Asianet Suvarna News Asianet Suvarna News

ಕಿವೀಸ್ ನಾಯಕ ಕೇನ್‌ ವಿಲಿಯಮ್ಸನ್‌ಗೆ ಕೋವಿಡ್ ದೃಢ, ಎರಡನೇ ಟೆಸ್ಟ್‌ನಿಂದ ಔಟ್..!

* ಇಂಗ್ಲೆಂಡ್ ಎದುರಿನ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ನ್ಯೂಜಿಲೆಂಡ್‌ಗೆ ಶಾಕ್

* ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್‌ಗೆ ಕೋವಿಡ್ ಸೋಂಕು ದೃಢ

* ಕೇನ್ ವಿಲಿಯಮ್ಸನ್ ಬದಲಿಗೆ ಟಾಮ್ ಲೇಥಮ್‌ಗೆ ನಾಯಕ ಪಟ್ಟ

New Zealand Skipper Testing Positive For Covid Kane Williamson Ruled Out Of Second Test Against England kvn
Author
Bengaluru, First Published Jun 10, 2022, 4:37 PM IST

ನಾಟಿಂಗ್‌ಹ್ಯಾಮ್‌(ಜೂ.10): ಲಾರ್ಡ್ಸ್‌ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್ ಎದುರು ಆಘಾತಕಾರಿ ಸೋಲು ಕಂಡಿದ್ದ ನ್ಯೂಜಿಲೆಂಡ್ ತಂಡಕ್ಕೆ (New Zealand Cricket Team) ಮತ್ತೊಂದು ಆಘಾತ ಎದುರಾಗಿದ್ದು, ಎರಡನೇ ಟೆಸ್ಟ್ ಪಂದ್ಯ ಆರಂಭಕ್ಕೆ ಕೆಲವೇ ಗಂಟೆಗಳು ಭಾಕಿ ಇರುವಾಗಲೇ ನ್ಯೂಜಿಲೆಂಡ್ ತಂಡಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಕಿವೀಸ್ ತಂಡದ ನಾಯಕ ಕೇನ್ ವಿಲಿಯಮ್ಸನ್‌ಗೆ ಕೋವಿಡ್ 19 ಸೋಂಕು (Kane Williamson Tested COVID Positive) ದೃಢವಾಗಿದ್ದು, ಇಂಗ್ಲೆಂಡ್ ಎದುರಿನ ಎರಡನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ.

ಇಂಗ್ಲೆಂಡ್ ಎದುರು ಟ್ರೆಂಟ್‌ಬ್ರಿಡ್ಜ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಕೇನ್ ವಿಲಿಯಮ್ಸನ್ ಅವರಿಗೆ ಕೋವಿಡ್ 19 ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದವು. ಇದಾರ ಬಳಿ ರಾಪಿಡ್ ಆಂಟಿಜೆನ್ ಟೆಸ್ಟ್ ನಡೆಸಿದಾಗ ಕೇನ್ ವಿಲಿಯಮ್ಸನ್ ಅವರಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಕೇನ್ ವಿಲಿಯಮ್ಸನ್‌ ಮುಂದಿನ 5 ದಿನಗಳ ಕಾಲ ಐಸೋಲೇಷನ್‌ನಲ್ಲಿರಲಿದ್ದಾರೆ ಎಂದು ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಹೆಡ್ ಕೋಚ್ ಗ್ಯಾರಿ ಸ್ಟೆಡ್ ತಿಳಿಸಿದ್ದಾರೆ. ಇನ್ನು ಇದೇ ವೇಳೆ ನ್ಯೂಜಿಲೆಂಡ್ ತಂಡದ ಉಳಿದೆಲ್ಲಾ ಆಟಗಾರರ ಕೋವಿಡ್ ಟೆಸ್ಟ್ ರಿಪೋರ್ಟ್ ನೆಗೆಟಿವ್ ಬಂದ ಹಿನ್ನಲೆಯಲ್ಲಿ ಇಂಗ್ಲೆಂಡ್ ಎದುರಿನ ಎರಡನೇ ಟೆಸ್ಟ್‌ಗೆ ಕಣಕ್ಕಿಳಿದಿದ್ದಾರೆ.

ಮೊದಲ ಟೆಸ್ಟ್ ಪಂದ್ಯದಲ್ಲಿ ಆಘಾತಕಾರಿ ಸೋಲು ಕಂಡಿದ್ದ ನ್ಯೂಜಿಲೆಂಡ್ ತಂಡವು ಎರಡನೇ ಟೆಸ್ಟ್ ಪಂದ್ಯದ ವೇಳೆ ಆತಿಥೇಯರಿಗೆ ತಿರುಗೇಟು ನೀಡುವ ಲೆಕ್ಕಾಚಾರ ಹಾಕಿಕೊಂಡಿತ್ತು. ಆದರೆ ಕೇನ್ ವಿಲಿಯಮ್ಸನ್ ಅವರ ಅಲಭ್ಯತೆ ಕಿವೀಸ್ ಪಾಳಯಕ್ಕೆ ದೊಡ್ಡ ಹಿನ್ನಡೆಯನ್ನುಂಟು ಮಾಡಿದೆ. 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆತಿಥೇಯ ಇಂಗ್ಲೆಂಡ್ ತಂಡವು ಈಗಾಗಲೇ 1-0 ಮುನ್ನಡೆ ಸಾಧಿಸಿದೆ.

Bizarre Run ಯೂರೋಪಿಯನ್ ಕ್ರಿಕೆಟ್ ಲೀಗ್‌ನಲ್ಲಿ ಕಾಮಿಡಿ ರನ್‌..! ವಿಡಿಯೋ ವೈರಲ್‌

ಕೇನ್ ವಿಲಿಯಮ್ಸನ್ ಅನುಪಸ್ಥಿತಿಯಲ್ಲಿ ನ್ಯೂಜಿಲೆಂಡ್ ತಂಡವನ್ನು ನಾಯಕನಾಗಿ ಟಾಮ್ ಲೇಥಮ್ ಮುನ್ನಡೆಸುತ್ತಿದ್ದಾರೆ. ಇಂಗ್ಲೆಂಡ್ ಎದುರಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಪ್ರವಾಸಿ ನ್ಯೂಜಿಲೆಂಡ್ ತಂಡದಲ್ಲಿ ಮೂರು ಬದಲಾವಣೆಗಳನ್ನು ಮಾಡಲಾಗಿದ್ದು, ಅಜೀಜ್ ಪಟೇಲ್ ಬದಲಿಗೆ ಮ್ಯಾಟ್ ಹೆನ್ರಿ, ಕಾಲಿನ್ ಡಿ ಗ್ರ್ಯಾಂಡ್ ಹೋಮ್ ಬದಲಿಗೆ ಮಿಚೆಲ್ ಬ್ರಾಸ್‌ವೆಲ್ ಹಾಗೂ ಕೇನ್ ವಿಲಿಯಮ್ಸನ್ ಬದಲಿಗೆ ಹೆನ್ರಿ ನಿಕೋಲ್ಸ್ ಕಿವೀಸ್ ತಂಡ ಕೂಡಿಕೊಂಡಿದ್ದಾರೆ.

ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದಿರುವ ನ್ಯೂಜಿಲೆಂಡ್ ತಂಡವು ಆತಿಥೇಯ ಇಂಗ್ಲೆಂಡ್ ಎದುರು ಉತ್ತಮ ಆರಂಭವನ್ನೇ ಪಡೆದಿದೆ. ಮೊದಲ 20 ಓವರ್‌ ಅಂತ್ಯದ ವೇಳೆಗೆ ನ್ಯೂಜಿಲೆಂಡ್ ತಂಡವು ವಿಕೆಟ್ ನಷ್ಟವಿಲ್ಲದೇ 76 ರನ್ ಬಾರಿಸಿದೆ. ಹಂಗಾಮಿ ನಾಯಕ ಟಾಮ್ ಲೇಥಮ್ 26 ರನ್ ಬಾರಿಸಿದರೆ, ಮತ್ತೋರ್ವ ಆರಂಭಿಕ ಬ್ಯಾಟರ್‌ ವಿಲ್‌ ಯಂಗ್ ಅಜೇಯ 39 ರನ್ ಬಾರಿಸಿ ಅರ್ಧಶತಕದತ್ತ ಮುನ್ನುಗ್ಗುತ್ತಿದ್ದಾರೆ.

Follow Us:
Download App:
  • android
  • ios