48 ವರ್ಷಗಳ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಭಾರತ ಪರ ಅಪರೂಪದ ದಾಖಲೆ ಬರೆದ ಬುಮ್ರಾ..!
ಇಲ್ಲಿನ ವಾಂಖೇಡೆ ಮೈದಾನದಲ್ಲಿ ಭಾರತ ನೀಡಿದ್ದ 358 ರನ್ ಗುರಿ ಬೆನ್ನತ್ತಿದ ಶ್ರೀಲಂಕಾ ತಂಡಕ್ಕೆ ಮೊದಲ ಎಸೆತದಲ್ಲೇ ಶಾಕ್ ನೀಡುವಲ್ಲಿ ಮಾರಕ ವೇಗಿ ಬುಮ್ರಾ ಯಶಸ್ವಿಯಾದರು. ಈ ಮೂಲಕ ಏಕದಿನ ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲಿ ಇನಿಂಗ್ಸ್‌ನ ಮೊದಲ ಎಸೆತದಲ್ಲೇ ವಿಕೆಟ್ ಕಬಳಿಸಿದ ಭಾರತದ ಮೊದಲ ಬೌಲರ್ ಎನ್ನುವ ಅಪರೂಪದ ದಾಖಲೆಗೆ ಬುಮ್ರಾ ಪಾತ್ರರಾಗಿದ್ದಾರೆ
ಮುಂಬೈ(ನ.03): 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆತಿಥೇಯ ಟೀಂ ಇಂಡಿಯಾ, ಶ್ರೀಲಂಕಾ ತಂಡವನ್ನು 302 ರನ್ ಅಂತರದಿಂದ ಮಣಿಸುವ ಮೂಲಕ ಮೊದಲ ತಂಡವಾಗಿ ಸೆಮಿಫೈನಲ್‌ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ. ಇನ್ನು ಇದೇ ಪಂದ್ಯದಲ್ಲಿ ಟೀಂ ಇಂಡಿಯಾ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ, 48 ವರ್ಷಗಳ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಭಾರತ ಪರ ಅಪರೂಪದ ದಾಖಲೆ ಬರೆಯುವಲ್ಲಿ ಯಶಸ್ವಿಯಾಗಿದೆ.
ಇಲ್ಲಿನ ವಾಂಖೇಡೆ ಮೈದಾನದಲ್ಲಿ ಭಾರತ ನೀಡಿದ್ದ 358 ರನ್ ಗುರಿ ಬೆನ್ನತ್ತಿದ ಶ್ರೀಲಂಕಾ ತಂಡಕ್ಕೆ ಮೊದಲ ಎಸೆತದಲ್ಲೇ ಶಾಕ್ ನೀಡುವಲ್ಲಿ ಮಾರಕ ವೇಗಿ ಬುಮ್ರಾ ಯಶಸ್ವಿಯಾದರು. ಈ ಮೂಲಕ ಏಕದಿನ ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲಿ ಇನಿಂಗ್ಸ್‌ನ ಮೊದಲ ಎಸೆತದಲ್ಲೇ ವಿಕೆಟ್ ಕಬಳಿಸಿದ ಭಾರತದ ಮೊದಲ ಬೌಲರ್ ಎನ್ನುವ ಅಪರೂಪದ ದಾಖಲೆಗೆ ಬುಮ್ರಾ ಪಾತ್ರರಾಗಿದ್ದಾರೆ.
ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ Net Worth ಎಷ್ಟು? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ
ಗುರಿ ಬೆನ್ನತ್ತಿದ ಲಂಕಾ ಪರ ಮೊದಲ ಎಸೆತವನ್ನು ಎದುರಿಸಿದ ಇನ್ ಫಾರ್ಮ್ ಬ್ಯಾಟರ್ ಪಥುಮ್ ನಿಸ್ಸಾಂಕ ಅವರನ್ನು ಬುಮ್ರಾ ಎಲ್‌ಬಿ ಬಲೆಗೆ ಕೆಡಹುವಲ್ಲಿ ಯಶಸ್ವಿಯಾದರು. ಅಂಪೈರ್ ಔಟ್ ಎಂದು ತೀರ್ಪಿತ್ತರು, ನಿಸ್ಸಾಂಕ ಡಿಆರ್‌ಎಸ್ ಮೊರೆ ಹೋದರು. ಆಗ ಚೆಂಡು ಲೆಗ್‌ಸ್ಟಂಪ್‌ಗೆ ಅಪ್ಪಳಿಸುವುದು ಸ್ಪಷ್ಟವಾಗಿ ಗೋಚರಿಸಿದ್ದರಿಂದ ಥರ್ಡ್ ಅಂಪೈರ್ ಕೂಡಾ ಔಟ್ ಎಂದು ಘೋಷಿಸಿದರು. ಈ ಮೂಲಕ ಈ ಸಾಧನೆ ಮಾಡಿದ ಭಾರತದ ಮೊದಲ ಬೌಲರ್ ಎನ್ನುವ ಅಪರೂಪದ ರೆಕಾರ್ಡ್‌ಗೆ ಬುಮ್ರಾ ಪಾತ್ರರಾದರು.
ಇನ್ನು ಭಾರತ ಹಾಗೂ ಶ್ರೀಲಂಕಾ ನಡುವಿನ ಪಂದ್ಯದ ಬಗ್ಗೆ ಹೇಳುವುದಾದರೇ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಟೀಂ ಇಂಡಿಯಾ ಆರಂಭದಲ್ಲೇ ನಾಯಕ ರೋಹಿತ್ ಶರ್ಮಾ(04) ವಿಕೆಟ್ ಕಳೆದುಕೊಂಡಿತು. ಇದಾದ ಬಳಿಕ ಶುಭ್‌ಮನ್ ಗಿಲ್(92), ವಿರಾಟ್ ಕೊಹ್ಲಿ(88) ಹಾಗೂ ಶ್ರೇಯಸ್ ಅಯ್ಯರ್(82) ಬಾರಿಸಿದ ಭರ್ಜರಿ ಬ್ಯಾಟಿಂಗ್ ನೆರವಿನಿಂದ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 357 ರನ್ ಕಲೆಹಾಕಿತು.
ಹ್ಯಾಟ್ರಿಕ್ ಸೋಲಿನಿಂದ ಕಂಗೆಟ್ಟಿರುವ ನ್ಯೂಜಿಲೆಂಡ್‌ಗೆ ಬಿಗ್ ಶಾಕ್..! ಮಾರಕ ವೇಗಿ ಟೂರ್ನಿಯಿಂದಲೇ ಔಟ್
ಇನ್ನು ಕಠಿಣ ಮೊತ್ತವನ್ನು ಬೆನ್ನತ್ತಿದ ಲಂಕಾ, ಟೀಂ ಇಂಡಿಯಾ ಸಂಘಟಿತ ಬೌಲಿಂಗ್ ಪ್ರದರ್ಶನದ ಎದುರು ತತ್ತರಿಸಿ ಹೋಯಿತು. ಆರಂಭದಲ್ಲಿ ಬುಮ್ರಾ ಹಾಗೂ ಸಿರಾಜ್ ದಾಳಿಗೆ ತತ್ತರಿಸಿದ ಲಂಕಾ ಕೇವಲ 3 ರನ್‌ಗೆ 4 ವಿಕೆಟ್ ಕಳೆದುಕೊಂಡಿತು. ಇದಾದ ಬಳಿಕ ಅನುಭವಿ ವೇಗಿ ಮೊಹಮ್ಮದ್ ಶಮಿ ಮತ್ತೊಮ್ಮೆ ಮಿಂಚಿನ ದಾಳಿ ನಡೆಸುವ ಮೂಲಕ ಲಂಕಾದ ಐವರು ಬ್ಯಾಟರ್‌ಗಳನ್ನು ಬಲಿ ಪಡೆದರು. ಶಮಿ ಕೇವಲ 18 ರನ್ ನೀಡಿ 5 ವಿಕೆಟ್ ಪಡೆದರೆ, ಸಿರಾಜ್ 16 ರನ್ ನೀಡಿ 3 ವಿಕೆಟ್ ಕಬಳಿಸಿದರು. ಇನ್ನು ಬುಮ್ರಾ ಹಾಗೂ ಜಡೇಜಾ ತಲಾ ಒಂದೊಂದು ವಿಕೆಟ್ ಪಡೆದರು. ಅಂತಿಮವಾಗಿ ಶ್ರೀಲಂಕಾ ತಂಡವು 19.4 ಓವರ್‌ಗಳಲ್ಲಿ ಕೇವಲ 55 ರನ್‌ಗಳಿಗೆ ಸರ್ವಪತನ ಕಾಣುವ ಮೂಲಕ 302 ರನ್‌ಗಳ ಹೀನಾಯ ಸೋಲು ಅನುಭವಿಸಿತು. ಇನ್ನು ಭಾರತ ಕ್ರಿಕೆಟ್ ತಂಡವು ಏಕದಿನ ವಿಶ್ವಕಪ್ ಇತಿಹಾಸದಲ್ಲೇ ಅತಿದೊಡ್ಡ ಅಂತರದ ಗೆಲುವು ದಾಖಲಿಸುವುದರ ಜತೆಗೆ ಮೊದಲ ತಂಡವಾಗಿ ಸೆಮಿಫೈನಲ್‌ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಯಿತು.