Asianet Suvarna News Asianet Suvarna News

ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್‌ ಬಳಿಕ ಬಿ ಜೆ ವ್ಯಾಟ್ಲಿಂಗ್‌ ಕ್ರಿಕೆಟ್‌ಗೆ ಗುಡ್‌ಬೈ

* ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ ಬಳಿಕ ಬಿ ಜೆ ವ್ಯಾಟ್ಲಿಂಗ್ ಕ್ರಿಕೆಟ್‌ಗೆ ಗುಡ್‌ಬೈ

* ದಶಕಗಳ ಕಾಲ ನ್ಯೂಜಿಲೆಂಡ್ ಟೆಸ್ಟ್ ತಂಡದ ವಿಕೆಟ್‌ ಕೀಪರ್ ಆಗಿರುವ ವ್ಯಾಟ್ಲಿಂಗ್

* ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಪ್ರಶಸ್ತಿಗಾಗಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಕಾದಾಟ

New Zealand Cricketer BJ Watling to retire after ICC World Test Championship final kvn
Author
Wellington, First Published May 13, 2021, 9:35 AM IST

ವೆಲ್ಲಿಂಗ್ಟನ್(ಮೇ.13)‌: ನ್ಯೂಜಿಲೆಂಡ್‌ನ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಬಿ.ಜೆ.ವ್ಯಾಟ್ಲಿಂಗ್‌, ಮುಂದಿನ ತಿಂಗಳು ಇಂಗ್ಲೆಂಡ್‌ನಲ್ಲಿ ಭಾರತ ವಿರುದ್ಧ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದ ಬಳಿಕ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ. 

ನಾನು ನಿವೃತ್ತಿ ಪಡೆಯಲು ಇದು ಸರಿಯಾದ ಸಮಯವೆನಿಸುತ್ತಿದೆ. ನ್ಯೂಜಿಲೆಂಡ್ ತಂಡವನ್ನು ಅದರಲ್ಲೂ ಟೆಸ್ಟ್ ಜೆರ್ಸಿಯೊಂದಿಗೆ ಆಡುವುದು ನನಗೆ ಸಿಕ್ಕ ಅತಿದೊಡ್ಡ ಗೌರವ. ಬಿಳಿ ಜೆರ್ಸಿಯೊಂದಿಗಿನ ಪ್ರತಿಕ್ಷಣವನ್ನು ನಾನು ಎಂಜಾಯ್ ಮಾಡಿದ್ದೇನೆ ಎಂದು ವ್ಯಾಟ್ಲಿಂಗ್ ತಿಳಿಸಿದ್ದಾರೆ. ಇಂಗ್ಲೆಂಡ್‌ ವಿರುದ್ದದ 2 ಟೆಸ್ಟ್‌ ಹಾಗೂ ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಬಳಿಕ ವ್ಯಾಟ್ಲಿಂಗ್ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ವಿದಾಯ ಹೊಂದಲಿದ್ದಾರೆ. 

35 ವರ್ಷದ ವ್ಯಾಟ್ಲಿಂಗ್‌ ಕಳೆದೊಂದು ದಶಕದಿಂದ ನ್ಯೂಜಿಲೆಂಡ್‌ ಟೆಸ್ಟ್‌ ತಂಡದ ಪ್ರಮುಖ ಸದಸ್ಯರಾಗಿದ್ದು, ವಿಶ್ವ ಶ್ರೇಷ್ಠ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ಗಳ ಪೈಕಿ ಒಬ್ಬರೆನಿಸಿಕೊಂಡಿದ್ದಾರೆ. ಅಲ್ಲದೇ ಹಲವಾರು ದಾಖಲೆಗಳನ್ನು ಸಹ ಬರೆದಿದ್ದಾರೆ. ಐಸಿಸಿ ಟೆಸ್ಟ್ ಚಾಂಪಿಯನ್‌ ಫೈನಲ್‌ ಪಂದ್ಯವು ಜೂನ್ 18 ರಿಂದ 22ರವರೆಗೆ ಸೌಥಾಂಪ್ಟನ್‌ನಲ್ಲಿ ನಡೆಯಲಿದೆ.

ಮನೆಯಿಂದ ಹೊರಬರದಂತೆ ಕ್ರಿಕೆಟಿಗರಿಗೆ ಬಿಸಿಸಿಐ ಎಚ್ಚರಿಕೆ

2009ರಲ್ಲಿ ನ್ಯೂಜಿಲೆಂಡ್ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ವ್ಯಾಟ್ಲಿಂಗ್, 73 ಟೆಸ್ಟ್‌, 28 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅದರಲ್ಲೂ ಟೆಸ್ಟ್ ಸ್ಪೆಷಲಿಸ್ಟ್ ವಿಕೆಟ್‌ ಕೀಪರ್ ಎನಿಸಿಕೊಂಡಿದ್ದ ವ್ಯಾಟ್ಲಿಂಗ್ 38.11ರ ಬ್ಯಾಟಿಂಗ್‌ ಸರಾಸರಿಯಲ್ಲಿ 8 ಶತಕ ಹಾಗೂ 19 ಅರ್ಧಶತಕ ಸಹಿತ 3773 ರನ್‌ ಬಾರಿಸಿದ್ದಾರೆ. 

ವ್ಯಾಟ್ಲಿಂಗ್‌ ತಮ್ಮ ವಿದಾಯಕ್ಕೂ ಮುನ್ನ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಬಲಿ ಪಡೆದ ನ್ಯೂಜಿಲೆಂಡ್ ವಿಕೆಟ್ ಕೀಪರ್(), ಕಿವೀಸ್‌ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಬಾರಿಸಿದ ವಿಕೆಟ್ ಕೀಪರ್‌ ಬ್ಯಾಟ್ಸ್‌ಮನ್(3773) ಹಾಗೂ ಟೆಸ್ಟ್ ಕ್ರಿಕೆಟ್‌ನಲ್ಲಿ ವೈಯುಕ್ತಿಕ ಗರಿಷ್ಠ ರನ್‌ ಬಾರಿಸಿದ ವಿಕೆಟ್‌ ಕೂಪರ್‌ ಬ್ಯಾಟ್ಸ್‌ಮನ್(205) ಹಾಗೂ ನ್ಯೂಜಿಲೆಂಡ್ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಗರಿಷ್ಠ ಶತಕ(07) ಬಾರಿಸಿದ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್ ಎನ್ನುವ ದಾಖಲೆಯನ್ನು ನಿರ್ಮಿಸಿದ್ದಾರೆ. 
 

Follow Us:
Download App:
  • android
  • ios