ಗೌತಮ್ ಗಂಭೀರ್ ಜತೆಗೆ ಕಿತ್ತಾಟ: ಇದೀಗ ಬಿಸಿಸಿಐಗೆ ಸ್ಪಷ್ಟ ಸಂದೇಶ ರವಾನಿಸಿದ ವಿರಾಟ್ ಕೊಹ್ಲಿ..!

ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ, ಇದೀಗ ಗೌತಮ್ ಗಂಭೀರ್ ಮಾರ್ಗದರ್ಶನದಲ್ಲಿ ಟೀಂ ಇಂಡಿಯಾ ಪರ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಇದರ ಬೆನ್ನಲ್ಲೇ ಬಿಸಿಸಿಐಗೆ ಮಹತ್ವದ ಸಂದೇಶ ರವಾನಿಸಿದ್ದಾರೆ. ಏನದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ

On Past Conflicts With Gautam Gambhir Virat Kohli Clear Message To BCCI kvn

ಬೆಂಗಳೂರು: ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡದ ನೂತನ ಹೆಡ್‌ಕೋಚ್ ಆಗಿ ನೇಮಕವಾಗಿದ್ದಾರೆ. ಗೌತಮ್ ಗಂಭೀರ್ ಟೀಂ ಇಂಡಿಯಾ ಹೆಡ್ ಕೋಚ್ ಆಗುತ್ತಿದ್ದಂತೆಯೇ ಹಲವು ಅಭಿಮಾನಿಗಳು ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ಅವರ ನಡುವಿನ ಹೊಂದಾಣಿಕೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಯಾಕೆಂದರೆ ಗೌತಮ್ ಗಂಭೀರ್ ಹಾಗೂ ವಿರಾಟ್ ಕೊಹ್ಲಿ ನಡುವೆ ಐಪಿಎಲ್ ಸಂದರ್ಭದಲ್ಲಿ ಕೆಲವು ಬಾರಿ ಮಾತಿನ ಚಕಮಕಿ ನಡೆದಿದ್ದನ್ನು ಯಾವ ಕ್ರಿಕೆಟ್ ಅಭಿಮಾನಿಯೂ ಮರೆತಿಲ್ಲ.

ರಾಹುಲ್ ದ್ರಾವಿಡ್ ಅವರ ಟೀಂ ಇಂಡಿಯಾ ಹೆಡ್ ಕೋಚ್ ಒಪ್ಪಂದಾವಧಿ ಮುಕ್ತಾಯದ ಬಳಿಕ ಇದೀಗ ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡದ ನೂತನ ಹೆಡ್ ಕೋಚ್‌ ಆಗಿ ನೇಮಕವಾಗಿದ್ದಾರೆ. ಇದೀಗ ಗೌತಮ್ ಗಂಭೀರ್ ಮಾರ್ಗದರ್ಶನದಲ್ಲಿ ವಿರಾಟ್ ಕೊಹ್ಲಿ, ಶ್ರೀಲಂಕಾ ಎದುರಿನ ಏಕದಿನ ಸರಣಿಯನ್ನಾಡಲು ಸಜ್ಜಾಗಿದ್ದಾರೆ. ಇದೇ ಮೊದಲ ಬಾರಿಗೆ ಗಂಭೀರ್ ಅವರ ಮಾರ್ಗದರ್ಶನದಲ್ಲಿ ಕೊಹ್ಲಿ ಮೈದಾನಕ್ಕಿಳಿಲು ಸಜ್ಜಾಗಿರುವುದು ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಹುಟ್ಟುಹಾಕಿದೆ.

ಪರಸ್ಪರ ಸಮ್ಮತಿಯಿಂದಲೇ ಬೇರ್ಪಟ್ಟ ಪಾಂಡ್ಯ-ನತಾಶಾ: ಮುದ್ದಾದ ಮಗ ಅಗಸ್ತ್ಯ ಜವಾಬ್ದಾರಿ ಯಾರ ಹೆಗಲಿಗೆ?

ಇದರ ಬೆನ್ನಲ್ಲೇ ಈ ವಿಚಾರವಾಗಿ ವಿರಾಟ್ ಕೊಹ್ಲಿ ಬಿಸಿಸಿಐ ಸ್ಪಷ್ಟನೆ ನೀಡಿದ್ದು, ಈ ಹಿಂದಿನ ಗಂಭೀರ್ ಜತೆಗಿನ ವಾಗ್ವಾದವು ತಮ್ಮ ಪ್ರದರ್ಶನದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು Cricbuzz ವರದಿ ಮಾಡಿದೆ. ನಾವಿಬ್ಬರೂ ತಂಡಕ್ಕೆ ಒಳಿತಾಗಬೇಕು ಎನ್ನುವ ಸಾಮಾನ್ಯ ಉದ್ದೇಶವನ್ನೇ ಇಟ್ಟುಕೊಂಡಿದ್ದೇವೆ. ಇದರಿಂದ ಭಾರತ ಕ್ರಿಕೆಟ್ ತಂಡಕ್ಕೆ ಅನುಕೂಲ ಆಗಲಿದೆ. ಇದರ ಬಗ್ಗೆ ಬಿಸಿಸಿಐ ಹೆಚ್ಚು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎನ್ನುವ ಭರವಸೆಯನ್ನು ವಿರಾಟ್ ಕೊಹ್ಲಿ ನೀಡಿದ್ದಾರೆ ಎಂದು ವರದಿಯಾಗಿದೆ.

ಈ ಮೊದಲು ಐಪಿಎಲ್ ಟೂರ್ನಿಗಳಲ್ಲಿ ಎದುರುಬದುರಾಗಿದ್ದಾಗ ಸಾಕಷ್ಟು ಬಾರಿ ಮಾತಿನ ಚಕಮಕಿ ನಡಿಸಿದ್ದ ಈ ಜೋಡಿ, ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯ ವೇಳೆ ಇಬ್ಬರೂ ಮುನಿಸು ಮರೆತು ನಗುನಗುತ್ತಾ ಮಾತಾಡಿದ್ದರು. ಗಂಭೀರ್ ಕೆಕೆಆರ್ ತಂಡದ ಮೆಂಟರ್ ಆಗಿದ್ದ ವೇಳೆಯಲ್ಲಿ ವಿರಾಟ್ ಕೊಹ್ಲಿಯನ್ನು ಆತ್ಮೀಯವಾಗಿ ಮಾತನಾಡಿಸಿದ್ದ ವಿಡಿಯೋಗಳು ಸಾಕಷ್ಟು ವೈರಲ್ ಆಗಿತ್ತು. 

ಇಂದಿನಿಂದ ಮಹಿಳಾ ಏಷ್ಯಾಕಪ್ ಟಿ20; ಭಾರತಕ್ಕಿಂದು ಪಾಕಿಸ್ತಾನ ಚಾಲೆಂಜ್‌

ಭಾರತ ಹಾಗೂ ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಜುಲೈ 27ರಿಂದ ಆರಂಭವಾಗಲಿದೆ. ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಈಗಾಗಲೇ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಘೋಷಿಸಿರುವುದರಿಂದ, ಟಿ20 ತಂಡದಲ್ಲಿ ಸ್ಥಾನ ಪಡೆದಿಲ್ಲ. ಹೀಗಾಗಿ ಆಗಸ್ಟ್ 2ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಏಕದಿನ ಸರಣಿ ವೇಳೆಗೆ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ತಂಡ ಕೂಡಿಕೊಳ್ಳಲಿದ್ದಾರೆ.

Latest Videos
Follow Us:
Download App:
  • android
  • ios