ಈ ಬಾರಿಯ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯಪಾಕ್ ಪಂದ್ಯಗಳನ್ನು ಬಾಂಗ್ಲಾದೇಶದಲ್ಲಿ ಆಯೋಜಿಸಲು ಯಾರ ಮೇಲೂ ಒತ್ತಡ ಹೇರಿಲ್ಲಕೊನೆಗೂ ಈ ಕುರಿತಂತೆ ಸ್ಪಷ್ಟನೆ ನೀಡಿದ ಪಾಕಿಸ್ತಾನ ಕ್ರಿಕೆಟ್ ಮಂಡಳಿ
ಲಾಹೋರ್(ಏ.01): ಈ ವರ್ಷ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ತನ್ನ ಪಂದ್ಯಗಳನ್ನು ಭಾರತದ ಬದಲು ಬಾಂಗ್ಲಾದೇಶದಲ್ಲಿ ನಡೆಸುವಂತೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಮೇಲೆ ಒತ್ತಡ ಹೇರಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಸ್ಪಷ್ಟಪಡಿಸಿದೆ.
ಇತ್ತೀಚೆಗೆ ಮಾಧ್ಯಮಗಳಲ್ಲಿ ಈ ರೀತಿಯ ಸುದ್ದಿಗಳು ಪ್ರಕಟವಾದ ಬೆನ್ನಲ್ಲೇ ಪಿಸಿಬಿ ಅಧ್ಯಕ್ಷ ನಜಂ ಸೇಠಿ ಸುದ್ದಿಗೋಷ್ಠಿಯಲ್ಲಿ ‘ಏಷ್ಯಾಕಪ್‌ನಲ್ಲಿ ಭಾರತದ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ನಡೆಸುವ ಬಗ್ಗೆಯಷ್ಟೇ ಚರ್ಚಿಸಲಾಗಿದೆ. ಪಾಕಿಸ್ತಾನ ತಂಡ ಭಾರತಕ್ಕೆ ಹೋಗುವ ಬಗ್ಗೆ ಚರ್ಚೆ ನಡೆದಿಲ್ಲ’ ಎಂದು ತಿಳಿಸಿದ್ದಾರೆ.
ವಿಶ್ವಕಪ್‌ಗೂ ಮುನ್ನ ನಡೆಯಲಿರುವ ಏಷ್ಯಾಕಪ್‌ಗೆ ಪಾಕಿಸ್ತಾನ ಆತಿಥ್ಯ ವಹಿಸಲಿದ್ದು, ಭಾರತ ತಂಡ ಪಾಕಿಸ್ತಾನಕ್ಕೆ ತೆರಳಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಪಂದ್ಯಗಳನ್ನು ಯುಎಇ ಅಥವಾ ಶ್ರೀಲಂಕಾದಲ್ಲಿ ಆಯೋಜಿಸಲು ಪಿಸಿಬಿ ಒಪ್ಪಿಕೊಂಡಿದೆ. ಇದೀಗ ತನ್ನ ತಂಡವನ್ನೂ ಭಾರತಕ್ಕೆ ಕಳುಹಿಸದಿರಲು ನಿರ್ಧರಿಸಿರುವ ಪಿಸಿಬಿ, ಬಾಂಗ್ಲಾದಲ್ಲಿ ಪಂದ್ಯಗಳನ್ನು ಆಯೋಜಿಸುವಂತೆ ಐಸಿಸಿ ಹಾಗೂ ಬಿಸಿಸಿಐ ಮೇಲೆ ಒತ್ತಡ ಹೇರುತ್ತಿದೆ ಎಂದು ಈ ಹಿಂದೆ ವರದಿಯಾಗಿತ್ತು.
2013ರ ಬಳಿಕ ಭಾರತ ಹಾಗೂ ಪಾಕಿಸ್ತಾನ ನಡುವೆ ದ್ವಿಪಕ್ಷೀಯ ಕ್ರಿಕೆಟ್ ಸರಣಿ ನಡೆದಿಲ್ಲ. ಉಭಯ ರಾಷ್ಟ್ರಗಳು, ವಿಶ್ವಕಪ್, ಟಿ20 ವಿಶ್ವಕಪ್, ಚಾಂಪಿಯನ್ಸ್ ಟ್ರೋಫಿ, ಏಷ್ಯಾಕಪ್ ಟೂರ್ನಿಗಳಲ್ಲಿ ಮುಖಾಮುಖಿಯಾಗಿದೆ. ಭಾರತ ವಿರುದ್ಧ ದ್ವಿಪಕ್ಷೀಯ ಟೂರ್ನಿಗೆ ಪಾಕಿಸ್ತಾನ ಇನ್ನಿಲ್ಲದ ಪ್ರಯತ್ನ ನಡೆಸಿತ್ತು. ಐಸಿಸಿ ಮಟ್ಟದಲ್ಲಿ ಒತ್ತಡ ಹೇರುವ ಪ್ರಯತ್ನಕ್ಕೂ ಮುಂದಾಗಿತ್ತು. ಆದರೆ ಪಾಕಿಸ್ತಾನದ ಯಾವುದೇ ಪ್ರಯತ್ನಕ್ಕೆ ಬಿಸಿಸಿಐ ಸೊಪ್ಪು ಹಾಕಿಲ್ಲ. ಇದರ ನಡುವೆ ತಟಸ್ಥ ಸ್ಥಳದಲ್ಲಿ ದ್ವಿಪಕ್ಷೀಯ ಟೂರ್ನಿ ನಡೆಸಲು ಪಾಕಿಸ್ತಾನ ಮನವಿ ಮಾಡಿತ್ತು. ಈ ಮನವಿಯನ್ನೂ ಬಿಸಿಸಿಐ ತಿರಸ್ಕರಿಸಿತ್ತು.
ಐಸಿಸಿ ಏಕದಿನ ವಿಶ್ವಕಪ್‌ಗೆ ಲಂಕಾಕ್ಕಿಲ್ಲ ನೇರ ಅರ್ಹತೆ!
ವೆಲ್ಲಿಂಗ್ಟನ್: ನ್ಯೂಜಿಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ 6 ವಿಕೆಟ್ ಸೋಲು ಅನುಭವಿಸಿದ ಶ್ರೀಲಂಕಾ, ಈ ವರ್ಷದ ಐಸಿಸಿ ಏಕದಿನ ವಿಶ್ವಕಪ್‌ಗೆ ನೇರ ಅರ್ಹತೆ ಪಡೆಯಲು ವಿಫಲವಾಗಿದೆ. ಲಂಕಾ ಜೂನ್, ಜುಲೈನಲ್ಲಿ ಜಿಂಬಾಬ್ವೆಯಲ್ಲಿ ನಡೆಯಲಿರುವ ಅರ್ಹತಾ ಟೂರ್ನಿಯಲ್ಲಿ ಪಾಲ್ಗೊಳ್ಳಬೇಕಿದೆ.
ಶುಕ್ರವಾರದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಂಕಾ 41.3 ಓವರಲ್ಲಿ 157 ರನ್‌ಗೆ ಆಲೌಟ್ ಆಯಿತು. 21 ರನ್‌ಗೆ 3 ವಿಕೆಟ್ ಕಳೆದುಕೊಂಡರೂ, ವಿಲ್ ಯಂಗ್(ಔಟಾಗದೆ 86) ಹಾಗೂ ಹೆನ್ರಿ ನಿಕೋಲ್ಸ್(44)ರ ಆಕರ್ಷಕ ಆಟದ ನೆರವಿನಿಂದ 32.5 ಓವರಲ್ಲಿ 4 ವಿಕೆಟ್‌ಗೆ 159 ರನ್ ಗಳಿಸಿ ಜಯಿಸಿತು.
ಗಣಿತದಲ್ಲಿ ನಾನು ವೀಕ್, ಮಗಳು ಪ್ರಶ್ನೆ ಕೇಳಿದರೆ ಖೇಲ್ ಖತಂ ಎಂದ ವಿರಾಟ್ ಕೊಹ್ಲಿ!
ಮುಂಬರುವ ಅಕ್ಟೋಬರ್ ತಿಂಗಳಿನಿಂದ ನವೆಂಬರ್ ತಿಂಗಳಿನವರೆಗೆ ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಈಗಾಗಲೇ ನ್ಯೂಜಿಲೆಂಡ್, ಇಂಗ್ಲೆಂಡ್, ಭಾರತ, ಬಾಂಗ್ಲಾದೇಶ, ಪಾಕಿಸ್ತಾನ, ಆಸ್ಟ್ರೇಲಿಯಾ ಹಾಗೂ ಆಫ್ಘಾನಿಸ್ತಾನ ತಂಡಗಳು ನೇರ ಅರ್ಹತೆಗಿಟ್ಟಿಸಿಕೊಂಡಿವೆ.
