Asianet Suvarna News Asianet Suvarna News

ಗಂಡು ಮಗುವಿಗೆ ತಂದೆಯಾದ ಕೇನ್ ವಿಲಿಯಮ್ಸನ್‌, ಮುದ್ದಾದ ಮಗುವಿನ ಫೋಟೋ ಹಂಚಿಕೊಂಡ ಕಿವೀಸ್ ನಾಯಕ

* ಗಂಡು ಮಗುವಿಗೆ ತಂದೆಯಾದ ಕೇನ್ ವಿಲಿಯಮ್ಸನ್‌

* ಕೇನ್ ವಿಲಿಯಮ್ಸನ್‌ ನ್ಯೂಜಿಲೆಂಡ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ

* ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ ಸಿಹಿ ಸುದ್ದಿ ಹಂಚಿಕೊಂಡ ಕೂಲ್ ಕ್ಯಾಪ್ಟನ್

New Zealand Cricket Captain Kane Williamson Blessed With a Baby Boy kvn
Author
Bengaluru, First Published May 23, 2022, 1:03 PM IST

ವೆಲ್ಲಿಂಗ್ಟನ್(ಮೇ.23): ನ್ಯೂಜಿಲೆಂಡ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಕ್ರಿಕೆಟ್ ತಂಡದ ನಾಯಕ ಕೇನ್ ವಿಲಿಯಮ್ಸನ್ (Sunrisers Hyderabad Captain Kane Williamson) ಭಾನುವಾರ(ಮೇ.22) ತಮ್ಮ ಕುಟುಂಬಕ್ಕೆ ಗಂಡು ಮಗುವನ್ನು ಸ್ವಾಗತಿಸಿದ್ದಾರೆ. ಈ ಸಂತಸದ ವಿಚಾರವನ್ನು ಬಲಗೈ ಬ್ಯಾಟರ್ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣವಾದ ಇನ್‌ಸ್ಟ್ರಾಗ್ರಾಂನಲ್ಲಿ ಹಂಚಿಕೊಂಡಿದ್ದು, ತಮ್ಮ ಪತ್ನಿ, ಮಗಳು ಹಾಗೂ ಮುದ್ದಾದ ಮಗುವಿನ ಜತೆಗಿರುವ ಫೋಟೋವನ್ನು ಶೇರ್‌ ಮಾಡುವ ಮೂಲಕ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಕೇನ್ ವಿಲಿಯಮ್ಸನ್‌, ಯುವರಾಜನನ್ನು ವಿನೂತನವಾಗಿ ಸ್ವಾಗತಿಸಿದ್ದಾರೆ. ‘Welcome to the whānau little man!’ ತಮ್ಮ ಮುದ್ದಾದ ಕುಟುಂಬಕ್ಕೆ ಸ್ವಾಗತ ಎಂದು ವಿಲಿಯಮ್ಸನ್ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಪೋಸ್ಟ್‌ಗೆ ಸನ್‌ರೈಸರ್ಸ್ ಹೈದರಾಬಾದ್ ತಂಡದ ಮಾಜಿ ನಾಯಕ ಡೇವಿಡ್‌ ವಾರ್ನರ್‌, ಸಹ ಆಟಗಾರರಾಗಿದ್ದ ರಶೀದ್ ಖಾನ್ (Rashid Khan), ಜೇಸನ್ ಹೋಲ್ಡರ್ ಸೇರಿದಂತೆ ಹಲವು ಹಿರಿ-ಕಿರಿಯ ಆಟಗಾರರು ಕೇನ್ ದಂಪತಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಇನ್ನು ಕಿವೀಸ್ ತಂಡದ ದಾಖಲೆ ವೀರ ಅಜಾಜ್ ಪಟೇಲ್‌ ಕೂಡಾ ಕೇನ್ ವಿಲಿಯಮ್ಸನ್ ಕುಟುಂಬಕ್ಕೆ ಶುಭ ಹಾರೈಸಿದ್ದಾರೆ.

 
 
 
 
 
 
 
 
 
 
 
 
 
 
 

A post shared by Kane Williamson (@kane_s_w)

15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ (Indian Premier League) ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ನಾಯಕರಾಗಿ ಮುನ್ನಡೆಸಿದ್ದ ಕೇನ್ ವಿಲಿಯಮ್ಸನ್‌, ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪಾಲಿನ ಕೊನೆಯ ಪಂದ್ಯಕ್ಕೆ ಅಲಭ್ಯರಾಗಿದ್ದರು. ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದ ಕೇನ್ ವಿಲಿಯಮ್ಸನ್‌, ಪಂಜಾಬ್ ಕಿಂಗ್ಸ್ ಎದುರಿನ ಪಂದ್ಯಕ್ಕೂ ಮುನ್ನ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ತೊರೆದು ತಮ್ಮ ತವರಿಗೆ ವಾಪಾಸ್ಸಾಗಿದ್ದರು. ಹೀಗಾಗಿ ಕೇನ್‌ ವಿಲಿಯಮ್ಸನ್‌ ಬದಲಿಗೆ ಪಂಜಾಬ್ ಕಿಂಗ್ಸ್ (Punjab Kings) ಎದುರಿನ ಪಂದ್ಯಕ್ಕೆ ಭುವನೇಶ್ವರ್ ಕುಮಾರ್, ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದರು. 

IPL 2022: ದಿಢೀರ್ ಸನ್‌ರೈಸರ್ಸ್‌ ಹೈದ್ರಾಬಾದ್ ತೊರೆದು ನ್ಯೂಜಿಲೆಂಡ್‌ಗೆ ವಾಪಾಸ್ಸಾದ ವಿಲಿಯಮ್ಸನ್‌..!

ಇನ್ನು ಕೇನ್‌ ವಿಲಿಯಮ್ಸನ್ ಅನುಪಸ್ಥಿತಿಯಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ತಂಡವು ಪಂಜಾಬ್ ಕಿಂಗ್ಸ್ ಎದುರು 5 ವಿಕೆಟ್‌ಗಳ ಅಂತರದ ಹೀನಾಯ ಸೋಲು ಅನುಭವಿಸಿದೆ. ಈ ಮೂಲಕ ಟೂರ್ನಿಯಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ತಂಡವು 8ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವ ಮೂಲಕ ತನ್ನ ಅಭಿಯಾನವನ್ನು ಮುಗಿಸಿದೆ. ಕೇನ್‌ ವಿಲಿಯಮ್ಸನ್‌ 13 ಪಂದ್ಯಗಳನ್ನಾಡಿ ಕೇವಲ 216 ರನ್‌ ಗಳಿಸಲಷ್ಟೇ ಶಕ್ತರಾಗಿದ್ದರು.  

ಪಂಜಾಬ್ ಕಿಂಗ್ಸ್ ಎದುರು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಸನ್‌ರೈಸರ್ಸ್‌ ಹೈದರಾಬಾದ್ ತಂಡವು ಆರಂಭಿಕ ಆಘಾತದ ಹೊರತಾಗಿಯೂ ಅಭಿಷೇಕ್ ಶರ್ಮಾ(43) ಬಾರಿಸಿದ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 157 ರನ್ ಕಲೆಹಾಕಿತ್ತು. ಇನ್ನು ಈ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು ಕೇವಲ 5 ವಿಕೆಟ್ ಕಳೆದುಕೊಂಡು ಇನ್ನೂ 29 ಎಸೆತಗಳನ್ನು ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತು. ಪಂಜಾಬ್ ಪರ ಲಿಯಾಮ್ ಲಿವಿಂಗ್‌ಸ್ಟೋನ್ ಕೇವಲ 22 ಎಸೆತಗಳಲ್ಲಿ 2 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ ಅಜೇತ 49 ರನ್ ಬಾರಿಸುವ ಮೂಲಕ ತಂಡವನ್ನು ಸುಲಭವಾಗಿ ಗೆಲುವಿನ ದಡ ಸೇರಿಸಿದರು.

Follow Us:
Download App:
  • android
  • ios