ಚೆನ್ನೈ(ಫೆ.13): ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್‌ ರೋಹಿತ್ ಶರ್ಮಾ ತಮ್ಮ ವೃತ್ತಿಜೀವನದ 7ನೇ ಟೆಸ್ಟ್‌ ಶತಕ ಬಾರಿಸಿ ಮಿಂಚಿದ್ದಾರೆ. ಇಂಗ್ಲೆಂಡ್‌ ವಿರುದ್ದದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ರೋಹಿತ್ ಕೇವಲ 130 ಎಸೆತಗಳನ್ನು ಎದುರಿಸಿ ಆಕರ್ಷಕ ಶತಕ ಬಾರಿಸಿ ಸಂಭ್ರಮಿಸಿದ್ದಾರೆ.

2019ರ ಅಕ್ಟೋಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ದ್ವಿಶತಕ ಚಚ್ಚಿದ್ದ ರೋಹಿತ್ ಶರ್ಮಾ ಅದಾದ ಬಳಿಕ 5 ಟೆಸ್ಟ್‌ ಪಂದ್ಯಗಳನ್ನಾಡಿದ್ದರೂ ಮೂರಂಕಿ ಮೊತ್ತ ದಾಖಲಿಸಿಲು ಹಿಟ್‌ಮ್ಯಾನ್‌ ವಿಫಲರಾಗಿದ್ದರು. ಇದರ ಬೆನ್ನಲ್ಲೇ ರೋಹಿತ್ ಮೇಲೆ ಟೀಕೆಗಳು ಆರಂಭವಾಗಿತ್ತು. ಆದರೆ ರೋಹಿತ್ ಶರ್ಮಾ ಇಂಗ್ಲೆಂಡ್‌ ವಿರುದ್ದದ ಎರಡನೇ ಟೆಸ್ಟ್‌ ಪಂದ್ಯದಲ್ಲಿ 14 ಬೌಂಡರಿ ಹಾಗೂ 2 ಆಕರ್ಷಕ ಸಿಕ್ಸರ್‌ಗಳ ನೆರವಿನಿಂದ ಮನಮೋಹಕ ಶತಕ ಬಾರಿಸಿದರು.

ಚೆನ್ನೈ ಟೆಸ್ಟ್‌: ಹಿಟ್‌ಮ್ಯಾನ್ ರೋಹಿತ್ ಶರ್ಮಾ ಆಕರ್ಷಕ ಶತಕ

ರೋಹಿತ್ ಶರ್ಮಾ ಆರಂಭಿಕನಾಗಿ ಕಣಕ್ಕಿಳಿದ ಬಳಿಕ 4ನೇ ಟೆಸ್ಟ್ ಶತಕ ಪೂರೈಸಿದ ಸಾಧನೆ ಮಾಡಿದ್ದಾರೆ. ರೋಹಿತ್ ಶರ್ಮಾ ಅವರಿಂದ ಟೀಂ ಇಂಡಿಯಾ ಇದೀಗ ಮೊತ್ತವನ್ನು ನಿರೀಕ್ಷೆ ಮಾಡುತ್ತಿದೆ. ಮಹತ್ವದ ಟೆಸ್ಟ್ ಪಂದ್ಯದಲ್ಲಿ ಸಮಯೋಚಿತ ಶತಕ ಸಿಡಿಸಿದ ಹಿಟ್‌ಮ್ಯಾನ್‌ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿವೆ.