Asianet Suvarna News Asianet Suvarna News

ಇಂಗ್ಲೆಂಡ್‌ ಬಗ್ಗುಬಡಿದ ಭಾರತಕ್ಕೆ ಜೈ ಹೋ ಎಂದ ನೆಟ್ಟಿಗರು..!

ಇಂಗ್ಲೆಂಡ್ ವಿರುದ್ದದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 317 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ 4 ಪಂದ್ಯಗಳ ಸರಣಿಯಲ್ಲಿ ವಿರಾಟ್ ಕೊಹ್ಲಿ ಪಡೆ 1-1ರ ಸಮಬಲ ಸಾಧಿಸಿದೆ. ಟೀಂ ಇಂಡಿಯಾದ ಈ ಅದ್ಭುತ ಪ್ರದರ್ಶನಕ್ಕೆ ನೆಟ್ಟಿಗರು ಜೈ ಹೋ ಎಂದಿದ್ದಾರೆ.

Netizens Hails Team India Match Winning Performance against England in 2nd Chennai Test kvn
Author
Bengaluru, First Published Feb 16, 2021, 2:29 PM IST

ಬೆಂಗಳೂರು(ಫೆ.16): ಇಂಗ್ಲೆಂಡ್‌ ವಿರುದ್ದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆಘಾತಕಾರಿ ಸೋಲು ಕಂಡಿದ್ದ ಟೀಂ ಇಂಡಿಯಾ, ಇದೀಗ ಎರಡನೇ ಚೆನ್ನೈ ಟೆಸ್ಟ್‌ ಪಂದ್ಯದಲ್ಲಿ ಬರೋಬ್ಬರಿ 317 ರನ್‌ಗಳ ಭರ್ಜರಿ ಗೆಲುವು ದಾಖಲಿಸುವ ಮೂಲಕ ತಿರುಗೇಟು ನೀಡಿದೆ. ಇದರೊಂದಿಗೆ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-1ರ ಸಮಬಲ ಸಾಧಿಸಿದೆ.

ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ ಪ್ರವೇಶದ ಕನಸು ಮತ್ತಷ್ಟು ಜೀವಂತವಾಗಿದೆ. ಮುಂದಿನ ಎರಡು ಟೆಸ್ಟ್‌ ಪಂದ್ಯಗಳ ಪೈಕಿ ಕನಿಷ್ಠ ಒಂದು ಪಂದ್ಯ ಗೆದ್ದು, ಮತ್ತೊಂದು ಪಂದ್ಯ ಡ್ರಾ ಮಾಡಿಕೊಂಡರೂ ಸಾಕು, ವಿರಾಟ್ ಕೊಹ್ಲಿ ಪಡೆ ಅನಾಯಾಸವಾಗಿ ಟೆಸ್ಟ್ ವಿಶ್ವಕಪ್ ಫೈನಲ್‌ ಆಡಲು ಅರ್ಹತೆಗಿಟ್ಟಿಸಿಕೊಳ್ಳಲಿದೆ.

ಭಾರತ ನೀಡಿದ್ದ 482 ರನ್‌ಗಳ ಗುರಿ ಪಡೆದಿದ್ದ ಜೋ ರೂಟ್‌ ನೇತೃತ್ವದ ಇಂಗ್ಲೆಂಡ್ ತಂಡ ಮೂರನೇ ದಿನದಾಟದಂತ್ಯದ ವೇಳೆಗೆ 3 ವಿಕೆಟ್‌ ಕಳೆದುಕೊಂಡು ಕೇವಲ 53 ರನ್‌ ಗಳಿಸಿತ್ತು. ಆದರೆ ನಾಲ್ಕನೇ ದಿನದಾಟದ ಆರಂಭದಲ್ಲೇ ಅಕ್ಷರ್ ಪಟೇಲ್‌ ಹಾಗೂ ರವಿಚಂದ್ರನ್ ಅಶ್ವಿನ್ ಚಾಣಾಕ್ಷ ದಾಳಿಗೆ ತತ್ತರಿಸಿ ಹೋದ ಇಂಗ್ಲೆಂಡ್ ತಂಡ ಕೇವಲ 164 ರನ್‌ ಗಳಿಸುವಷ್ಟರಲ್ಲೇ ಸರ್ವಪತನ ಕಾಣುವ ಮೂಲಕ ಭಾರತದಲ್ಲಿ ಭಾರೀ ಅಂತರದ ಸೋಲು ಕಂಡಿದೆ. 

ಚೆನ್ನೈ ಟೆಸ್ಟ್‌: ಇಂಗ್ಲೆಂಡ್‌ ಬಗ್ಗುಬಡಿದ ಟೀಂ ಇಂಡಿಯಾ, ಸರಣಿ ಸಮಬಲ

ಮೊದಲಿಗೆ ರೋಹಿತ್ ಶರ್ಮಾ ಆಕರ್ಷಕ ಶತಕ ಬಾರಿಸುವ ಮೂಲಕ ತಂಡ ಗೌರವಾನ್ವಿತ ಮೊತ್ತ ಕಲೆಹಾಕಲು ನೆರವಾದರು. ಇನ್ನು ಬೌಲಿಂಗ್‌ನಲ್ಲಿ ಅಶ್ವಿನ್‌ 5 ವಿಕೆಟ್ ಕಬಳಿಸುವ ಮೂಲಕ ಇಂಗ್ಲೆಂಡ್‌ ತಂಡವನ್ನು ಕೇವಲ 134 ರನ್‌ಗಳಿಗೆ ಆಲೌಟ್‌ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇನ್ನು ಎರಡನೇ ಇನಿಂಗ್ಸ್‌ನಲ್ಲಿ ರವಿಚಂದ್ರನ್ ಅಶ್ವಿನ್ ಸಮಯೋಚಿತ ಶತಕದ ನೆರವಿನಿಂದ ಟೀಂ ಇಂಡಿಯಾ 286 ರನ್‌ ಬಾರಿಸುವ ಮೂಲಕ ಇಂಗ್ಲೆಂಡ್‌ಗೆ ಗೆಲ್ಲಲು 482 ರನ್‌ಗಳ ಗುರಿ ನೀಡಿತ್ತು. ಈ ಬೃಹತ್ ಮೊತ್ತ ಬೆನ್ನತ್ತಿದ ಇಂಗ್ಲೆಂಡ್‌ ತಂಡಕ್ಕೆ ಟೀಂ ಇಂಡಿಯಾ ತ್ರಿವಳಿ ಸ್ಪಿನ್ನರ್‌ಗಳಾದ ರವಿಚಂದ್ರನ್ ಅಶ್ವಿನ್‌, ಅಕ್ಷರ್ ಪಟೇಲ್ ಹಾಗೂ ಕುಲ್ದೀಪ್‌ ಯಾದವ್ ಶಾಕ್‌ ನೀಡಿದರು. ಅಕ್ಷರ್ ಪಟೇಲ್‌ 5, ಅಶ್ವಿನ್ 3 ಹಾಗೂ ಕುಲ್ದೀಪ್ 2 ವಿಕೆಟ್ ಕಬಳಿಸುವ ಮೂಲಕ ಟೀಂ ಇಂಡಿಯಾ 317 ರನ್‌ಗಳ ಭಾರೀ ಗೆಲುವಿಗೆ ಕಾರಣರಾದರು.

ಟೀಂ ಇಂಡಿಯಾ ಅದ್ಭುತ ಪ್ರದರ್ಶನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಹಾಲಿ ಹಾಗೂ ಮಾಜಿ ಕ್ರಿಕೆಟಿಗರು, ನೆಟ್ಟಿಗರು ಜೈ ಹೋ ಎಂದಿದ್ದಾರೆ. ಇಂಗ್ಲೆಂಡ್‌ ಮಾಜಿ ಕ್ರಿಕೆಟಿಗ ಕೆವಿನ್ ಪೀಟರ್‌ಸನ್‌ ಹಿಂದಿಯಲ್ಲೇ ಭಾರತವನ್ನು ಸೋಲಿಸಿದ್ದಕ್ಕೆ ಧನ್ಯವಾದಗಳು ಎಂದು ಟ್ವೀಟಿಸಿದ್ದಾರೆ. 

Follow Us:
Download App:
  • android
  • ios