Asianet Suvarna News Asianet Suvarna News

ICC T20 World Cup: 'ಮೊಹಮ್ಮದ್ ಶಮಿ ಪವರ್‌ ಪ್ಲೇನಲ್ಲೇ ವಿಕೆಟ್‌ ಕಬಳಿಸಬಲ್ಲರು'

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಿಂದ ಜಸ್ಪ್ರೀತ್ ಬುಮ್ರಾ ಔಟ್
ಬುಮ್ರಾ ಅವರ ಸ್ಥಾನಕ್ಕೆ ಮೊಹಮ್ಮದ್ ಶಮಿಗೆ ಸ್ಥಾನ ನೀಡಲಿ ಎಂದ ಮಾಜಿ ಕ್ರಿಕೆಟಿಗ
ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಅಕ್ಟೋಬರ್ 16ರಿಂದ ಆರಂಭ

Mohammed Shami to replace Jasprit Bumrah in T20 World Cup He can pick wickets in powerplay Says Saba Karim kvn
Author
First Published Sep 30, 2022, 6:00 PM IST

ನವದೆಹಲಿ(ಸೆ.30): ಫಿಟ್ನೆಸ್ ಸಮಸ್ಯೆಯಿಂದ ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಿಂದ ವೇಗಿ ಜಸ್ಪ್ರೀತ್ ಬುಮ್ರಾ ಹೊರಬಿದ್ದಿದ್ದಾರೆ. ಅವರ ಸ್ಥಾನಕ್ಕೆ ಅನುಭವಿ ವೇಗಿ ಮೊಹಮ್ಮದ್ ಶಮಿಗೆ ಸ್ಥಾನ ನೀಡಬೇಕು ಎಂದು ಟೀಂ ಇಂಡಿಯಾ ಮಾಜಿ ವಿಕೆಟ್ ಕೀಪರ್ ಸಾಬಾ ಕರೀಂ ಅಭಿಪ್ರಾಯಪಟ್ಟಿದ್ದಾರೆ. ಅನುಭವಿ ವೇಗಿ ಮೊಹಮ್ಮದ್ ಶಮಿಗೆ ಪವರ್ ಪ್ಲೇನಲ್ಲೇ ವಿಕೆಟ್ ಕಬಳಿಸುವ ಸಾಮರ್ಥ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಫಿಟ್ನೆಸ್ ಸಮಸ್ಯೆಯಿಂದ ಸದ್ಯ ದಕ್ಷಿಣ ಆಫ್ರಿಕಾ ವಿರುದ್ದ ನಡೆಯುತ್ತಿರುವ ಟಿ20 ಸರಣಿಯಿಂದ ಜಸ್ಪ್ರೀತ್ ಬುಮ್ರಾ ಹೊರಬಿದ್ದಿದ್ದಾರೆ. ಅವರ ಬದಲಿಗೆ ಹೈದರಾಬಾದ್‌ ಮೂಲದ ಮೊಹಮ್ಮದ್ ಸಿರಾಜ್‌ ಅವರಿಗೆ ತಂಡದಲ್ಲಿ ಮಣೆ ಹಾಕಲಾಗಿದೆ. ಆದರೆ ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸಿರಾಜ್ ಅವರಿಗಿಂತ ಮೊಹಮ್ಮದ್ ಶಮಿಗೆ ತಂಡದಲ್ಲಿ ಸ್ಥಾನ ನೀಡಬೇಕು ಎಂದು 54 ವರ್ಷದ ಸಾಬಾ ಕರೀಂ ಹೇಳಿದ್ದಾರೆ.

ನಾನು ಮೊಹಮ್ಮದ್ ಶಮಿ ಅವರನ್ನು ಆಯ್ಕೆ ಮಾಡುಕೊಳ್ಳುತ್ತೇನೆ. ಅವರು ಸದ್ಯ ಟಿ20 ಪಂದ್ಯಗಳನ್ನಾಡದಿದ್ದರೂ ಅವರು ಫಾರ್ಮ್‌ ಕಂಡುಕೊಳ್ಳಲಿದ್ದಾರೆ. ಮೊಹಮ್ಮದ್ ಶಮಿ ಅವರಂತಹ ಬೌಲರ್‌ಗೆ ಒಂದು ಅವಕಾಶ ಸಿಕ್ಕಿದರೆ, ಅದನ್ನು ಸರಿಯಾಗಿ ಬಳಸಿಕೊಂಡು, ತಂಡದ ಪರ ಉತ್ತಮ ಪ್ರದರ್ಶನ ತೋರಲಿದ್ದಾರೆ. ಅನುಭವಿ ವೇಗಿ ಯಾವುದೇ ಹಂತದಲ್ಲಿ ತಂಡಕ್ಕೆ ವಿಕೆಟ್ ಕಬಳಿಸಿಕೊಡಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಅದನ್ನು ನೀವು ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ನೋಡಿದ್ದೀರ ಎಂದು ಕರೀಂ ಹೇಳಿದ್ದಾರೆ.

ICC T20 World Cup ಟೂರ್ನಿಯಿಂದ ಜಸ್ಪ್ರೀತ್ ಬುಮ್ರಾ ಔಟ್; ಮುಗಿಲು ಮುಟ್ಟಿದ ಅಭಿಮಾನಿಗಳ ಆಕ್ರಂದನ..!

ಹೊಸ ಚೆಂಡಿನೊಂದಿಗೆ ದಾಳಿಗಿಳಿದರೆ ಮೊಹಮ್ಮದ್ ಶಮಿ ಪವರ್‌ ಪ್ಲೇನಲ್ಲೇ ವಿಕೆಟ್ ಕಬಳಿಸುವ ಸಾಮರ್ಥ್ಯ ಹೊಂದಿದ್ದಾರೆ. ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ತಂಡಕ್ಕೆ ಅದು ಅಗತ್ಯವಿದೆ. ಹೀಗಾಗಿ ಆರಂಭದಲ್ಲೇ ಮೊಹಮ್ಮದ್ ಶಮಿ ವಿಕೆಟ್ ಕಬಳಿಸಿದರೆ, ಎದುರಾಳಿ ತಂಡದ ಮೇಲೆ ಒತ್ತಡ ಹೇರಲು ನೆರವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 

ಏಷ್ಯಾಕಪ್ ಟೂರ್ನಿಯಿಂದ ಹೊರಗುಳಿದಿದ್ದ ಜಸ್ಪ್ರೀತ್ ಬುಮ್ರಾ, ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ದ ನಡೆದ ಕೊನೆಯ ಎರಡು ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರಾದರೂ ನಿರೀಕ್ಷಿತ ಪ್ರದರ್ಶನ ತೋರಲು ವಿಫಲವಾಗಿದ್ದರು. ಇನ್ನು ದಕ್ಷಿಣ ಆಫ್ರಿಕಾ ಎದುರಿನ ಸರಣಿಯ ಮೊದಲ ಪಂದ್ಯದಿಂದಲೂ ಬುಮ್ರಾ ಹೊರಗುಳಿದಿದ್ದರು. ಬುಮ್ರಾ ಅನುಪಸ್ಥಿತಿಯಲ್ಲಿ ದೀಪಕ್‌ ಚಹರ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದರು. ದಕ್ಷಿಣ ಆಫ್ರಿಕಾ ಎದುರಿನ ಮೊದಲ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 8 ವಿಕೆಟ್‌ಗಳ ಜಯ ಸಾಧಿಸುವ ಮೂಲಕ 3 ಪಂದ್ಯ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

Follow Us:
Download App:
  • android
  • ios