ಗಬ್ಬಾ(ಜ.15):  ಸಿಡ್ನಿ ಟೆಸ್ಟ್ ಪಂದ್ಯದಲ್ಲಿನ ಭಾರತೀಯ ಬೌಲರ್ ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಮೇಲೆ ಜನಾಂಗೀಯ ನಿಂದನೆ ಮಾಡಲಾಗಿತ್ತು. ಈ ಕುರಿತು ಟೀಂ ಇಂಡಿಯಾ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ. ಇನ್ನು ಆಸ್ಟ್ರೇಲಿಯಾ ನಾಯಕ ಟಿಮ್ ಪೈನೆ ಸೇರದಂತೆ ಮಾಜಿ ಕ್ರಿಕೆಟಿಗರು, ಅಭಿಮಾನಿಗಳಲ್ಲಿ ಮನವಿ ಮಾಡಿದ್ದರು. ಆದರೆ ಆಸ್ಟ್ರೇಲಿಯಾ ಅಭಿಮಾನಿಗಳ ವರ್ತನೆ ಬದಲಾಗಿಲ್ಲ.

ಸಿರಾಜ್ ಮೇಲೆ ಮತ್ತೆ ಜನಾಂಗೀಯ ನಿಂದನೆ; 6 ಪ್ರೇಕ್ಷಕರ ಹೊರದಬ್ಬಿದ ಸಿಬ್ಬಂದಿ!..

4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಅಭಿಮಾನಿಗಳು ಮತ್ತೆ ಜನಾಂಗೀಯ ನಿಂದನೆ ಮಾಡಿದ್ದಾರೆ. ಫೀಲ್ಡಿಂಗ್ ಮಾಡುತ್ತಿದ್ದ ವೇಗಿ ಮೊಹಮ್ಮದ್ ಸಿರಾಜ್‌ಗೆ ನಿಂದನೆ ಮಾಡಿದ್ದಾರೆ. ಹುಳ, ಕೋತಿ ಎಂದು ಕರೆದಿದ್ದಾರೆ. ಈ ಕುರಿತು ಟೀಂ ಇಂಡಿಯಾ ಮ್ಯಾಚ್ ರೆಫ್ರಿಗೆ ದೂರು ನೀಡಿದೆ. ಸಿರಾಜ್ ಮಾತ್ರವಲ್ಲ ವಾಶಿಂಗ್ಟನ್ ಸುಂದರ್‌ಗೂ ಇದೇ ರೀತಿ ನಿಂದನೆ ಮಾಡಲಾಗಿದೆ.

ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಅಭಿಮಾನಿಗಳ ವರ್ತನೆಗೆ ಕ್ರಿಕೆಟ್ ಆಸ್ಟ್ರೇಲಿಯಾ ಕ್ಷಣೆ ಕೇಳಿತ್ತು. ಇದೀಗ ಗಬ್ಬಾದಲ್ಲೂ ಇದೇ ರೀತಿ ವರ್ತನೆ ಮರುಕಳಿಸಿದೆ. ಇದೀಗ ಗಬ್ಬಾ ಟೆಸ್ಟ್ ಪಂದ್ಯದಲ್ಲಿನ ಘಟನೆ ಕುರಿತು ಆಸ್ಟ್ರೇಲಿಯಾ ತನಿಖೆ ನಡೆಸುತ್ತಿದೆ. ಇತ್ತ ಐಸಿಸಿ ಈ ಕುರಿತು ಕ್ರಮ ಕೈಗೊಳ್ಳುವಂತೆ ಕ್ರಿಕೆಟ್ ಆಸ್ಟ್ರೇಲಿಯಾಗೆ ಸೂಚಿಸಿದೆ.