Asianet Suvarna News Asianet Suvarna News

Pink Ball Test: ಭದ್ರತೆ ಉಲ್ಲಂಘಿಸಿ ಕೊಹ್ಲಿ ಜತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ 4 ಅಭಿಮಾನಿಗಳು ಆರೆಸ್ಟ್‌!

* ಪಿಂಕ್ ಬಾಲ್ ಟೆಸ್ಟ್ ಪಂದ್ಯದ ವೇಳೆ ಭದ್ರತೆಯನ್ನು ಉಲ್ಲಂಘಿಸಿ ಮೈದಾನ ಪ್ರವೇಶಿಸಿದ್ದ ಕೊಹ್ಲಿ ಅಭಿಮಾನಿಗಳು

* ಕೊಹ್ಲಿಯ ನಾಲ್ವರು ಅಭಿಮಾನಿಗಳನ್ನು ವಶಕ್ಕೆ ಪಡೆದ ಕಬ್ಬನ್ ಪಾರ್ಕ್ ಪೊಲೀಸರು

* ಬಂಧಿತರಾದ ನಾಲ್ವರು ಅಭಿಮಾನಿಗಳ ಪೈಕಿ ಇಬ್ಬರು ಅಪ್ರಾಪ್ತರು

Pink Ball Test 4 Virat Kohli fans arrested for breaching security to click selfies in Bengaluru Test kvn
Author
Bengaluru, First Published Mar 14, 2022, 5:50 PM IST

ಬೆಂಗಳೂರು(ಮಾ.14): ಭಾರತ ಹಾಗೂ ಶ್ರೀಲಂಕಾ (India vs Sri Lanka) ತಂಡಗಳ ನಡುವಿನ ಪಿಂಕ್ ಬಾಲ್ ಟೆಸ್ಟ್ (Pink Ball Test) ಪಂದ್ಯಕ್ಕೆ ಬೆಂಗಳೂರಿನ (Bengaluru) ಎಂ. ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ. ಪಂದ್ಯದ ಎರಡನೇ ದಿನದಾಟದ ವೇಳೆ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಯೊಂದಿಗೆ ಸೆಲ್ಫಿ ಪಡೆಯಲು ಭದ್ರತೆಯನ್ನು ಉಲ್ಲಂಘಿಸಿ ಮೈದಾನ ಪ್ರವೇಶಿಸಿದ್ದ ನಾಲ್ವರು ವಿರಾಟ್ ಕೊಹ್ಲಿ ಅಭಿಮಾನಿಗಳನ್ನು ಬೆಂಗಳೂರು ವಶಕ್ಕೆ ಪಡೆದಿದ್ದಾರೆ. 

ಚಿನ್ನಸ್ವಾಮಿ ಸ್ಟೇಡಿಯಂನ ಸುತ್ತ ಹಾಕಲಾಗಿದ್ದ ಭದ್ರತಾ ಬೇಲಿಯನ್ನು ಹತ್ತಿ ಮೈದಾನ ಪ್ರವೇಶಿಸಿ ಕೊಹ್ಲಿ ಜತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದರು. ಇದು ಸ್ಟೇಡಿಯಂನಲ್ಲಿ ಪೊಲೀಸರ ಭದ್ರತೆಯ ಕುರಿತಂತೆ ಪ್ರಶ್ನೆಗಳು ಏಳಲಾರಂಬಿಸಿದ್ದವು. ತಕ್ಷಣವೇ ಎಚ್ಚೆತ್ತುಕೊಂಡಿರುವ ಪೊಲೀಸರು ಆ ನಾಲ್ವರು ಅಭಿಮಾನಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಘಟನೆಯ ಸಂಬಂಧ ನಗರದ ಹೃದಯ ಭಾಗದಲ್ಲಿರುವ ಕಬ್ಬನ್‌ ಪಾರ್ಕ್‌ ಪೊಲೀಸ್ ಠಾಣೆಯಲ್ಲಿ (Cubbon Park police station) ಎಫ್‌ಐಆರ್ ದಾಖಲಾಗಿದೆ. ಪೊಲೀಸರು ವಶಕ್ಕೆ ಪಡೆದ ನಾಲ್ವರು ವಿರಾಟ್ ಕೊಹ್ಲಿ (Virat Kohli) ಅಭಿಮಾನಿಗಳ ಪೈಕಿ ಓರ್ವ ಕಲಬುರ್ಗಿ ಮೂಲದವರಾಗಿದ್ದರೆ, ಇನ್ನುಳಿದವರು ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ.

ಈ ನಾಲ್ವರು ಕ್ರಿಕೆಟ್ ಅಭಿಮಾನಿಗಳ ಮೇಲೆ ಕಬ್ಬನ್ ಪಾರ್ಕ್ ಪೊಲೀಸರು, ಮೈದಾನಕ್ಕೆ ಅತಿಕ್ರಮ ಪ್ರವೇಶ ಹಾಗೂ ಭದ್ರತಾ ಶಿಷ್ಟಾಚಾರ ಉಲ್ಲಂಘಿಸಿದ ಆಧಾರದಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ಭಾನುವಾರ ರಾತ್ರಿ ಸುಮಾರು 10.15ರ ವೇಳೆ ನೋಡ ನೋಡುತ್ತಿದ್ದಂತೆಯೇ, ಎಲ್ಲಾ ಭದ್ರತೆಯನ್ನು ಉಲ್ಲಂಘಿಸಿ ವಿರಾಟ್ ಕೊಹ್ಲಿ ಬಳಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಮೈದಾನ ಪ್ರವೇಶಿಸಿದ್ದರು. ಅಭಿಮಾನಿಗಳು ಮೈದಾನ ಪ್ರವೇಶಿಸಿದರೂ, ಸಿಟ್ಟಾಗದ ವಿರಾಟ್ ಕೊಹ್ಲಿ, ಅಭಿಮಾನಿಗಳ ಜತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದರು. ಆದರೆ ಇದೀಗ ಅವರ ಅಭಿಮಾನಿಗಳಿಗೆ ಪೊಲೀಸರಿಂದ ಸಂಕಷ್ಟ ಎದುರಾಗಿದೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ತಕ್ಷಣವೇ ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ. ಪೊಲೀಸರು ವಶಕ್ಕೆ ಪಡೆದ ನಾಲ್ವರ ಪೈಕಿ ಇಬ್ಬರು ಅಪ್ರಾಪ್ತರು ಎಂದು ತಿಳಿದು ಬಂದಿದೆ.

Pink Ball Test: ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಡೇಲ್ ಸ್ಟೇನ್ ದಾಖಲೆ ಮುರಿದ ರವಿಚಂದ್ರನ್ ಅಶ್ವಿನ್‌

ಡೆಲ್ಲಿ ಮೂಲದ ಸೂಪರ್ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಪಾಲಿಗೆ ಬೆಂಗಳೂರು ಎನ್ನುವುದು ಒಂದು ರೀತಿಯ ಎರಡನೇ ತವರು ಮನೆ ಎನಿಸಿದೆ. ವಿರಾಟ್ ಕೊಹ್ಲಿ ಅನುಷ್ಕಾ ಶರ್ಮಾ (Anushka Sharma) ಕೂಡಾ ಹಲವು ವರ್ಷಗಳ ಬೆಂಗಳೂರಿನಲ್ಲಿಯೇ ನೆಲೆಸಿದ್ದರು. ಇನ್ನು ಬೆಂಗಳೂರಿನ ಜತೆಗೆ ವಿರಾಟ್ ಕೊಹ್ಲಿಗೆ ವಿಶೇಷ ಬಾಂಧವ್ಯವಿದೆ. ಏಕೆಂದರೆ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಆರಂಭದಿಂದಲೂ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡವನ್ನು ಪ್ರತಿನಿಧಿಸುತ್ತಾ ಬಂದಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿಗೆ ಬೆಂಗಳೂರಿನಲ್ಲಿ ಅಪಾರ ಅಭಿಮಾನಿಗಳಿದ್ದಾರೆ.

ನನಸಾಗದ ಕೊಹ್ಲಿಯ 71 ಶತಕದ ಕನಸು: ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಕಳೆದ ಎರಡೂವರೆ ವರ್ಷಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕ ಬಾರಿಸಲು ಪದೇ ಪದೇ ವಿಫಲರಾಗುತ್ತಿದ್ದಾರೆ. ವಿರಾಟ್ ಕೊಹ್ಲಿನ ನೂರನೇ ಟೆಸ್ಟ್ ಪಂದ್ಯಕ್ಕೆ ಮೊಹಾಲಿ ಆತಿಥ್ಯವನ್ನು ವಹಿಸಿತ್ತು. ಆದರೆ ಮೊಹಾಲಿ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಮೂರಂಕಿ ಮೊತ್ತ ದಾಖಲಿಸಲು ವಿಫಲವಾಗಿದ್ದರು. ಇನ್ನು ಬೆಂಗಳೂರಿನಲ್ಲಿ ಆಯೋಜನೆಗೊಂಡಿದ್ದ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಾದರೂ ಕೊಹ್ಲಿ ಶತಕ ಬಾರಿಸಬಹುದು ಎಂದು ಅಭಿಮಾನಿಗಳು ಆಸೆಗಣ್ಣಿನಿಂದ ಕಾಯುತ್ತಿದ್ದರು. ಆದರೆ ಕೊಹ್ಲಿ ಮೊದಲ ಇನಿಂಗ್ಸ್‌ನಲ್ಲಿ 23 ಹಾಗೂ ಎರಡನೇ ಇನಿಂಗ್ಸ್‌ನಲ್ಲಿ 13 ರನ್ ಬಾರಿಸಿ ವಿಕೆಟ್ ಒಪ್ಪಿಸುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು.

Follow Us:
Download App:
  • android
  • ios