ಕರಾಚಿ(ಮೇ.22): ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) 6ನೇ ಆವೃತ್ತಿಯ ಪಾಕಿಸ್ತಾನ ಸೂಪರ್ ಲೀಗ್ ಟೂರ್ನಿಯನ್ನು ಅಬುಧಾಬಿಯಲ್ಲಿ ಜೂನ್‌ 05ರಿಂದ ಆರಂಭಿಸಲು ಸಿದ್ದತೆ ನಡೆಸಲಾರಂಭಿಸಿದೆ. ಪಿಎಸ್‌ಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳುವ ಎಲ್ಲಾ ಆಟಗಾರರು ಅಭ್ಯಾಸ ಶಿಬಿರಗಳಲ್ಲಿ ಪಾಲ್ಗೊಳ್ಳುವ ಮುನ್ನ 10 ದಿನಗಳ ಕಡ್ಡಾಯ ಕ್ವಾರಂಟೈನ್‌ಗೆ ಒಳಗಾಗಬೇಕಿದೆ.

ಪಿಎಸ್‌ಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳುವ ಆಟಗಾರರು, ಸಿಬ್ಬಂದಿಗಳು ಹಾಗೂ ಪ್ರಸಾರ ಮಾಧ್ಯಮದವರು ಕಡ್ಡಾಯವಾಗಿ 10 ದಿನಗಳ ಕಾಲ ಕ್ವಾರಂಟೈನ್‌ಗೆ ಒಳಗಾಗಬೇಕು ಎಂದು ಯುಎಇ ಅಧಿಕಾರಿಗಳ ಪಿಸಿಬಿ ಒಪ್ಪಂದ ಮಾಡಿಕೊಂಡಿದೆ ಎಂದು ಕರಾಚಿ ಕಿಂಗ್ಸ್‌ ತಂಡದ ಮಾಲೀಕ ಸಲ್ಮಾನ್ ಇಕ್ಬಾಲ್ ತಿಳಿಸಿದ್ದಾರೆ. ಈ 10 ದಿನಗಳ ಕ್ವಾರಂಟೈನ್‌ ಅವಧಿಯಲ್ಲಿ ಎಲ್ಲರೂ ಸತತವಾಗಿ ಕೋವಿಡ್ ಟೆಸ್ಟ್‌ ಮಾಡಿಸಿಕೊಳ್ಳಬೇಕು ಎಂದು ಇಕ್ಬಾಲ್ ತಿಳಿಸಿದ್ದಾರೆ. 

ಪಿಎಸ್‌ಎಲ್‌ ಆಯೋಜಿಸಲು ಒಪ್ಪಿದ ಅಬುಧಾಬಿ ಸರ್ಕಾರ, ಆದರೆ ಒಂದು ಕಂಡೀಷನ್‌..!

ಮೂಲಗಳ ಪ್ರಕಾರ ಪಿಸಿಬಿಯು ವಿದೇಶಿ ಆಟಗಾರರಿಗೆ ಹಾಗೂ ದೇಶಿ ಆಟಗಾರರಿಗೆ ಅಬುಧಾಬಿ ತಲುಪಲು ವಿಶೇಷ ವಿಮಾನದ ವ್ಯವಸ್ಥೆ ಮಾಡಲು ಮುಂದಾಗಿದೆ. ಮೇ 25ರಂದು ಆಟಗಾರರನ್ನು ಹೊತ್ತ ವಿಮಾನ ಅಬುಧಾಬಿಗೆ ಬಂದಿಳಿಯಲಿದೆ. ಅಲ್ಲಿ 10 ದಿನಗಳ ಕಾಲ ಕ್ವಾರಂಟೈನ್‌ನಲ್ಲಿದ್ದು, ಆ ಬಳಿಕ ಮೇ.05ರಿಂದ ಟೂರ್ನಿ ಆಡಲು ಮೈದಾನಕ್ಕಿಳಿಯಲಿದ್ದಾರೆ ಎನ್ನಲಾಗಿದೆ.

6ನೇ ಆವೃತ್ತಿಯ ಪಿಎಸ್‌ಎಲ್ ಟೂರ್ನಿಯು ಕೋವಿಡ್ ಕಾರಣದಿಂದಾಗಿ ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿತ್ತು. ಟೂರ್ನಿಯಲ್ಲಿ ಇನ್ನೂ 20 ಪಂದ್ಯಗಳು ನಡೆಯಬೇಕಿವೆ. ಕರಾಚಿಯಲ್ಲಿ ನಡೆಯುತ್ತಿದ್ದ ಪಿಎಸ್‌ಎಲ್‌ ಟೂರ್ನಿಯಲ್ಲಿ ಆಟಗಾರರು ಹಾಗೂ ಸಿಬ್ಬಂದಿಗಳಲ್ಲಿ ಕೋವಿಡ್ 19 ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಮಾರ್ಚ್‌ 04ರಂದು ಪಿಸಿಬಿಯು ಪಾಕಿಸ್ತಾನ ಸೂಪರ್ ಲೀಗ್ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona