ಕರಾಚಿ(ಜ.30): ಸ್ಪಿನ್ನರ್‌ಗಳಾದ ನೌಮನ್‌ ಅಲಿ ಹಾಗೂ ಯಾಸಿರ್‌ ಶಾ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ, ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ 7 ವಿಕೆಟ್‌ಗಳ ಸೋಲು ಅನುಭವಿಸಿದೆ. 

3ನೇ ದಿನದಂತ್ಯಕ್ಕೆ 4 ವಿಕೆಟ್‌ ನಷ್ಟಕ್ಕೆ 187 ರನ್‌ ಗಳಿಸಿದ್ದ ದಕ್ಷಿಣ ಆಫ್ರಿಕಾ 4ನೇ ದಿನವಾದ ಶುಕ್ರವಾರ 2ನೇ ಇನ್ನಿಂಗ್ಸ್‌ನಲ್ಲಿ 245 ರನ್‌ಗಳಿಗೆ ಆಲೌಟ್‌ ಆಯಿತು. ನೌಮನ್ ಅಲಿ 5 ಹಾಗೂ ಯಾಸಿರ್ ಶಾ 4 ವಿಕೆಟ್‌ ಕಬಳಿಸಿದರು. 

ಮೊದಲ ಟೆಸ್ಟ್: ಹರಿಣಗಳ ವಿರುದ್ದ ಜಯದ ನಿರೀಕ್ಷೆಯಲ್ಲಿ ಪಾಕ್‌

ಇನ್ನು ದಕ್ಷಿಣ ಆಫ್ರಿಕಾ ನೀಡಿದ್ದ 88 ರನ್‌ಗಳ ಸುಲಭ ಗುರಿ ಬೆನ್ನತ್ತಿದ ಪಾಕಿಸ್ತಾನ, 3 ವಿಕೆಟ್‌ ಕಳೆದುಕೊಂಡು ಗುರಿ ತಲುಪಿ, 2 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು. 14 ವರ್ಷಗಳ ಬಳಿಕ ದಕ್ಷಿಣ ಆಫ್ರಿಕಾ ಪಾಕಿಸ್ತಾನ ಪ್ರವಾಸ ಕೈಗೊಂಡಿದೆ. ಇದೀಗ ಹರಿಣಗಳ ಪಡೆ ಮೊದಲ ಪಂದ್ಯದಲ್ಲೇ ಆಘಾತಕಾರಿ ಸೋಲು ಕಂಡಿದೆ.

ಇನ್ನು ಎರಡನೇ ಟೆಸ್ಟ್‌ ಪಂದ್ಯ ಫೆಬ್ರವರಿ 04ರಿಂದ ರಾವಲ್ಪಿಂಡಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಮೈದಾನದಲ್ಲಿ ಆರಂಭವಾಗಲಿದ್ದು, ಆ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನಕ್ಕೆ ತಿರುಗೇಟು ನೀಡುವ ಲೆಕ್ಕಾಚಾರದಲ್ಲಿದೆ ಕ್ವಿಂಟನ್ ಡಿ ಕಾಕ್ ನೇತೃತ್ವದ ಹರಿಗಳ ಪಡೆ.

ಸ್ಕೋರ್‌:

ದ.ಆಫ್ರಿಕಾ 220 ಹಾಗೂ 245

ಪಾಕ್‌ 378 ಹಾಗೂ 90/3