Asianet Suvarna News Asianet Suvarna News

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಪಾಕ್ ಮಾಜಿ ನಾಯಕ ಅಝರ್ ಅಲಿ..!

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಪಾಕಿಸ್ತಾನ ಕ್ರಿಕೆಟಿಗ ಅಝರ್ ಅಲಿ
ಪಾಕಿಸ್ತಾನ ತಂಡವನ್ನು 9 ಟೆಸ್ಟ್ ಪಂದ್ಯಗಳಲ್ಲಿ ಮುನ್ನಡೆಸಿದ್ದ ಅಝರ್ ಅಲಿ
ಪಾಕಿಸ್ತಾನ ಪರ 5ನೇ ಗರಿಷ್ಠ ಟೆಸ್ಟ್ ಸ್ಕೋರರ್ ಆಗಿ ಹೊರಹೊಮ್ಮಿರುವ ಅಲಿ

Pakistan former Captain Azhar Ali announces retirement from international cricket kvn
Author
First Published Dec 16, 2022, 3:48 PM IST

ಕರಾಚಿ(ಡಿ.16): ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಅಝರ್ ಅಲಿ ಇಂದು(ಡಿ.16) ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಇಂಗ್ಲೆಂಡ್ ವಿರುದ್ದ ಕರಾಚಿಯಲ್ಲಿ ನಡೆಯಲಿರುವ ಮೂರನೇ ಟೆಸ್ಟ್‌ ಪಂದ್ಯವು ಅಝರ್‌ ಅಲಿ ಪಾಲಿಗೆ ಕೊನೆಯ ಅಂತಾರಾಷ್ಟ್ರೀಯ ಪಂದ್ಯವೆನಿಸಿಕೊಳ್ಳಲಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಲು ಇದು ಸರಿಯಾದ ಕಾಲವಲ್ಲ ಎಂದು ತೀರ್ಮಾನಿಸಿ ಈ ನಿರ್ಧಾರ ಕೈಗೊಂಡಿರುವುದಾಗಿ 37 ವರ್ಷದ ಅಝರ್‌ ಅಲಿ ಹೇಳಿದ್ದಾರೆ. ಅಝರ್ ಅಲಿ 2016ರಿಂದ 2020ರ ಅವಧಿಯಲ್ಲಿ 9 ಟೆಸ್ಟ್‌ ಪಂದ್ಯಗಳಲ್ಲಿ ನಾಯಕನಾಗಿ ಪಾಕಿಸ್ತಾನ ತಂಡವನ್ನು ಮುನ್ನಡೆಸಿದ್ದರು.

2017ರಲ್ಲಿ ನಡೆದ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಪಾಕಿಸ್ತಾನ ತಂಡವು ಚಾಂಪಿಯನ್ ಆಗುವಲ್ಲಿ ಮಹತ್ತರ ಪಾತ್ರವಹಿಸಿದ್ದ ಅಝರ್ ಅಲಿ,  ಮರುವರ್ಷ ಅಂದರೆ 2018ರಲ್ಲಿ ಏಕದಿನ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು. ಪಾಕಿಸ್ತಾನ ತಂಡದ ಪರ ಇದುವರೆಗೂ 96 ಟೆಸ್ಟ್‌ ಪಂದ್ಯಗಳನ್ನಾಡಿ 42.49ರ ಬ್ಯಾಟಿಂಗ್ ಸರಾಸರಿಯಲ್ಲಿ 7,097 ರನ್‌ ಬಾರಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಪಾಕಿಸ್ತಾನ ಪರ ಗರಿಷ್ಠ ರನ್ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ 5ನೇ ಸ್ಥಾನ ಪಡೆದಿದ್ದಾರೆ. ಇನ್ನು ಪಾಕಿಸ್ತಾನ ಪರ ಟೆಸ್ಟ್‌ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಬಾರಿಸಿದ ದಾಖಲೆ ಯೂನಿಸ್‌ ಖಾನ್(10,099) ಹೆಸರಿನಲ್ಲಿದೆ. ಇನ್ನುಳಿದಂತೆ ಜಾವೆದ್‌ ಮಿಯಾಂದಾದ್(8,832), ಇಂಜಮಾಮ್‌ ಉಲ್‌ ಹಕ್(8,829) ಹಾಗೂ ಮೊಹಮ್ಮದ್ ಯೂಸುಫ್‌(7,530) ಮೊದಲ 4 ಸ್ಥಾನ ಪಡೆದಿದ್ದಾರೆ.

ಟೀಂ ಇಂಡಿಯಾ ಆಟಗಾರರ ವಾರ್ಷಿಕ ವೇತನ ಹೆಚ್ಚಳಕ್ಕೆ BCCI ಚಿಂತನೆ?

ಇಂಗ್ಲೆಂಡ್‌ ಎದುರು ರಾವಲ್ಪಿಂಡಿಯಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಅಝರ್ ಅಲಿ 67 ರನ್‌ ಬಾರಿಸಿದ್ದರು. ಆ ಪಂದ್ಯದಲ್ಲಿ ಪಾಕಿಸ್ತಾನವು ಸೋಲು ಅನುಭವಿಸಿತ್ತು. ಇನ್ನು ಎರಡನೇ ಟೆಸ್ಟ್‌ ಪಂದ್ಯದಿಂದ ಅಝರ್ ಅಲಿ ಅವರನ್ನು ಕೈಬಿಡಲಾಗಿತ್ತು. ಎರಡನೇ ಟೆಸ್ಟ್ ಪಂದ್ಯದಲ್ಲೂ ಪಾಕಿಸ್ತಾನ ತಂಡವು ರೋಚಕ ಸೋಲು ಅನುಭವಿಸಿತ್ತು. ಇದರೊಂದಿಗೆ ಬೆನ್ ಸ್ಟೋಕ್ಸ್‌ ನೇತೃತ್ವದ ಇಂಗ್ಲೆಂಡ್ ತಂಡವು ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ 2-0 ಅಂತರದಲ್ಲಿ ಟೆಸ್ಟ್ ಸರಣಿಯನ್ನು ಕೈವಶ ಮಾಡಿಕೊಂಡಿತ್ತು.

"ನನ್ನ ದೇಶವನ್ನು ಅತ್ಯುನ್ನತ ಮಟ್ಟದಲ್ಲಿ ಪ್ರತಿನಿಧಿಸಲು ಅವಕಾಶ ಸಿಕ್ಕಿದ್ದು ನನ್ನ ಪಾಲಿನ ಸೌಭಾಗ್ಯವೆಂದು ಭಾವಿಸುತ್ತೇನೆ. ಈ ನಿರ್ಧಾರವನ್ನು ತೆಗೆದುಕೊಳ್ಳುವುದು ಅತ್ಯಂತ ಕಠಿಣ ಕ್ಷಣ. ತುಂಬಾ ಆಲೋಚನೆ ಮಾಡಿದ ಬಳಿಕ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಘೋಷಿಸುವುದು ಸರಿಯಾದ ಕ್ಷಣವೆಂದು ಭಾವಿಸಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಅಝರ್ ಅಲಿ ಹೇಳಿದ್ದಾರೆ.

Follow Us:
Download App:
  • android
  • ios