Asianet Suvarna News Asianet Suvarna News

ICC T20 World Cup: ಚುಟುಕು ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ಪಾಕಿಸ್ತಾನ ಕ್ರಿಕೆಟ್ ತಂಡ ಪ್ರಕಟ

ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ಪಾಕಿಸ್ತಾನ ತಂಡ ಪ್ರಕಟ
ಬಾಬರ್ ಅಜಂ ನಾಯಕ, ಆಲ್ರೌಂಡರ್ ಶಾದಾಬ್ ಖಾನ್‌ಗೆ ಉಪನಾಯಕ ಪಟ್ಟ
ಮಾರಕ ವೇಗಿ ಶಾಹೀನ್ ಅಫ್ರಿದಿಗೆ ಮಣೆ ಹಾಕಿದ ಪಾಕಿಸ್ತಾನ ಆಯ್ಕೆ ಸಮಿತಿ

Pakistan Announce T20 World Cup Squad Fakhar Zaman Relegated To Reserves kvn
Author
First Published Sep 16, 2022, 5:08 PM IST

ಇಸ್ಲಾಮಾಬಾದ್(ಸೆ.16): ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ಬಲಿಷ್ಠ ಪಾಕಿಸ್ತಾನ ಕ್ರಿಕೆಟ್ ತಂಡ ಪ್ರಕಟವಾಗಿದ್ದ, ಬಾಬರ್ ಅಜಂ ನಾಯಕನಾಗಿ ಪಾಕ್ ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನು ಆಲ್ರೌಂಡರ್ ಶಾದಬ್ ಖಾನ್‌, ಉಪನಾಯಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಏಷ್ಯಾಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ಎದುರು ಪಾಕಿಸ್ತಾನ ತಂಡವು ಸೋಲು ಅನುಭವಿಸಿದ ಬೆನ್ನಲ್ಲೇ ಹಲವು ಕ್ರಿಕೆಟಿಗರು, ಟಿ20 ವಿಶ್ವಕಪ್ ಟೂರ್ನಿಗೆ ಪಾಕ್ ತಂಡದಲ್ಲಿ ಶೋಯೆಬ್ ಮಲಿಕ್‌ಗೆ ಅವಕಾಶ ನೀಡಬೇಕು ಎನ್ನುವ ಆಗ್ರಹ ಕೇಳಿಬಂದಿತ್ತು. ಆದರೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಈ ವಾದಕ್ಕೆ ಸೊಪ್ಪು ಹಾಕಿಲ್ಲ.

ಇನ್ನು ಫಿಟ್ನೆಸ್ ಸಮಸ್ಯೆಯಿಂದ ಏಷ್ಯಾಕಪ್ ಟೂರ್ನಿಯಿಂದ ಹೊರಗುಳಿದಿದ್ದ ಪಾಕಿಸ್ತಾನ ತಂಡದ ವೇಗಿ ಶಾಹಿನ್ ಅಫ್ರಿದಿ, ಟಿ20 ವಿಶ್ವಕಪ್ ಟೂರ್ನಿಗೆ ಪಾಕಿಸ್ತಾನ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನುಳಿದಂತೆ ನಸೀಮ್ ಶಾ, ಹ್ಯಾರಿಸ್ ರೌಫ್, ಮೊಹಮ್ಮದ್ ಹೊಸನೈನ್‌, ವೇಗದ ಬೌಲರ್‌ಗಳ ರೂಪದಲ್ಲಿ ಪಾಕಿಸ್ತಾನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಏಷ್ಯಾಕಪ್ ಟೂರ್ನಿಯಲ್ಲಿ ನೀರಸ ಪ್ರದರ್ಶನ ತೋರಿದ್ದ ಫಖರ್ ಜಮಾನ್, 15 ಆಟಗಾರರ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ. ಆದರೆ ಫಖರ್ ಜಮಾನ್, ಏಷ್ಯಾಕಪ್‌, ಮೀಸಲು ಆಟಗಾರರಲ್ಲಿ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನುಳಿದಂತೆ ಅಗ್ರಕ್ರಮಾಂಕದ ಬ್ಯಾಟರ್‌ಗಳಾದ ಶಾನ್ ಮಸೂದ್, ಇಫ್ತಿಕರ್ ಅಹಮ್ಮದ್, ಮೊಹಮ್ಮದ್ ರಿಜ್ವಾನ್, ಆಸಿಫ್ ಅಲಿ, ಖುಷ್‌ದಿಲ್ ಶಾ ಪಾಕಿಸ್ತಾನ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಆಯ್ಕೆ ಮಾಡಲಾದ ತಂಡದಲ್ಲಿ ಇದೇ ಮೊದಲ ಬಾರಿಗೆ ಶಾನ್ ಮಸೂದ್‌ಗೆ ಟಿ20 ಕ್ರಿಕೆಟ್ ಮಾದರಿಗೆ ಮಣೆ ಹಾಕಲಾಗಿದೆ. ಇನ್ನು ವೇಗದ ಬೌಲರ್‌ಗಳಾದ ಮೊಹಮ್ಮದ್ ವಾಸೀಂ ಜೂನಿಯರ್ ಹಾಗೂ ಶಾಹಿನ್ ಅಫ್ರಿದಿ ಕೂಡಾ ತಂಡ ಕೂಡಿಕೊಂಡಿದ್ದಾರೆ. ಇನ್ನು ಫಖರ್ ಜಮಾನ್, ಮೊಹಮ್ಮದ್ ಹ್ಯಾರಿಸ್ ಹಾಗೂ ಶೆಹನವಾಜ್ ದಹಾನಿ ಮೀಸಲು ಆಟಗಾರರಾಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ ಎಂದು ಪಿಸಿಬಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ICC T20 World Cup ಟೂರ್ನಿಗೆ ಆಫ್ಘಾನಿಸ್ತಾನ ತಂಡ ಪ್ರಕಟ; ನಬಿಗೆ ನಾಯಕ ಪಟ್ಟ

ಏಷ್ಯಾಕಪ್ ಟೂರ್ನಿಯ ವೇಳೆ ಸೊಂಟ ನೋವಿನಿಂದ ಬಳಲುತ್ತಿದ್ದ ವಾಸೀಂ ಜೂನಿಯರ್ ಸಂಪೂರ್ಣ ಗುಣಮುಖರಾಗಿದ್ದು, ತಂಡದಲ್ಲಿ ಅವಕಾಶ ಕಲ್ಪಿಸಲಾಗಿದೆ. ಇನ್ನು ಮೊಣಕಾಲು ಗಾಯದ ಸಮಸ್ಯೆಯಿಂದಾಗಿ ಏಷ್ಯಾಕಪ್ ಟೂರ್ನಿಯಿಂದ ಹೊರಗುಳಿದಿದ್ದ ಶಾಹಿನ್ ಅಫ್ರಿದಿ, ಲಂಡನ್‌ನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿದ್ದು, ಮುಂದಿನ ತಿಂಗಳ ಆರಂಭದಲ್ಲಿ ಅಭ್ಯಾಸ ಶುರುಮಾಡುವ ವಿಶ್ವಾಸವಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಟಿ20 ವಿಶ್ವಕಪ್ ಟೂರ್ನಿಗೆ ಪಾಕಿಸ್ತಾನ ಕ್ರಿಕೆಟ್ ತಂಡ ಹೀಗಿದೆ ನೋಡಿ 

ಬಾಬರ್ ಅಜಂ(ನಾಯಕ), ಶಾದಾಬ್ ಖಾನ್(ಉಪನಾಯಕ), ಆಸಿಫ್ ಅಲಿ, ಹೈದರ್ ಅಲಿ, ಹ್ಯಾರಿಸ್ ರೌಫ್, ಇಫ್ತಿಕರ್ ಅಹಮ್ಮದ್, ಖುಷ್‌ದಿಲ್ ಶಾ, ಮೊಹಮ್ಮದ್ ಹೊಸನೈನ್, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸೀಂ, ನಸೀಂ ಶಾ, ಶಾಹೀನ್ ಶಾ ಅಫ್ರಿದಿ, ಶಾನ್ ಮಸೂದ್, ಉಸ್ಮಾನ್ ಖಾದೀರ್.

ಮೀಸಲು ಆಟಗಾರರು: ಫಖರ್ ಜಮಾನ್, ಮೊಹಮ್ಮದ್ ಹ್ಯಾರಿಸ್, ಶೆಹನವಾಜ್ ದಹಾನಿ.

Follow Us:
Download App:
  • android
  • ios