ದನ್ನು ಯಾವ ಕ್ರಿಕೆಟ್ ಅಭಿಮಾನಿಯೂ ಮರೆಯಲು ಸಾಧ್ಯವಿಲ್ಲ. ಇದೀಗ ಧೋನಿ ಕ್ರಿಕೆಟ್ ವೃತ್ತಿಬದುಕಿನ ಸಂಧ್ಯಾಕಾಲದಲ್ಲಿದ್ದು, ಮತ್ತೊಮ್ಮೆ ವಿಂಟೇಜ್ ಧೋನಿಯನ್ನು ಕಣ್ತುಂಬಿಕೊಳ್ಳುವ ಅವಕಾಶ ಅಭಿಮಾನಿಗಳಿಗೆ ಬಂದೊದಗಿದೆ.

ಪ್ರಖ್ಯಾತ ಕೇಶ ವಿನ್ಯಾಸಕಾರರಾಗಿರುವ ಅಲಿಮ್ ಹಕೀಂ, ಇದೀಗ ಧೋನಿಗೆ ಮತ್ತೊಮ್ಮೆ ಹೊಸ ಹೇರ್‌ಸ್ಟೈಲ್ ಮಾಡಿದ್ದು, ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಧೂಳೇಬ್ಬಿಸಿದ್ದು, ಯಾರಿದು ಹೀರೋ ಎಂದು ಅಭಿಮಾನಿಗಳು ಉದ್ಘಾರ ತೆಗೆದಿದ್ದಾರೆ.

ವಿಶ್ವಕಪ್‌ಗೂ ಬೆಂಬಿಡದ ವಿವಾದಗಳು! ಟೂರ್ನಿ ಆರಂಭಕ್ಕೂ ಮುನ್ನವೇ ಗಮನ ಸೆಳೆದ ಕಾಂಟ್ರೊವರ್ಸಿಗಳಿವು

ಈ ಕುರಿತಂತೆ ಧೋನಿಯ ಜತೆಗಿನ ಒಡನಾಟವನ್ನು ಹಾಗೂ ಅವರ ಹೇರ್‌ ಸ್ಟೈಲ್‌ ಬಗ್ಗೆ ಅಲೀಮ್ ಹಕೀಂ ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ. 

 
 
 
 
 
 
 
 
 
 
 
 
 
 
 

A post shared by Aalim Hakim (@aalimhakim)

ಕ್ಯಾಪ್ಟನ್ ಕೂಲ್ ಖ್ಯಾತಿಯ ಎಂ ಎಸ್ ಧೋನಿ, 2020ರ ಆಗಸ್ಟ್ 15ರಂದು ದಿಢೀರ್ ಎನ್ನುವಂತೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು. ಇದಾದ ಬಳಿಕ ಕೇವಲ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಮಾತ್ರ ಧೋನಿ ಮೈದಾನಕ್ಕಿಳಿಯುತ್ತಿದ್ದಾರೆ. ಇದೀಗ ಸದ್ಯ ಬಿಡುವಿನ ಸಮಯವನ್ನು ಬಿಂದಾಸ್ ಆಗಿ ಎಂಜಾಯ್ ಮಾಡುತ್ತಿರುವ ಧೋನಿ, ಕೆಲವೊಂದು ಕಮರ್ಷಿಯಲ್ ಆಡ್‌ನಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಈ ಹೇರ್‌ಸ್ಟೈಲ್‌ ಮಾಡಿಸಿಕೊಂಡಿದ್ದಾರೆ. 

ICC World Cup 2023: ವಿಶ್ವ ಸಮರಕ್ಕೆ 10 ಸೈನ್ಯಗಳು ಸನ್ನದ್ದ..!

2024ರ ಐಪಿಎಲ್ ಆಡ್ತಾರಾ ಧೋನಿ?

ಇನ್ನು ಕ್ರಿಕೆಟ್ ವಿಚಾರಕ್ಕೆ ಬರುವುದಾದರೇ ಕೆಲ ತಿಂಗಳ ಹಿಂದಷ್ಟೇ ಮುಕ್ತಾಯವಾದ 2023ರ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎಂ ಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ದಾಖಲೆಯ 5ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. 16ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಬಗ್ಗುಬಡಿದು 5ನೇ ಬಾರಿಗೆ ಕಪ್‌ ಗೆಲ್ಲುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತಿಹೆಚ್ಚು ಟ್ರೋಫಿ ಗೆದ್ದ ತಂಡಗಳ ಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ಜತೆ ಜಂಟಿ ಅಗ್ರಸ್ಥಾನ ಹಂಚಿಕೊಂಡಿದೆ. ಇನ್ನು ದೇಹ ಸ್ಪಂದಿಸಿದರೆ ತಾವು 2024ರ ಐಪಿಎಲ್ ಆಡುವುದಾಗಿ ಧೋನಿ ಈಗಾಗಲೇ ಘೋಷಿಸಿದ್ದಾರೆ. 2024ರ ಐಪಿಎಲ್‌ವರೆಗೂ ಧೋನಿ ಫಿಟ್ ಇರುತ್ತಾರಾ ಅಥವಾ ಇಲ್ಲವೇ ಎನ್ನುವುದನ್ನು ಕಾದು ನೋಡಬೇಕಿದೆ.

Latest Videos
Follow Us:
Download App:
  • android
  • ios