ಆಕ್ಲೆಂಡ್(ಫೆ.07): ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮುಗ್ಗರಿಸಿರುವ ಟೀಂ ಇಂಡಿಯಾ ಇದೀಗ 2ನೇ ಪಂದ್ಯದಲ್ಲಿ ಕಮ್‌ಬ್ಯಾಕ್ ಮಾಡೋ ವಿಶ್ವಾಸದಲ್ಲಿದೆ. ಈ ಮೂಲಕ ಸರಣಿ ಉಳಿಸಿಕೊಳ್ಳಲು ತಯಾರಿ ನಡೆಸಿದೆ. 2ನೇ ಪಂದ್ಯಕ್ಕೆ ತಂಡದಲ್ಲಿ ಕೆಲ ಬದಲಾವಣೆ ಮಾಡಲು ನಾಯಕ ವಿರಾಟ್ ಕೊಹ್ಲಿ ನಿರ್ಧರಿಸಿದ್ದಾರೆ.

ಇದನ್ನೂ ಓದಿ: 2ನೇ ಏಕದಿನ: ಭಾರತ ತಂಡದಲ್ಲಿ 2 ಬದಲಾವಣೆ? ಯಾರಿಗೆ ಚಾನ್ಸ್, ಯಾರಿಗೆ ಕೊಕ್?

2ನೇ ಪಂದ್ಯಕ್ಕೂ ಮುನ್ನ ನಾಯಕ ವಿರಾಟ್ ಕೊಹ್ಲಿಗೆ ಮಾಜಿ ನಾಯಕ ಕಪಿಲ್ ದೇವ್ ಸಲಹೆ ನೀಡಿದ್ದಾರೆ. ಯುವ ವೇಗಿ ನವದೀಪ್ ಸೈನಿ ತಂಡದಲ್ಲಿ ಸ್ಥಾನ ಪಡೆಯಲು ಅರ್ಹರಿದ್ದಾರೆ. ಬೆಂಚ್ ಕಾಯಿಸುವ ಬದಲು 2ನೇ ಪಂದ್ಯದಲ್ಲಿ ಆಡಿಸಿ ಎಂದು ಸೂಚಿಸಿದ್ದಾರೆ.

ಇದನ್ನೂ ಓದಿ: ರಾಹುಲ್‌ಗೆ 5ನೇ ಕ್ರಮಾಂಕ: ಕೊಹ್ಲಿ ನಿರ್ಣಯ ಸರಿನಾ, ತಪ್ಪಾ?

ಮೊದಲ ಏಕದಿನ ಪಂದ್ಯದಲ್ಲಿ ವೇಗಿ ಶಾರ್ದೂಲ್ ಠಾಕೂರ್ ದುಬಾರಿಯಾಗಿದ್ದಾರೆ. ಹೀಗಾಗಿ ಠಾಕೂರ್ ಬದಲು ಸೈನಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಈ ಮೂಲಕ 2ನೇ ಪಂದ್ಯದಲ್ಲಿ ಗೆಲುವು ಸಾಧಿಸುವ ಲೆಕ್ಕಾಚಾರದಲ್ಲಿದೆ.  ನ್ಯೂಜಿಲೆಂಡ್ ಪಿಚ್‌ನಲ್ಲಿ ಭಾರತೀಯ ಸ್ಪಿನ್ನರ್‌ಗಳು ದುಬಾರಿಯಾಗಿರುವುದು ಚಿಂತೆ  ಹೆಚ್ಚಿಸಿದೆ.