Asianet Suvarna News Asianet Suvarna News

ವಿಶ್ವಕಪ್‌ಗೆ ಕೌಂಟ್‌ಡೌನ್ ಬೆನ್ನಲ್ಲೇ ಗ್ಲೆನ್ ಮ್ಯಾಕ್ಸ್‌ವೆಲ್‌ಗೆ ಗಾಯ..! ಆಸೀಸ್ ಪಾಳಯದಲ್ಲಿ ಆತಂಕ

ದಕ್ಷಿಣ ಆಫ್ರಿಕಾ ಎದುರಿನ ಮೂರು ಪಂದ್ಯಗಳ ಟಿ20 ಸರಣಿಯ ಬಳಿಕ ಗ್ಲೆನ್‌ ಮ್ಯಾಕ್ಸ್‌ ತವರಿಗೆ ವಾಪಸ್ಸಾಗಲು ತೀರ್ಮಾನಿಸಿದ್ದರು. ಟಿ20 ಸರಣಿ ಮುಕ್ತಾಯದ ಬಳಿಕ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಮ್ಯಾಕ್ಸ್‌ವೆಲ್‌, ತವರಿಗೆ ವಾಪಸ್ಸಾಗಲು ತೀರ್ಮಾನಿಸಿದ್ದರು. ಆದರೆ ಇದೀಗ ದಕ್ಷಿಣ ಆಫ್ರಿಕಾ ಎದುರಿನ ಟಿ20 ಸರಣಿ ಆರಂಭಕ್ಕೂ ಮುನ್ನವೇ ತಂಡದಿಂದ ಹೊರಬಿದ್ದಿದ್ದಾರೆ.

Matthew Wade replaces injured Glenn Maxwell in Australia squad for South Africa tour kvn
Author
First Published Aug 28, 2023, 2:29 PM IST

ಬೆಂಗಳೂರು(ಆ.28): ಮುಂಬರುವ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ 5 ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ತಂಡಕ್ಕೆ ಬಿಗ್‌ ಶಾಕ್ ಎದುರಾಗಿದೆ. ತಂಡದ ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್‌, ದಕ್ಷಿಣ ಆಫ್ರಿಕಾ ಎದುರಿನ ಟಿ20 ಸರಣಿಗೂ ಮುನ್ನ ಡರ್ಬನ್‌ನಲ್ಲಿ ಅಭ್ಯಾಸ ಶಿಬಿರದಲ್ಲಿ ಪಾಲ್ಗೊಂಡ ವೇಳೆ ಪಾದದ ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಅವರು ತವರಿಗೆ ವಾಪಾಸ್ಸಾಗಿದ್ದಾರೆ. ಇದೀಗ ದಕ್ಷಿಣ ಆಫ್ರಿಕಾ ಎದುರಿನ ಸೀಮಿತ ಓವರ್‌ಗಳ ಸರಣಿಗೆ ಮ್ಯಾಕ್ಸ್‌ವೆಲ್ ಬದಲಿಗೆ ಅನುಭವಿ ವಿಕೆಟ್ ಕೀಪರ್ ಬ್ಯಾಟರ್ ಮ್ಯಾಥ್ಯೂ ವೇಡ್ ಆಸೀಸ್ ತಂಡ ಕೂಡಿಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾ ಎದುರಿನ ಮೂರು ಪಂದ್ಯಗಳ ಟಿ20 ಸರಣಿಯ ಬಳಿಕ ಗ್ಲೆನ್‌ ಮ್ಯಾಕ್ಸ್‌ ತವರಿಗೆ ವಾಪಸ್ಸಾಗಲು ತೀರ್ಮಾನಿಸಿದ್ದರು. ಟಿ20 ಸರಣಿ ಮುಕ್ತಾಯದ ಬಳಿಕ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಮ್ಯಾಕ್ಸ್‌ವೆಲ್‌, ತವರಿಗೆ ವಾಪಸ್ಸಾಗಲು ತೀರ್ಮಾನಿಸಿದ್ದರು. ಆದರೆ ಇದೀಗ ದಕ್ಷಿಣ ಆಫ್ರಿಕಾ ಎದುರಿನ ಟಿ20 ಸರಣಿ ಆರಂಭಕ್ಕೂ ಮುನ್ನವೇ ತಂಡದಿಂದ ಹೊರಬಿದ್ದಿದ್ದಾರೆ.

"ಸ್ಕ್ಯಾನ್‌ ಹಾಗೂ ವೈದ್ಯಕೀಯ ಸಿಬ್ಬಂದಿ ಸಲಹೆ ಮೇರೆಗೆ ದಕ್ಷಿಣ ಆಫ್ರಿಕಾ ಎದುರಿನ ಮೂರು ಪಂದ್ಯಗಳ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

World Cup 2023: ವಿಶ್ವಕಪ್‌ಗೆ 18 ಆಟಗಾರರನ್ನೊಳಗೊಂಡ ಬಲಿಷ್ಠ ಸಂಭಾವ್ಯ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ..!

ಗ್ಲೆನ್‌ ಮ್ಯಾಕ್ಸ್‌ವೆಲ್‌ ಅವರ ಗಾಯದ ಮೇಲೆ ನಾವು ನಿಗಾ ಇಟ್ಟಿದ್ದೇವೆ. ಭಾರತ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಅವರನ್ನು ಆಯ್ಕೆ ಮಾಡುವ ಕುರಿತಂತೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಆಯ್ಕೆ ಸಮಿತಿಯ ಟೋನಿ ಡೊಡಮೈಡ್ ತಿಳಿಸಿದ್ದಾರೆ. ಭಾರತ ಎದುರಿನ 3 ಪಂದ್ಯಗಳ ಏಕದಿನ ಸರಣಿಯ ಬಳಿಕ ಭಾರತದಲ್ಲೇ ಅಕ್ಟೋಬರ್ 05ರಿಂದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಆರಂಭವಾಗಲಿದೆ. ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ 3 ಪಂದ್ಯಗಳ ಟಿ20 ಸರಣಿಯ ಬಳಿಕ, ಹರಿಣಗಳ ಪಡೆ ಎದುರು 5 ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. 

ಒಂದು ದಿನ ಮುಂಚಿತವಾಗಿಯೇ ಏಕದಿನ ವಿಶ್ವಕಪ್‌ ಉದ್ಘಾಟನಾ ಸಮಾರಂಭ..!

2021ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ತಂಡವು ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಮ್ಯಾಥ್ಯೂ ವೇಡ್‌, ಇದೀಗ ಸಾಕಷ್ಟು ಸಮಯದ ಬಳಿಕ ಆಸ್ಟ್ರೇಲಿಯಾ ಟಿ20 ತಂಡ ಕೂಡಿಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾ ಎದುರಿನ ಸೀಮಿತ ಓವರ್‌ಗಳ ಸರಣಿಗೆ ಆಸ್ಟ್ರೇಲಿಯಾ ತಂಡ ಹೀಗಿದೆ:

ಪ್ಯಾಟ್ ಕಮಿನ್ಸ್‌(ನಾಯಕ), ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್, ಶಾನ್ ಅಬ್ಬೋಟ್, ಆಸ್ಟನ್ ಏಗರ್, ಅಲೆಕ್ಸ್ ಕ್ಯಾರಿ(ವಿಕೆಟ್ ಕೀಪರ್), ನೇಥನ್ ಎಲ್ಲೀಸ್, ಕ್ಯಾಮರೋನ್ ಗ್ರೀನ್, ಆರೋನ್ ಹ್ಯಾಡ್ಲಿ, ಜೋಶ್ ಹೇಜಲ್‌ವುಡ್‌, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಶ್(ವಿಕೆಟ್ ಕೀಪರ್), ಮಿಚೆಲ್ ಮಾರ್ಷ್‌, ಮ್ಯಾಥ್ಯೂ ವೇಡ್‌, ತನ್ವೀರ್ ಸಂಘಾ, ಮಿಚೆಲ್ ಸ್ಟಾರ್ಕ್‌, ಮಾರ್ಕಸ್ ಸ್ಟೋನಿಸ್, ಆಡಂ ಜಂಪಾ.

Follow Us:
Download App:
  • android
  • ios