ಕಳೆದ ಏಪ್ರಿಲ್‌ನಲ್ಲಿ ಭಾರತದಲ್ಲಿ ನಡೆದ 2023ನೇ ಸಾಲಿನ ಐಪಿಎಲ್ ಟೂರ್ನಿಯ ವೇಳೆ ಕ್ಷೇತ್ರ ರಕ್ಷಣೆ ಮಾಡುವ ಸಂದರ್ಭದಲ್ಲಿ ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕೇನ್ ವಿಲಿಯಮ್ಸನ್, ಇದೀಗ ಮತ್ತೊಮ್ಮೆ ನಾಯಕನಾಗಿ ತಂಡಕೂಡಿಕೊಂಡಿದ್ದಾರೆ. ಇನ್ನು ಅನುಭವಿ ಎಡಗೈ ವೇಗಿ ಟ್ರೆಂಟ್ ಬೌಲ್ಟ್, ಕಿವೀಸ್ ತಂಡದ ವೇಗದ ಬೌಲಿಂಗ್ ಪಡೆಯನ್ನು ಮುನ್ನಡೆಸಲಿದ್ದಾರೆ. ಆದರೆ ಸ್ಪೋಟಕ ಬ್ಯಾಟರ್ ಫಿನ್ ಅಲೆನ್ ಹಾಗೂ ಆಡಂ ಮಿಲ್ನೆ ವಿಶ್ವಕಪ್ ಕಿವೀಸ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ. 

ಆಕ್ಲೆಂಡ್(ಸೆ.10): ಮುಂಬರುವ ಅಕ್ಟೋಬರ್ 05ರಿಂದ ಭಾರತದಲ್ಲಿ ಆರಂಭವಾಗಲಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಇದೀಗ ವಿನೂತನ ಶೈಲಿಯಲ್ಲಿ ನ್ಯೂಜಿಲೆಂಡ್ ತಂಡ ಪ್ರಕಟವಾಗಿದ್ದು, ಕ್ಯಾಪ್ಟನ್ ಕೂಲ್ ಖ್ಯಾತಿಯ ಕೇನ್ ವಿಲಿಯಮ್ಸನ್‌, ಕಿವೀಸ್ ತಂಡವನ್ನು ಮುನ್ನಡೆಸಲಿದ್ದಾರೆ. ನ್ಯೂಜಿಲೆಂಡ್‌ ತಂಡವು ವಿನೂತನ ಶೈಲಿಯಲ್ಲಿ ವಿಶ್ವಕಪ್ ಟೂರ್ನಿಗೆ ತಂಡವನ್ನು ಪ್ರಕಟಿಸಿದ್ದು, ಜತೆಗಾರ್ತಿಯರು ಹಾಗೂ ಪತ್ನಿಯರು ತಮ್ಮ ಪಾರ್ಟ್ನರ್‌ ಹೆಸರನ್ನು ವಿಶ್ವಕಪ್ ಟೂರ್ನಿಗೆ ಪ್ರಕಟಿಸಿದ್ದು, ಕಿವೀಸ್ ಕ್ರಿಕೆಟ್ ಮಂಡಳಿಯ ಈ ನಡೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ

ಕಳೆದ ಏಪ್ರಿಲ್‌ನಲ್ಲಿ ಭಾರತದಲ್ಲಿ ನಡೆದ 2023ನೇ ಸಾಲಿನ ಐಪಿಎಲ್ ಟೂರ್ನಿಯ ವೇಳೆ ಕ್ಷೇತ್ರ ರಕ್ಷಣೆ ಮಾಡುವ ಸಂದರ್ಭದಲ್ಲಿ ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕೇನ್ ವಿಲಿಯಮ್ಸನ್, ಇದೀಗ ಮತ್ತೊಮ್ಮೆ ನಾಯಕನಾಗಿ ತಂಡಕೂಡಿಕೊಂಡಿದ್ದಾರೆ. ಇನ್ನು ಅನುಭವಿ ಎಡಗೈ ವೇಗಿ ಟ್ರೆಂಟ್ ಬೌಲ್ಟ್, ಕಿವೀಸ್ ತಂಡದ ವೇಗದ ಬೌಲಿಂಗ್ ಪಡೆಯನ್ನು ಮುನ್ನಡೆಸಲಿದ್ದಾರೆ. ಆದರೆ ಸ್ಪೋಟಕ ಬ್ಯಾಟರ್ ಫಿನ್ ಅಲೆನ್ ಹಾಗೂ ಆಡಂ ಮಿಲ್ನೆ ವಿಶ್ವಕಪ್ ಕಿವೀಸ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ. 

ತಂದೆಯಾದ ಬುಮ್ರಾಗೆ ಸರ್ಪ್ರೈಸ್‌ ಗಿಫ್ಟ್ ಕೊಟ್ಟ ಪಾಕ್ ವೇಗಿ ಶಾಹೀನ್ ಅಫ್ರಿದಿ..! ಹೃದಯಗೆದ್ದ ವಿಡಿಯೋ ವೈರಲ್

2019ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆದಿದ್ದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ ತಂಡವು ಫೈನಲ್ ಪ್ರವೇಶಿಸಿತ್ತಾದರೂ, ಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ದ ಸೂಪರ್ ಓವರ್ ಹಾಗೂ ಬೌಂಡರಿ ಕೌಂಟ್ ನಿಯಮದನ್ವಯ ಸೋಲು ಅನುಭವಿಸಿತ್ತು. 

Scroll to load tweet…

ಇನ್ನು ಈ ಬಾರಿಯ ವಿಶ್ವಕಪ್ ತಂಡದಲ್ಲಿ ಫಿನ್ ಅಲೆನ್ ಹಿಂದಿಕ್ಕಿ ವಿಲ್ ಯಂಗ್ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅನುಭವಿ ಆಲ್ರೌಂಡರ್ ಜೇಮ್ಸ್ ನೀಶಮ್ ಕೂಡಾ ನ್ಯೂಜಿಲೆಂಡ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಮಾರ್ಕ್‌ ಚಾಂಪ್ಮನ್‌, ಡೆವೊನ್ ಕಾನ್‌ವೇ, ಡೇರಲ್ ಮಿಚೆಲ್ ಹಾಗೂ ಗ್ಲೆನ್ ಫಿಲಿಫ್ಸ್‌ ಇದೇ ಮೊದಲ ಬಾರಿಗೆ ವಿಶ್ವಕಪ್‌ ಟೂರ್ನಿಗೆ ಕಿವೀಸ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ವಿಶ್ವಕಪ್ ಟೂರ್ನಿಗೂ ಮುನ್ನ ಏಷ್ಯಾಕಪ್ ವೇಳೆಯಲ್ಲೇ ಟೀಂ ಇಂಡಿಯಾ ಪಾಳಯದಲ್ಲಿ ಮನೆಮಾಡಿದ ಆತಂಕ..!

ನ್ಯೂಜಿಲೆಂಡ್ ತಂಡವು ಸೆಪ್ಟೆಂಬರ್ 29ರಂದು ಪಾಕಿಸ್ತಾನ ಎದುರು ಅಭ್ಯಾಸ ಪಂದ್ಯವನ್ನು ಆಡಲಿದ್ದು, ಇದಾದ ಬಳಿಕ ಅಕ್ಟೋಬರ್ 05ರಂದು ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವನ್ನು ವಹಿಸಲಿದೆ

ವಿಶ್ವಕಪ್ ಟೂರ್ನಿಗೆ ನ್ಯೂಜಿಲೆಂಡ್ ತಂಡ ಹೀಗಿದೆ ನೋಡಿ:

ಕೇನ್ ವಿಲಿಯಮ್ಸನ್(ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಂಪ್ಮನ್, ಡೆವೊನ್ ಕಾನ್‌ವೇ, ಲಾಕಿ ಫರ್ಗ್ಯೂಸನ್, ಮ್ಯಾಟ್ ಹೆನ್ರಿ, ಟಾಮ್ ಲೇಥಮ್, ಡೇರಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಫ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋದಿ, ಟಿಮ್ ಸೌಥಿ, ವಿಲ್ ಯಂಗ್.