ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ಆಡುವುದು ಅನುಮಾನ..!
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ಆಡುವುದು ಅನುಮಾನ ಎಂದು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
ಸಿಡ್ನಿ(ನ.27): ಇಶಾಂತ್ ಶರ್ಮಾ ಹಾಗೂ ರೋಹಿತ್ ಶರ್ಮಾ, ಆಸ್ಪ್ರೇಲಿಯಾದಲ್ಲೇ ಗಾಯದ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದರೆ ಬಹುಶಃ ಆಸೀಸ್ ವಿರುದ್ಧದ ಟೆಸ್ಟ್ ಸರಣಿ ಆಡುವ ಉತ್ತಮ ಅವಕಾಶ ಹೊಂದಿರುತ್ತಿದ್ದರು ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಆಸೀಸ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯಕ್ಕೂ ಮುನ್ನ ದಿನವಾದ ಗುರುವಾರ ವಿಡಿಯೋ ಕಾನ್ಫರೆನ್ಸ್ ಪತ್ರಿಕಾಗೋಷ್ಠಿಯಲ್ಲಿ ಕೊಹ್ಲಿ ಮಾತನಾಡಿದರು.
ಐಪಿಎಲ್‌ನಲ್ಲಿ ಕೂಡಾ ಈ ಇಬ್ಬರು ಆಟಗಾರರು ಗಾಯಗೊಂಡಿದ್ದರು. ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಅದೇ ರೀತಿ ಇಶಾಂತ್, ರೋಹಿತ್ ಆಸೀಸ್‌ನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರೆ ಮೊದಲ ಟೆಸ್ಟ್‌ನಲ್ಲಿ ಆಡುವ ಸಾಧ್ಯತೆ ಹೆಚ್ಚಿತ್ತು ಎಂದು ಕೊಹ್ಲಿ ಹೇಳಿದ್ದಾರೆ. ಈ ಮೂಲಕ ಪರೋಕ್ಷವಾಗಿ ಈ ಇಬ್ಬರು ಆಟಗಾರರು ಟೆಸ್ಟ್ ಸರಣಿಯಲ್ಲಿ ಆಡುವುದು ಅನುಮಾನ ಎಂದು ಕೊಹ್ಲಿ ಹೇಳಿದ್ದಾರೆ.
ಆಸೀಸ್ ಎದುರು ಏಕದಿನ ತಂಡ ಕೂಡಿಕೊಂಡ ಟೀಂ ಇಂಡಿಯಾ ಯಾರ್ಕರ್ ಸ್ಪೆಷಲಿಸ್ಟ್
13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಬಳಿಕ ಕೆಲ ಪಂದ್ಯಗಳ ಮಟ್ಟಿಗೆ ವಿಶ್ರಾಂತಿ ಪಡೆದು, ಫೈನಲ್ ಪಂದ್ಯದಲ್ಲಿ ಭರ್ಜರಿ ಅರ್ಧಶತಕ ಬಾರಿಸಿ ಮುಂಬೈ ಇಂಡಿಯನ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೆಲ್ಲದರ ಹೊರತಾಗಿಯೂ ಫಿಟ್ನೆಸ್ ಸಮಸ್ಯೆಯಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಓವರ್‌ಗಳ ಸರಣಿಯಲ್ಲಿ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಹಿಟ್‌ಮ್ಯಾನ್ ವಿಫಲವಾಗಿದ್ದರು.
ಇನ್ನು ಡಿಸೆಂಬರ್ 17ರಿಂದ ಆರಂಭವಾಗಲಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ರೋಹಿತ್ ಶರ್ಮಾ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದರಾದರೂ ಮೊದಲೆರಡು ಪಂದ್ಯಗಳಲ್ಲಿ ಆಡುವುದು ಅನುಮಾನ ಎನ್ನುವಂತಹ ಮಾತುಗಳು ಕೇಳಿ ಬಂದಿದ್ದವು.