ಐಪಿಎಲ್‌ನಲ್ಲಿ ಪಂಜಾಬ್-ಮುಂಬೈ ಪಂದ್ಯದ ವೇಳೆ ಮುಖ ಮರೆಸಿಕೊಂಡು ಆರ್‌ಸಿಬಿ ಟೋಪಿ ಹಾಕಿಕೊಂಡು ಕುಳಿತಿದ್ದ ವ್ಯಕ್ತಿ ಕೊಹ್ಲಿಯೋ ಅಥವಾ ಆರ್‌ಸಿಬಿ ಗೂಢಚಾರನೋ ಎಂಬ ಚರ್ಚೆ ನಡೆಯುತ್ತಿದೆ. ಪಂಜಾಬ್ ತಂತ್ರಗಳನ್ನು ತಿಳಿದುಕೊಳ್ಳಲು ಬಂದ ಗೂಢಚಾರ ಇವನು ಎಂದು ಕೆಲವು ಅಭಿಮಾನಿಗಳು ಹೇಳಿದ್ದಾರೆ  

ಅಹಮದಾಬಾದ್: ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ ಪಂದ್ಯದ ವೇಳೆ ಮುಖ ಮರೆಸಿಕೊಂಡು ಆರ್‌ಸಿಬಿ ಟೋಪಿ ಹಾಕಿಕೊಂಡು ಕುಳಿತಿದ್ದ ವ್ಯಕ್ತಿ ಕೊಹ್ಲಿಯೋ ಅಥವಾ ಆರ್‌ಸಿಬಿ ಗೂಢಚಾರನೋ ಎಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದೆ. ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಮಾಡುವಾಗ ಈ ವ್ಯಕ್ತಿಯನ್ನು ಕ್ಯಾಮೆರಾಗಳು ಸೆರೆಹಿಡಿದವು.

ಐಪಿಎಲ್ ಫೈನಲ್‌ನಲ್ಲಿ ಆರ್‌ಸಿಬಿ ಎದುರಾಳಿ ಪಂಜಾಬ್ ಕಿಂಗ್ಸ್. ಪಂಜಾಬ್ ತಂತ್ರಗಳನ್ನು ತಿಳಿದುಕೊಳ್ಳಲು ಬಂದ ಗೂಢಚಾರ ಇವನು ಎಂದು ಕೆಲವು ಅಭಿಮಾನಿಗಳು ಹೇಳಿದರೆ, ಇದು ಕೊಹ್ಲಿ ಎಂದು ಇನ್ನು ಕೆಲವರು ಹೇಳುತ್ತಿದ್ದಾರೆ. ಆದರೆ ಇದು ಆರ್‌ಸಿಬಿಯ ಗುಪ್ತ ಏಜೆಂಟ್ ಎಂದು ಮತ್ತೊಬ್ಬ ಅಭಿಮಾನಿ ಹೇಳಿದ್ದಾನೆ. ಮೊದಲ ಕ್ವಾಲಿಫೈಯರ್‌ನಲ್ಲಿ ಪಂಜಾಬ್‌ ಅನ್ನು ಸೋಲಿಸಿ ಆರ್‌ಸಿಬಿ ಫೈನಲ್ ತಲುಪಿತ್ತು.

Scroll to load tweet…

Scroll to load tweet…

Scroll to load tweet…

ಆರ್‌ಸಿಬಿ ವಿರುದ್ಧ ಸೋತ ಪಂಜಾಬ್ ಎರಡನೇ ಕ್ವಾಲಿಫೈಯರ್‌ನಲ್ಲಿ ಮುಂಬೈಯನ್ನು ಮಣಿಸಿ 2014ರ ನಂತರ ಮೊದಲ ಬಾರಿಗೆ ಫೈನಲ್ ತಲುಪಿದೆ. 41 ಎಸೆತಗಳಲ್ಲಿ 87 ರನ್ ಗಳಿಸಿದ ನಾಯಕ ಶ್ರೇಯಸ್ ಅಯ್ಯರ್ ಪಂಜಾಬ್ ಗೆಲುವಿನ ರೂವಾರಿ ಎನಿಸಿಕೊಂಡರು. 5 ಬೌಂಡರಿ ಮತ್ತು 8 ಸಿಕ್ಸರ್‌ಗಳನ್ನು ಅವರು ಬಾರಿಸಿದರು. ಮುಂಬೈ ನೀಡಿದ 201 ರನ್‌ಗಳ ಗುರಿಯನ್ನು ಪಂಜಾಬ್ 19 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ ತಲುಪಿ ಫೈನಲ್ ಪ್ರವೇಶಿಸಿತು.

18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಅದ್ಭುತ ಪ್ರದರ್ಶನ ತೋರುವ ಮೂಲಕ ಲೀಗ್ ಹಂತದ ಅಂತ್ಯದ ವೇಳೆಗೆ ಮೊದಲೆರಡು ಸ್ಥಾನ ಪಡೆದಿತ್ತು. ಇನ್ನು ಮುಲ್ಲಾನಪುರದಲ್ಲಿ ನಡೆದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಸೋತು ಮೊದಲು ಬ್ಯಾಟ್ ಮಾಡಲಿಳಿದ ಪಂಜಾಬ್ ಕಿಂಗ್ಸ್ ತಂಡವು, ಜೋಶ್ ಹೇಜಲ್‌ವುಡ್, ಸುಯಾಶ್ ಶರ್ಮಾ ಮಾರಕ ದಾಳಿಗೆ ತತ್ತರಿಸಿ ಕೇವಲ 101 ರನ್‌ಗಳಿಗೆ ಸರ್ವಪತನ ಕಂಡಿತು. ಇನ್ನು ಸಾಧಾರಣ ಗುರಿ ಬೆನ್ನತ್ತಿದ ಆರ್‌ಸಿಬಿ ತಂಡವು, ಫಿಲ್ ಸಾಲ್ಟ್ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಇನ್ನೂ 10 ಓವರ್ ಬಾಕಿ ಇರುವಂತೆಯೇ 8 ವಿಕೆಟ್ ಅಂತರದ ಭರ್ಜರಿ ಜಯ ಸಾಧಿಸಿತ್ತು.

ಹೊಸ ಚಾಂಪಿಯನ್ ಉದಯಕ್ಕೆ ಕ್ಷಣಗಣನೆ:

2025ರ ಇಂಡಿಯನ್ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯವು ಇದೇ ಜೂನ್ 03ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಿಗದಿಯಾಗಿದೆ. ಪ್ರಶಸ್ತಿಗಾಗಿ ರಜತ್ ಪಾಟೀದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡಗಳು ಕಾದಾಡಲಿವೆ. ಯಾರೇ ಗೆದ್ದರೂ ಈ ಬಾರಿಯ ಐಪಿಎಲ್‌ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಯಾಕೆಂದರೆ ಉಭಯ ತಂಡಗಲು ಚೊಚ್ಚಲ ಐಪಿಎಲ್ ಟ್ರೋಫಿ ಗೆಲ್ಲಲು ಹಾತೊರೆಯುತ್ತಿವೆ. ಪಂಜಾಬ್ ಕಿಂಗ್ಸ್ ತಂಡವು 2014ರಲ್ಲಿ ಫೈನಲ್ ಪ್ರವೇಶಿಸಿತ್ತಾದರೂ ಕೆಕೆಆರ್‌ ಎದುರು ಮುಗ್ಗರಿಸುವ ಮೂಲಕ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಇನ್ನು ಆರ್‌ಸಿಬಿ ತಂಡವು 2009, 2011 ಹಾಗೂ 2016ರಲ್ಲಿ ಫೈನಲ್ ಪ್ರವೇಶಿಸಿತ್ತಾದರೂ ಮೂರು ಬಾರಿಯೂ ಪ್ರಶಸ್ತಿ ಸುತ್ತಿನಲ್ಲಿ ಮುಗ್ಗರಿಸಿತ್ತು.

ಚೊಚ್ಚಲ ಆವೃತ್ತಿಯಿಂದಲೂ ಐಪಿಎಲ್ ಆಡುತ್ತಾ ಬಂದಿರು ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಈವರೆಗೂ ಕಪ್ ಗೆಲ್ಲಲು ಸಾಧ್ಯವಾಗಿತ್ತು. ಇದೀಗ 18ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಈ ಎರಡು ತಂಡಗಳ ಪೈಕಿ ಒಂದು ತಂಡದ ಐಪಿಎಲ್ ಟ್ರೋಫಿ ಬರ ನೀಗಲಿದೆ.