ಆಕ್ಲೆಂಡ್‌(ಜ.16): ಜ.24ರಿಂದ ಭಾರತ ವಿರುದ್ಧ ಆರಂಭಗೊಳ್ಳಲಿರುವ 5 ಪಂದ್ಯಗಳ ಟಿ20 ಸರಣಿಗೆ ಬುಧವಾರ ನ್ಯೂಜಿಲೆಂಡ್‌ ತಂಡ ಪ್ರಕಟಗೊಂಡಿದ್ದು, ಕೇನ್ ವಿಲಿಯಮ್ಸನ್ ತಂಡವನ್ನು ಮುನ್ನಡೆಸಲಿದ್ದಾರೆ.

ಇನ್ನು 2017ರ ಬಳಿಕ ಇದೇ ಮೊದಲ ಬಾರಿಗೆ ವೇಗಿ ಹ್ಯಾಮಿಶ್‌ ಬೆನ್ನೆಟ್‌ಗೆ ಸ್ಥಾನ ನೀಡಲಾಗಿದೆ. ತಾರಾ ವೇಗಿಗಳಾದ ಟ್ರೆಂಟ್‌ ಬೌಲ್ಟ್‌ ಹಾಗೂ ಲಾಕಿ ಫಗ್ರ್ಯೂಸನ್‌ ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರಬಿದ್ದಿರುವ ಕಾರಣ, ಬೆನ್ನೆಟ್‌ಗೆ ಸ್ಥಾನ ಸಿಕ್ಕಿದೆ.

ನ್ಯೂಜಿಲೆಂಡ್ ಪ್ರವಾಸಕ್ಕೆ ಬಲಿಷ್ಠ ಭಾರತ ತಂಡ ಪ್ರಕಟ!

ಇನ್ನುಳಿದಂತೆ ಅನುಭವಿ ಬ್ಯಾಟ್ಸ್‌ಮನ್‌ಗಳಾದ ಮಾರ್ಟಿನ್ ಗಪ್ಟಿಲ್, ರಾಸ್ ಟೇಲರ್, ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಟಿಮ್ ಸೌಥಿ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. 2020ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಉಭಯ ತಂಡಗಳಿಗೆ ಇದು ಮಹತ್ವದ ಸರಣಿಯಾಗಲಿದ್ದು, ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಲಾಗಿದೆ. 2019ರಲ್ಲಿ ಟೀಂ ಇಂಡಿಯಾ ಕಿವೀಸ್ ಪ್ರವಾಸ ಕೈಗೊಂಡಾಗ ಟಿ20 ಸರಣಿಯಲ್ಲಿ 2-1ರ ಅಂತರದ ಸೋಲು ಕಂಡಿತ್ತು.

ತಂಡ: ಕೇನ್‌ ವಿಲಿಯಮ್ಸನ್‌ (ನಾಯಕ), ಟಾಮ್‌ ಬ್ರೂಸ್‌, ಮಾರ್ಟಿನ್‌ ಗಪ್ಟಿಲ್‌, ಕಾಲಿನ್‌ ಮನ್ರೊ, ರಾಸ್‌ ಟೇಲರ್‌, ಕಾಲಿನ್‌ ಡಿ ಗ್ರಾಂಡ್‌ಹೋಮ್‌, ಸ್ಕಾಟ್‌ ಕುಗ್ಲಿಯಾನ್‌, ಡರೆಲ್‌ ಮಿಚೆಲ್‌, ಬ್ಲೇರ್‌ ಟಿಕ್ನೆರ್‌, ಮಿಚೆಲ್‌ ಸ್ಯಾಂಟ್ನರ್‌, ಟಿಮ್‌ ಸೀಫರ್ಟ್‌, ಇಶ್‌ ಸೋಧಿ, ಟಿಮ್‌ ಸೌಥಿ, ಹ್ಯಾಮಿಶ್‌ ಬೆನ್ನೆಟ್‌.