Asianet Suvarna News Asianet Suvarna News

IPL 2023: ಈ ಎರಡು ಕಾರಣಗಳಿಂದಾಗಿ ಲಖನೌವನ್ನು ಮುಂಬೈ ಮಣಿಸುತ್ತೆ: ಭವಿಷ್ಯ ನುಡಿದ ಎಬಿ ಡಿವಿಲಿಯರ್ಸ್‌

ಚೆನ್ನೈನಲ್ಲಿಂದು ಹೈವೋಲ್ಟೇಜ್ ಎಲಿಮಿನೇಟರ್ ಪಂದ್ಯ
ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್-ಲಖನೌ ಸೂಪರ್ ಜೈಂಟ್ಸ್ ಮುಖಾಮುಖಿ
ಲಖನೌ ಎದುರು ಮುಂಬೈ ಗೆಲ್ಲಲಿದೆ ಎಂದ ಎಬಿ ಡಿವಿಲಿಯರ್ಸ್‌

Mumbai Indians to beat Lucknow Super Giants in IPL 2023 Eliminator Says AB de Villiers kvn
Author
First Published May 24, 2023, 6:21 PM IST

ಚೆನ್ನೈ(ಮೇ.24): 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಂದು ಎಲಿಮಿನೇಟರ್ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಕಾದಾಡಲಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಚೆಪಾಕ್ ಮೈದಾನ ಆತಿಥ್ಯವನ್ನು ವಹಿಸಲಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಗೆಲುವು ಸಾಧಿಸಲಿದೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿ ವಿಲಿಯರ್ಸ್‌ ಭವಿಷ್ಯ ನುಡಿದಿದ್ದಾರೆ.

ಮೊದಲ ಕ್ವಾಲಿಫೈಯರ್ ಪಂದ್ಯ ಮುಕ್ತಾಯದ ಬಳಿಕ ಜಿಯೋ ಸಿನಿಮಾದಲ್ಲಿ ಮಾತನಾಡಿದ ಆರ್‌ಸಿಬಿ ಮಾಜಿ ಕ್ರಿಕೆಟಿಗ ಎಬಿಡಿ, ಎಲಿಮಿನೇಟರ್ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಎದುರು ಮುಂಬೈ ಇಂಡಿಯನ್ಸ್ ತಂಡವು ಗೆಲುವು ಸಾಧಿಸಲಿದೆ. ಯಾಕೆಂದರೆ ಮುಂಬೈ ಇಂಡಿಯನ್ಸ್‌ಗೆ ಹೆಚ್ಚು ನಾಕೌಟ್ ಪಂದ್ಯಗಳನ್ನು ಆಡಿದ ಅನುಭವವಿದೆ. ಚೆನ್ನೈನಲ್ಲಿ ಅವರು ಉತ್ತಮವಾಗಿ ಆಡಿದ್ದಾರೆ ಎಂದು ಹೇಳಿದ್ದಾರೆ. ಲೀಗ್ ಹಂತ ಮುಕ್ತಾಯದ ವೇಳೆಗೆ ಕೃನಾಲ್ ಪಾಂಡ್ಯ ನೇತೃತ್ವದ ಲಖನೌ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿತ್ತು. ಇನ್ನು ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ಎದುರು ಶರಣಾಗಿದ್ದರಿಂದಾಗಿ ಮುಂಬೈ ಇಂಡಿಯನ್ಸ್ ತಂಡವು ನಾಲ್ಕನೇ ತಂಡವಾಗಿ ಐಪಿಎಲ್‌ ಪ್ಲೇ ಆಫ್‌ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ.

"ನನ್ನ ಪ್ರಕಾರ ಮುಂಬೈ ಇಂಡಿಯನ್ಸ್ ತಂಡವು ಎರಡು ಕಾರಣಗಳಿಂದಾಗಿ ಗೆಲ್ಲುವ ಫೇವರೇಟ್ ಎನಿಸಿಕೊಂಡಿದೆ. ಮೊದಲನೆಯದಾಗಿ ಅವರಿಗೆ ನಾಕೌಟ್‌ ಪಂದ್ಯಗಳನ್ನು ಆಡುವುದು ಹೇಗೆ ಎನ್ನುವುದು ಗೊತ್ತಿದೆ. ಈ ಟೂರ್ನಿಯನ್ನು ಅವರು ಐದು ಬಾರಿ ಜಯಿಸಿದ್ದಾರೆ. ಬೇರೆ ಯಾವ ತಂಡವು ಈ ರೀತಿಯ ಸಾಧನೆ ಮಾಡಿಲ್ಲ. ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ನಾಕೌಟ್ ಹಂತಕ್ಕೆ ಬಂತು ಎಂದರೆ, ಅದು ಮತ್ತಷ್ಟು ಬಲಿಷ್ಠವಾಗಿ ಬದಲಾಗುತ್ತದೆ. ಇನ್ನು ಎರಡನೇಯದಾಗಿ ಅದು ಉತ್ತಮ ಲಯದಲ್ಲಿದೆ. ಹೀಗಾಗಿ ಲಖನೌ ಎದುರು ಮುಂಬೈ ಗೆಲ್ಲುವ ಸಾಧ್ಯತೆ ಹೆಚ್ಚು ಎಂದು ಮಿಸ್ಟರ್ 360 ಖ್ಯಾತಿಯ ರೋಹಿತ್ ಶರ್ಮಾ ಹೇಳಿದ್ದಾರೆ.

ಇಂದು ಮುಂಬೈ vs ಲಖನೌ ಎಲಿಮಿನೇಟರ್‌

ಮುಂಬೈ ಇಂಡಿಯನ್ಸ್ ತಂಡವು ನಾಕೌಟ್ ಹಂತ ಪ್ರವೇಶಿಸಿದ ಬಳಿಕ ಸಾಕಷ್ಟು ಅಪಾಯಕಾರಿ ತಂಡವಾಗಿ ಬದಲಾಗುತ್ತದೆ. ಮುಂಬೈ ಇಂಡಿಯನ್ಸ್ ತಂಡವು ತಾನಾಡಿದ ಮೊದಲ ಐದು ಪಂದ್ಯಗಳಲ್ಲಿ ಸೋಲು ಅನುಭವಿಸಿದ ಬಳಿಕವೂ ಚಾಂಪಿಯನ್ ಆಗಿ ಹೊರಹೊಮ್ಮಿದೆ ಎನ್ನುವುದನ್ನು ಯಾರೂ ಮರೆಯಲು ಸಾಧ್ಯವಿಲ್ಲ ಎಂದು ಎಬಿ ಡಿವಿಲಿಯರ್ಸ್‌ ಹೇಳಿದ್ದಾರೆ

ಮುಂಬೈ ಇಂಡಿಯನ್ಸ್ ತಂಡವು ನಾಕೌಟ್ ಹಂತಕ್ಕೇರಲು ಸಾಕಷ್ಟು ಕಠಿಣ ಪರಿಶ್ರಮಪಟ್ಟಿದೆ. ನಾವು ಈ ಹಿಂದೆಯೂ ಮುಂಬೈ ತಂಡದ ಆಟವನ್ನು ನೋಡಿದ್ದೇವೆ. ಆರಂಭದ 5 ಪಂದ್ಯಗಳಲ್ಲಿ ಸೋಲು ಅನುಭವಿಸಿದ ಬಳಿಕವೂ ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ ಚಾಂಪಿಯನ್‌ ಪಟ್ಟವನ್ನು  ಅಲಂಕರಿಸಿದೆ. ಈ ಬಾರಿ ಕೂಡಾ ಮುಂಬೈ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಗಿತ್ತು, ಆದರೆ ಈಗ ನಾಕೌಟ್ ಹಂತಕ್ಕೇರಿದೆ. ಈ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸಾಕಷ್ಟು ಅಪಾಯಕಾರಿ ತಂಡ ಎಂದು ಎಬಿ ಡಿವಿಲಿಯರ್ಸ್ ಹೇಳಿದ್ದಾರೆ.

ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು 7ನೇ ಬಾರಿಗೆ ಐಪಿಎಲ್ ಫೈನಲ್ ಪ್ರವೇಶಿಸಲು ಎದುರು ನೋಡುತ್ತಿದೆ. ಮುಂಬೈ ಫೈನಲ್ ಪ್ರವೇಶಿಸಬೇಕಿದ್ದರೇ, ಎಲಿಮಿನೇಟರ್ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಹಾಗೂ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಎದುರು ಗೆಲುವು ಸಾಧಿಸಬೇಕಿದೆ. ಇನ್ನೊಂದೆಡೆ ಕೃನಾಲ್ ಪಾಂಡ್ಯ ನೇತೃತ್ವದ ಲಖನೌ ಸೂಪರ್ ಜೈಂಟ್ಸ್ ತಂಡವು ಮೊದಲ ಬಾರಿಗೆ ಐಪಿಎಲ್ ಫೈನಲ್ ಪ್ರವೇಶದ ಕನಸು ಕಾಣುತ್ತಿದೆ. ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವು ಪ್ಲೇ ಆಫ್‌ಗೆ ಲಗ್ಗೆಯಿಟ್ಟಿತ್ತಾದರೂ, ಎಲಿಮಿನೇಟರ್ ಹಂತದಲ್ಲಿ ಆರ್‌ಸಿಬಿ ಎದುರು ಮುಗ್ಗರಿಸುವ ಮೂಲಕ ನಿರಾಸೆ ಅನುಭವಿಸಿತ್ತು.

Follow Us:
Download App:
  • android
  • ios