ಮೊಹಮ್ಮದ್ ಶಮಿಗೆ ಈಗಲೂ ಬಾರ್ಡರ್-ಗವಾಸ್ಕರ್ ಸರಣಿಗೆ ಭಾರತ ತಂಡ ಕೂಡಿಕೊಳ್ಳಬಹುದು, ಆದ್ರೆ ಒಂದು ಕಂಡೀಷನ್!
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಭಾರತ ತಂಡ ಕೂಡಿಕೊಳ್ಳಲು ಅನುಭವಿ ವೇಗಿ ಮೊಹಮ್ಮದ್ ಶಮಿಗೆ ಉತ್ತಮ ಅವಕಾಶ ಇದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ
ಬೆಂಗಳೂರು: ಮುಂಬರುವ ನವೆಂಬರ್ 22ರಿಂದ ಆರಂಭವಾಗಲಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟವಾಗಿದೆ. ಆದರೆ ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ತಂಡ ಕೂಡಿಕೊಳ್ಳುವ ವಿಶ್ವಾಸದಲ್ಲಿದ್ದ ಅನುಭವಿ ವೇಗಿ ಮೊಹಮ್ಮದ್ ಶಮಿಗೆ ಬಿಸಿಸಿಐ ಆಯ್ಕೆ ಸಮಿತಿ ಶಾಕ್ ನೀಡಿದೆ. ಭಾರತ-ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಗೆ 18 ಆಟಗಾರರನ್ನೊಳಗೊಂಡ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಆಲ್ರೌಂಡರ್ ಹರ್ಷಿತ್ ರಾಣಾ, ಅಭಿಮನ್ಯು ಈಶ್ವರನ್ ಹಾಗೂ ಹರ್ಷಿತ್ ರಾಣಾ ಇದೇ ಮೊದಲ ಬಾರಿಗೆ ಭಾರತ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಆದರೆ ಕಳೆದೊಂದು ವರ್ಷದಿಂದಲೂ ಪಾದದ ಗಾಯದ ಸಮಸ್ಯೆಯಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರವೇ ಉಳಿದಿದ್ದಾರೆ. ಸದ್ಯ ಬೆಂಗಳೂರಿನಲ್ಲಿರುವ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್ನೆಸ್ ಸಾಧಿಸುವತ್ತ ಗಮನ ಹರಿಸಿದ್ದಾರೆ. ಶಮಿ, ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದರು. ಹೀಗಿದ್ದೂ ಆಯ್ಕೆ ಸಮಿತಿ ಶಮಿಯವರನ್ನು ಆಸೀಸ್ ಪ್ರವಾಸಕ್ಕೆ ಆಯ್ಕೆ ಮಾಡಿಲ್ಲ.
ಆಸೀಸ್ ಸರಣಿ ಮುನ್ನ ಟೀಂ ಇಂಡಿಯಾಗೆ ಎಚ್ಚರಿಕೆಯ ಕರೆಗಂಟೆ: ಒತ್ತಡದಲ್ಲಿ ಭಾರತದ ಪ್ರಮುಖ ಬ್ಯಾಟರ್ಸ್
ಇದೀಗ ಇಂಡಿಯನ್ಸ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಶಮಿ ಈಗಾಲೂ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಆಯ್ಕೆಯಾಗಬಹುದು. ಆದರೆ ಒಂದು ಕಂಡೀಷನ್ ಎಂದು ವರದಿ ಮಾಡಿದೆ. "ಮೊಹಮ್ಮದ್ ಶಮಿ ಅವರನ್ನು ಭಾರತ ತಂಡದೊಳಗೆ ಸೇರಿಸಿಕೊಳ್ಳುವ ಮುನ್ನ, ರಣಜಿ ಟ್ರೋಫಿ ಟೂರ್ನಿಯಲ್ಲಿ ತಮ್ಮ ಫಿಟ್ನೆಸ್ ಸಾಬೀತು ಮಾಡಬೇಕಿದೆ. ಈ ಹಿಂದೆ ದೀಪಾವಳಿ ಬಳಿಕ ನವೆಂಬರ್ ಮೊದಲನೇ ವಾರದಲ್ಲಿ ಬೆಂಗಳೂರಿನಲ್ಲಿ ಕರ್ನಾಟಕ ವಿರುದ್ದ ನಡೆಯಲಿರುವ ರಣಜಿ ಟ್ರೋಫಿ ಟೂರ್ನಿಯಲ್ಲಿ ಬೆಂಗಾಲ್ ತಂಡವನ್ನು ಪ್ರತಿನಿಧಿಸಲಿದ್ದಾರೆ" ಎಂದು ವರದಿಯಾಗಿತ್ತು.
ಮೊಹಮ್ಮದ್ ಶಮಿ ಅನುಪಸ್ಥಿತಿಯಲ್ಲಿ ಬಿಸಿಸಿಐ ಆಯ್ಕೆ ಸಮಿತಿ ಅನುಭವಿ ವೇಗಿಗಳಾದ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್‌ದೀಪ್ ಜತೆಗೆ ಕರ್ನಾಟಕದ ನೀಳಕಾಯದ ವೇಗಿ ಪ್ರಸಿದ್ಧ್ ಕೃಷ್ಣ ಹಾಗೂ ಹರ್ಷಿತ್ ರಾಣಾ ಅವರಿಗೆ ಮಣೆ ಹಾಕಿದೆ.
ಪೋಸ್ಟ್ ಮಾರ್ಟಂ ಬೇಕಾಗಿಲ್ಲ, ಆಟಗಾರರ ಸಾಮರ್ಥ್ಯ ಗೊತ್ತಿದೆ: ಸರಣಿ ಸೋತ ರೋಹಿತ್ ಶರ್ಮಾ
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಗೆ ಭಾರತ ಕ್ರಿಕೆಟ್ ತಂಡ:
ರೋಹಿತ್ ಶರ್ಮಾ(ನಾಯಕ), ಜಸ್ಪ್ರೀತ್ ಬೂಮ್ರಾ (ಉಪನಾಯಕ), ಯಸಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್.ರಾಹುಲ್, ರಿಷಭ್ ಪಂತ್, ಸರ್ಫರಾಜ್ ಖಾನ್, ಧೃವ್ ಜುರೆಲ್, ಆರ್.ಅಶ್ವಿನ್, ರವೀಂದ್ರ ಜಡೇಜಾ, ಮೊಹಮದ್ ಸಿರಾಜ್, ಆಕಾಶ್‌ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ನಿತೀಶ್ ರೆಡ್ಡಿ, ವಾಷಿಂಗ್ಟನ್ ಸುಂದರ್.