ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಎತ್ತಂಗಡಿಯಾಗುವ ಸಾಧ್ಯತೆಯಿದೆ. ಇದರ ನಡುವೆಯೇ ಪಿಸಿಬಿ ಮುಖ್ಯಸ್ಥರು ನಮ್ಮಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಸ್ಟೇಡಿಯಂ ಇಲ್ಲವೆಂದಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಕರಾಚಿ: 2025ರಲ್ಲಿ ಪಾಕಿಸ್ತಾನದಲ್ಲಿ ನಿಗದಿಯಾಗಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿ ಅಲ್ಲಿಂದ ಬೇರೆಡೆಗೆ ಸ್ಥಳಾಂತರಗೊಳ್ಳುವುದು ಬಹುತೇಕ ಖಚಿತ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಭದ್ರತಾ ದೃಷ್ಟಿಯಿಂದ ಭಾರತ ತಂಡ ಪಾಕ್‌ಗೆ ತೆರಳುವ ಸಾಧ್ಯತೆಯಿಲ್ಲ. ಹೀಗಾಗಿ ಟೂರ್ನಿ ಸ್ಥಳಾಂತರಕ್ಕೆ ಐಸಿಸಿಗೆ ಬಿಸಿಸಿಐ ಮಾಹಿತಿ ನೀಡಿದ್ದು, ಟೂರ್ನಿ ಸ್ಥಳಾಂತರಕ್ಕೆ ಮನವಿ ಸಲ್ಲಿಸಿದೆ ಎಂದು ಹೇಳಲಾಗುತ್ತಿದೆ. 

ಈ ನಡುವೆ, ಪಾಕ್‌ ಕ್ರಿಕೆಟ್‌ ಮಂಡಳಿ(ಪಿಸಿಬಿ) 500 ಕೋಟಿ ಪಾಕಿಸ್ತಾನಿ ರುಪೀಸ್‌ಗಿಂತಲೂ ಹೆಚ್ಚಿನ ಮೊತ್ತದಲ್ಲಿ ಕ್ರೀಡಾಂಗಣ ನವೀಕರಣಕ್ಕೆ ಕೈಹಾಕಿದೆ. ಒಂದು ವೇಳೆ ಟೂರ್ನಿ ಬೇರೆಡೆಗೆ ಸ್ಥಳಾಂತರಗೊಂಡರೆ ಪಿಸಿಬಿಗೆ ಭಾರಿ ನಷ್ಟ ಎದುರಾಗುವ ಆತಂಕ ಎದುರಾಗಿದೆ. ಆದರೆ ಟೂರ್ನಿ ಪಾಕಿಸ್ತಾನದಲ್ಲೇ ನಡೆಯಲಿದೆ ಎಂದು ಪಿಸಿಬಿ ವಿಶ್ವಾಸ ವ್ಯಕ್ತಪಡಿಸಿದೆ.

ವಿನೇಶ್ ಫೋಗತ್ ಅರ್ಜಿ ವಜಾಗೊಂಡಿದ್ದು ಹೇಗೆ? ಪದಕದ ಕೊನೆಯ ಆಸೆ ನುಚ್ಚು ನೂರಾದ ಕಾರಣ ಬಹಿರಂಗ!

ಅಂತಾರಾಷ್ಟ್ರೀಯ ದರ್ಜೆ ಕ್ರೀಡಾಂಗಣ ಪಾಕ್‌ನಲ್ಲಿಲ್ಲ: ಪಿಸಿಬಿ ಅಧ್ಯಕ್ಷ!

ಕರಾಚಿ: 2025ರ ಚಾಂಪಿಯನ್ಸ್‌ ಟ್ರೋಫಿ ಆತಿಥ್ಯ ಹಕ್ಕು ಹೊಂದಿರುವ ಪಾಕಿಸ್ತಾನದಲ್ಲಿ ಯಾವುದೇ ಕ್ರೀಡಾಂಗಣ ಅಂತಾರಾಷ್ಟ್ರೀಯ ದರ್ಜೆಯಲ್ಲಿಲ್ಲ ಎಂದು ಸ್ವತಃ ಪಾಕ್‌ ಕ್ರಿಕೆಟ್ ಮಂಡಳಿ(ಪಿಸಿಬಿ) ಅಧ್ಯಕ್ಷ ಮೊಹ್ಸಿನ್‌ ನಖ್ವಿ ಹೇಳಿದ್ದಾರೆ. 

ಸೋಮವಾರ ಲಾಹೋರ್‌ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು, ‘ಅಂತಾರಾಷ್ಟ್ರೀಯ ಕ್ರೀಡಾಂಗಣಕ್ಕೂ ನಮ್ಮಲ್ಲಿರುವ ಕ್ರೀಡಾಂಗಣಗಕ್ಕೂ ತುಂಬಾ ವ್ಯತ್ಯಾಸವಿದೆ. ನಮ್ಮ ಯಾವುದೇ ಕ್ರೀಡಾಂಗಣಗಳು ಅಂತರಾಷ್ಟ್ರೀಯ ಗುಣಮಟ್ಟವನ್ನು ಹೊಂದಿಲ್ಲ’ ಎಂದರು. ಆದರೆ ಚಾಂಪಿಯನ್ಸ್‌ ಟ್ರೋಫಿಗೂ ಮುನ್ನ ಕ್ರೀಡಾಂಗಣಗಳು ಸಿದ್ಧಗೊಳ್ಳುವುದಾಗಿ ಭರವಸೆ ವ್ಯಕ್ತಪಡಿಸಿದ್ದಾರೆ.

ಏಕದಿನ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಶತಕ ಸಿಡಿಸಿದ ಟಾಪ್ 8 ದೇಶಗಳಿವು..! ಆಸೀಸ್‌ಗೆ ಎರಡನೇ ಸ್ಥಾನ..!

ಮಹಿಳಾ ಟಿ20 ವಿಶ್ವಕಪ್‌ ಯುಎಇಗೆ ಸ್ಥಳಾಂತರ?

ದುಬೈ: ಅಕ್ಟೋಬರ್ 3ರಿಂದ 20ರ ವರೆಗೂ ನಿಗದಿಯಾಗಿರುವ ಮಹಿಳಾ ಟಿ20 ವಿಶ್ವಕಪ್‌ ಟೂರ್ನಿಯನ್ನು ಯುಎಇನಲ್ಲಿ ನಡೆಸಲು ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ) ಸಿದ್ಧತೆ ನಡೆಸುತ್ತಿರುವುದಾಗಿ ತಿಳಿದುಬಂದಿದೆ. 

ಬಾಂಗ್ಲಾದೇಶದಲ್ಲಿ ಹಿಂಸಾಚಾರ ನಡೆಯುತ್ತಿರುವ ಕಾರಣ, ಟೂರ್ನಿಯನ್ನು ಸ್ಥಳಾಂತರಿಸಬೇಕಾದ ಅನಿವಾರ್ಯತೆಗೆ ಐಸಿಸಿ ಸಿಲುಕಿದ್ದು, ಭಾರತದಲ್ಲಿ ಆಯೋಜಿಸುವಂತೆ ಬಿಸಿಸಿಐ ಬಳಿ ಕೇಳಿತ್ತು. ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ನಿರಾಕರಿಸಿದ ಕಾರಣ, ಇದೀಗ ಯುಎಇನಲ್ಲಿ ನಡೆಸುವ ಬಗ್ಗೆ ಎಮಿರೇಟ್ಸ್‌ ಕ್ರಿಕೆಟ್‌ ಮಂಡಳಿ ಜೊತೆ ಮಾತುಕತೆ ನಡೆಸುತ್ತಿರುವುದಾಗಿ ಗೊತ್ತಾಗಿದೆ.