ಮೊದಲ ಟೆಸ್ಟ್ ಪಂದ್ಯದಲ್ಲಿ ವಿಂಡೀಸ್ ಎದುರು ಆಸ್ಟ್ರೇಲಿಯಾ ಮೇಲುಗೈಪರ್ತ್‌ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ-ವೆಸ್ಟ್ ಇಂಡೀಸ್ ಮೊದಲ ಟೆಸ್ಟ್ಮೊದಲ ಟೆಸ್ಟ್ ಪಂದ್ಯ ಗೆಲ್ಲಲು ವಿಂಡೀಸ್‌ಗೆ 498 ರನ್‌ಗಳ ಕಠಿಣ ಗುರಿ

ಪರ್ತ್‌(ಡಿ.03): ಪ್ರತಿಭಾನ್ವಿತ ಕ್ರಿಕೆಟಿಗ ಮಾರ್ನಸ್ ಲಬುಶೇನ್ ಬಾರಿಸಿದ ಅಜೇಯ ಶತಕದ ನೆರವಿನಿಂದ ವೆಸ್ಟ್ ಇಂಡೀಸ್ ಎದುರು ಆಸ್ಟ್ರೇಲಿಯಾ ತಂಡವು ಎರಡನೇ ಇನಿಂಗ್ಸ್‌ನಲ್ಲಿ 2 ವಿಕೆಟ್ ಕಳೆದುಕೊಂಡು 182 ರನ್ ಬಾರಿಸಿ ಇನಿಂಗ್ಸ್‌ ಡಿಕ್ಲೇರ್ ಮಾಡಿಕೊಂಡಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡವು, ಪ್ರವಾಸಿ ವೆಸ್ಟ್‌ ಇಂಡೀಸ್ ತಂಡಕ್ಕೆ ಮೊದಲ ಟೆಸ್ಟ್ ಪಂದ್ಯ ಗೆಲ್ಲಲು 498 ರನ್‌ಗಳ ಕಠಿಣ ಗುರಿ ನೀಡಿದೆ.

ಇಲ್ಲಿನ ಪರ್ತ್‌ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಮೊದಲ ಇನಿಂಗ್ಸ್‌ನಲ್ಲಿ 283 ರನ್‌ಗಳಿಗೆ ಆಲೌಟ್ ಮಾಡುವ ಮೂಲಕ ಪ್ಯಾಟ್ ಕಮಿನ್ಸ್‌ ನೇತೃತ್ವದ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್‌ನಲ್ಲಿ 315 ರನ್‌ಗಳ ಮುನ್ನಡೆ ಸಾಧಿಸಿತ್ತು. ಫಾಲೋ ಆನ್ ಹೇರುವ ಅವಕಾಶವಿದ್ದರೂ ಸಹಾ, ಹಾಗೆ ಮಾಡದ ಆಸ್ಟ್ರೇಲಿಯಾ ತಂಡವು ಎರಡನೇ ಇನಿಂಗ್ಸ್‌ ಬ್ಯಾಟಿಂಗ್‌ ಮಾಡಲು ತೀರ್ಮಾನಿಸಿತು. ಮೂರನೇ ದಿನದಾಟದಂತ್ಯದ ವೇಳೆಗೆ ಆಸ್ಟ್ರೇಲಿಯಾ ತಂಡವು ಒಂದು ವಿಕೆಟ್ ಕಳೆದುಕೊಂಡು 29 ರನ್ ಬಾರಿಸುವ ಮೂಲಕ 344 ರನ್‌ಗಳ ಮುನ್ನಡೆ ಸಾಧಿಸಿತು.

Scroll to load tweet…

ಲಬುಶೇನ್ ಆಕರ್ಷಕ ಶತಕ: ಮೊದಲ ಇನಿಂಗ್ಸ್‌ನಲ್ಲಿ ಭರ್ಜರಿ ದ್ವಿಶತಕ ಸಿಡಿಸಿದ್ದ ಮಾರ್ನಸ್ ಲಬುಶೇನ್, ಇದೀಗ ಎರಡನೇ ಇನಿಂಗ್ಸ್‌ನಲ್ಲಿ ಚುರುಕಿನ ಶತಕ ಸಿಡಿಸುವ ಮೂಲಕ ಮಿಂಚಿದ್ದಾರೆ. ಲಬುಶೇನ್ ಹಾಗೂ ಡೇವಿಡ್ ವಾರ್ನರ್ ಜೋಡಿ ಎರಡನೇ ವಿಕೆಟ್‌ಗೆ 81 ರನ್‌ಗಳ ಜತೆಯಾಟ ನಿಭಾಯಿಸಿದರು. ಮೊದಲ ಇನಿಂಗ್ಸ್‌ನಲ್ಲಿ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದ್ದ ಲಬುಶೇನ್, ಎರಡನೇ ಇನಿಂಗ್ಸ್‌ನಲ್ಲಿ 48 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಆಕರ್ಷಕ ಬ್ಯಾಟಿಂಗ್ ನಡೆಸಿದ ಮಾರ್ನಸ್ ಲಬುಶೇನ್, ಕೇವಲ 110 ಎಸೆತಗಳಲ್ಲಿ 13 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 104 ರನ್ ಸಿಡಿಸಿ ಮಿಂಚಿದರು. ಇನ್ನು ಮತ್ತೊಂದು ತುದಿಯಲ್ಲಿ ಸ್ಟೀವ್ ಸ್ಮಿತ್ 20 ರನ್ ಬಾರಿಸಿ ಅಜೇಯರಾಗುಳಿದರು.

Scroll to load tweet…

ಪಾಕ್ ಎದುರು ಮೊದಲ ದಿನವೇ 4 ಶತಕ; ಇಂಗ್ಲೆಂಡ್ ಕ್ರಿಕೆಟ್ ತಂಡ ವಿಶ್ವದಾಖಲೆ..!

ಇದಕ್ಕೂ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ಆರಂಭಿಕ ಆಘಾತದ ಹೊರತಾಗಿಯೂ, ಉಸ್ಮಾನ್ ಖವಾಜ(65), ಮಾರ್ನಸ್ ಲಬುಶೇನ್(204), ಸ್ಟೀವ್ ಸ್ಮಿತ್ ಬಾರಿಸಿದ ಅಜೇಯ ದ್ವಿಶತಕ(200) ಮತ್ತು ಟ್ರಾವಿಸ್ ಹೆಡ್ ಬಾರಿಸಿದ 99 ರನ್‌ಗಳ ನೆರವಿನಿಂದ 4 ವಿಕೆಟ್ ಕಳೆದುಕೊಂಡು 598 ರನ್ ಬಾರಿಸಿ ಮೊದಲ ಇನಿಂಗ್ಸ್‌ ಡಿಕ್ಲೇರ್ ಮಾಡಿಕೊಂಡಿತ್ತು. 

ಕಾಮೆಂಟ್ರಿ ವೇಳೆ ಅನಾರೋಗ್ಯ: ಆಸ್ಪತ್ರೆ ಸೇರಿದ ಪಾಂಟಿಂಗ್‌

ಪತ್‌ರ್‍: ಆಸ್ಪ್ರೇಲಿಯಾ-ವೆಸ್ಟ್‌ಇಂಡೀಸ್‌ ನಡುವಿನ ಮೊದಲ ಟೆಸ್ಟ್‌ನ 3ನೇ ದಿನದಾಟದ ವೀಕ್ಷಕ ವಿವರಣೆ ವೇಳೆ ಅನಾರೋಗ್ಯಕ್ಕೆ ತುತ್ತಾದ ಆಸ್ಪ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್‌ರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಬಳಿಕ ಅವರು ಚೇತರಿಸಿಕೊಂಡಿದ್ದು, ಶನಿವಾರ ಕಾಮೆಂಟ್ರಿಗೆ ಮರಳಲಿದ್ದಾರೆ ಎಂದು ಪ್ರಸಾರಕರು ತಿಳಿಸಿದ್ದಾರೆ.