Asianet Suvarna News Asianet Suvarna News

Inzamam ul Haq Claims ರವಿಶಾಸ್ತ್ರಿ-ವಿರಾಟ್ ಕೊಹ್ಲಿ ಜತೆ ಬಿಸಿಸಿಐ ಸಂಬಂಧ ಸರಿಯಿರಲಿಲ್ಲವೆಂದ ಪಾಕ್ ಮಾಜಿ ನಾಯಕ..!

* ಬಿಸಿಸಿಐ, ಕೊಹ್ಲಿ-ಶಾಸ್ತ್ರಿ ನಡುವಿನ ಸಂಬಂಧದ ಕುರಿತಂತೆ ಇಂಜಿ ಗಂಭೀರ ಆರೋಪ

* ಕೊಹ್ಲಿ-ಶಾಸ್ತ್ರಿಗೆ ಮುಂದಿನ ಕೋಚ್ ಯಾರಾಗಲಿದ್ದಾರೆ ಎಂದು ಗೊತ್ತಿತ್ತು

* ಟಿ20 ವಿಶ್ವಕಪ್‌ಗೂ ಮುನ್ನ ಟಿ20 ನಾಯಕತ್ವಕ್ಕೆ ವಿದಾಯ ಘೋಷಿಸಿದ್ದ ವಿರಾಟ್ ಕೊಹ್ಲಿ

Pakistan Legend Inzamam ul Haq says relations between Virat Kohli Ravi Shastri and BCCI were not great kvn
Author
Bengaluru, First Published Nov 27, 2021, 6:02 PM IST

ನವದೆಹಲಿ(ನ.27): ಟಿ20 ವಿಶ್ವಕಪ್‌ ಟೂರ್ನಿ (ICC T20 World Cup) ಆರಂಭಕ್ಕೂ ಮುನ್ನವೇ ವಿರಾಟ್ ಕೊಹ್ಲಿ (Virat Kohli) ಹಾಗೂ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ (Ravi Shastri) ಜತೆ ಬಿಸಿಸಿಐ ಸಂಬಂಧ ಹದಗೆಟ್ಟಿತ್ತು ಎಂದು ಪಾಕಿಸ್ತಾನ ತಂಡದ ದಿಗ್ಗಜ ಕ್ರಿಕೆಟಿಗ ಇಂಜಮಾಮ್ ಉಲ್ ಹಕ್ (Inzamam ul Haq) ಅಭಿಪ್ರಾಯಪಟ್ಟಿದ್ದಾರೆ. ಈ ಕಾರಣಕ್ಕಾಗಿಯೇ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೂ ಮುನ್ನವೇ ವಿರಾಟ್ ಕೊಹ್ಲಿ ನಾಯಕತ್ವದಿಂದ ಕೆಳಗಿಳಿಯಲು ಘೋಷಿಸಿದ್ದು ಎನ್ನುವ ಗಂಭೀರ ಆರೋಪವನ್ನು ಇಂಜಿ ಮಾಡಿದ್ದಾರೆ.

ಪಾಕಿಸ್ತಾನದ ARY ನ್ಯೂಸ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಇಂಜಮಾಮ್, ಮಹತ್ವದ ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೂ ಮುನ್ನವೇ ತಾವು ಚುಟುಕು ಕ್ರಿಕೆಟ್ ವಿಶ್ವಕಪ್‌ ಬಳಿಕ ಟೀಂ ಇಂಡಿಯಾ (Team India) ನಾಯಕತ್ವದಿಂದ ಕೆಳಗಿಳಿಯುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ್ದರು. ಇದು ವಿರಾಟ್ ಕೊಹ್ಲಿ ಮೇಲೆ ಎಷ್ಟು ಒತ್ತಡವಿತ್ತು ಎನ್ನುವುದಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಇದರ ಜತೆಗೆ ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಂನಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದನ್ನು ತೋರಿಸುತ್ತಿತ್ತು ಎಂದು ಪಾಕಿಸ್ತಾನದ ಮಾಜಿ ನಾಯಕ ಇಂಜಿ ಅಭಿಪ್ರಾಯಪಟ್ಟಿದ್ದಾರೆ.

ಒಂದು ವೇಳೆ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಟಿ20 ವಿಶ್ವಕಪ್ ಜಯಿಸಿದ್ದರೇ, ಕೊಹ್ಲಿ ಹಾಗೂ ರವಿಶಾಸ್ತ್ರಿ ಅವರನ್ನೇ ಮುಂದುವರೆಸುತ್ತಿತ್ತಾ ಎಂದು ಪ್ರಶ್ನಿಸಿದ್ದಾರೆ. ಇದರರ್ಥ ಟೀಂ ಇಂಡಿಯಾದಲ್ಲಿ ಎಲ್ಲವೂ ಸರಿಯಿಲ್ಲ ಎಂದು ಸ್ಪಷ್ಟವಾಗುತ್ತದೆ. ವಿರಾಟ್ ಕೊಹ್ಲಿ, ರವಿಶಾಸ್ತ್ರಿ ಹಾಗೂ ಬಿಸಿಸಿಐ (BCCI) ನಡುವಿನ ಸಂಬಂಧ ಹಳಸಿದೆ ಎನ್ನುವುದು ಅರಿವಿಗೆ ಬರುತ್ತದೆ ಎಂದು ಇಂಜಮಾಮ್ ಹೇಳಿದ್ದಾರೆ

ಟಿ20 ವಿಶ್ವಕಪ್‌ ಬಳಿಕ ರಾಹುಲ್‌ ದ್ರಾವಿಡ್ (Rahul Dravid) ಟೀಂ ಇಂಡಿಯಾ ಕೋಚ್ ಆಗಲಿದ್ದಾರೆ ಎನ್ನುವುದು ಅವರಿಗೆ ಗೊತ್ತಿತ್ತು ಎಂದು ಇಂಜಿ ಹೇಳಿದ್ದಾರೆ. ಐಸಿಸಿ ಟಿ20 ವಿಶ್ವಕಪ್ ಮುಕ್ತಾಯದ ಬಳಿಕ ರವಿಶಾಸ್ತ್ರಿಯವರ ಭಾರತ ಕ್ರಿಕೆಟ್‌ ತಂಡದ ಹೆಡ್‌ ಕೋಚ್ ಒಪ್ಪಂದಾವಧಿ ಮುಕ್ತಾಯವಾಗುತ್ತಿತ್ತು. ಕೊಹ್ಲಿ-ರವಿಶಾಸ್ತ್ರಿ ಜೋಡಿ ಭಾರತಕ್ಕೆ ಐಸಿಸಿ ಟ್ರೋಫಿ ಗೆದ್ದುಕೊಡಲು ವಿಫಲವಾಗಿತ್ತು. ಅದರಲ್ಲೂ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ (World Test Championship Final) ಮುಕ್ತಾಯದ ಬಳಿಕ ತಂಡದ ಆಯ್ಕೆ ಹಾಗೂ ಪ್ರದರ್ಶನದ ಕುರಿತಂತೆ ಬಿಸಿಸಿಐ ಅಸಮಾಧಾನಗೊಂಡಿತ್ತು ಎಂದೆಲ್ಲಾ ವರದಿಯಾಗಿತ್ತು.

T20 World Cup Ind vs Pak ಪಂದ್ಯ ಆರಂಭಕ್ಕೂ ಮುನ್ನವೇ ಪಾಕ್‌ಗೆ ಟೀಂ ಇಂಡಿಯಾ ಹೆದರಿತ್ತು..!

ವಿರಾಟ್ ಕೊಹ್ಲಿ ನಾಯಕತ್ವದಿಂದ ಕೆಳಗಿಳಿಯುವುದಾಗಿ ಘೋಷಿಸುತ್ತಿದ್ದಂತೆಯೇ ನಾನು ಈ ಮಾತನ್ನು ಹೇಳಿದ್ದೆ. ಮುಂದೆ ದೊಡ್ಡ ಟೂರ್ನಿ ಆಡುವ ಸಂದರ್ಭದಲ್ಲಿ ದಿಢೀರ್ ಎನ್ನುವಂತೆ ನಾಯಕತ್ವಕ್ಕೆ ವಿದಾಯ ಘೋಷಿಸುವುದು ಉತ್ತಮ ಬೆಳವಣಿಗೆಯಲ್ಲ. ಇದು ನಾಯಕನ ಮೇಲೆ ಎಷ್ಟು ಒತ್ತಡವಿದೆ ಎನ್ನುವುದನ್ನು ಸೂಚಿಸುತ್ತದೆ. ಅವರೆಲ್ಲರಿಗೂ ಗೊತ್ತಿತ್ತು, ಮುಂಬರುವ ದಿನಗಳಲ್ಲಿ ರವಿಶಾಸ್ತ್ರಿ ಸ್ಥಾನವನ್ನು ರಾಹುಲ್ ದ್ರಾವಿಡ್ ತುಂಬಲಿದ್ದಾರೆಂದು ಎಂದು ಇಂಜಿ ಹೇಳಿದ್ದರು.

ಯುಎಇನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಮೊದಲ ಪಂದ್ಯದಲ್ಲೇ ಪಾಕಿಸ್ತಾನ ಎದುರು 10 ವಿಕೆಟ್‌ಗಳ ಅಂತರದ ಹೀನಾಯ ಸೋಲು ಕಂಡಿತ್ತು. ಈ ಮೂಲಕ ವಿಶ್ವಕಪ್ ಇತಿಹಾಸದಲ್ಲಿ ಮೊದಲ ಬಾರಿಗೆ ಪಾಕಿಸ್ತಾನ ಎದುರು ಭಾರತ ಕ್ರಿಕೆಟ್‌ ತಂಡವು ಸೋಲಿನ ಮುಖಭಂಗ ಅನುಭವಿಸಿತ್ತು. ಇದಾದ ನ್ಯೂಜಿಲೆಂಡ್ ವಿರುದ್ದದ ಮಾಡು ಇಲ್ಲವೇ ಮಡಿ ಪಂದ್ಯದಲ್ಲೂ 8 ವಿಕೆಟ್‌ಗಳ ಸೋಲು ಕಂಡಿತ್ತು. ಇನ್ನು ಕೊನೆಯ ಮೂರು ಪಂದ್ಯಗಳಲ್ಲಿ ಭಾರತ ಭರ್ಜರಿ ಗೆಲುವು ದಾಖಲಿಸಿತಾದರೂ ಸೆಮೀಸ್‌ಗೇರಲು ವಿಫಲವಾಗಿತ್ತು. 

ಯುಎಇ ಚರಣದ ಐಪಿಎಲ್ (IPL 2021) ಟೂರ್ನಿ ಆರಂಭಕ್ಕೂ ಮುನ್ನ ಅಂದರೆ ಸೆಪ್ಟೆಂಬರ್ 16, 2021ರಂದು ವಿರಾಟ್ ಕೊಹ್ಲಿ ತಾವು ಮುಂಬರುವ ಟಿ20 ವಿಶ್ವಕಪ್ ಮುಕ್ತಾಯದ ಬಳಿಕ ಟೀಂ ಇಂಡಿಯಾ ಟಿ20 ನಾಯಕತ್ವದಿಂದ ಕೆಳಗಿಳಿಯುವುದಾಗಿ ಘೋಷಿಸಿದ್ದರು. ಇದು ಕ್ರಿಕೆಟ್ ವಲಯದಲ್ಲಿ ಸಾಕಷ್ಟು ಸಂಚಲನವನ್ನುಂಟು ಮಾಡಿತ್ತು. ಇದಾದ ಬಳಿಕ ಟೀಂ ಇಂಡಿಯಾ ಟಿ20 ನಾಯಕರಾಗಿ ರೋಹಿತ್ ಶರ್ಮಾ ನೇಮಕವಾಗಿದ್ದಾರೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ನ್ಯೂಜಿಲೆಂಡ್ ವಿರುದ್ದ ತವರಿನಲ್ಲಿ ನಡೆದ 3 ಪಂದ್ಯಗಳ ಟಿ20 ಸರಣಿಯನ್ನು ಭಾರತ ಕ್ಲೀನ್ ಸ್ವೀಪ್ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

Follow Us:
Download App:
  • android
  • ios