ಕೋಲ್ಕತಾ[ನ.22]: ಭಾರತ-ಬಾಂಗ್ಲಾದೇಶ ನಡುವಿನ ಐತಿಹಾಸಿಕ ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಬ್ಯಾಟಿಂಗ್ ಆಯ್ದುಕೊಂಡಿದೆ. ಈಗಾಗಲೇ ಮೊದಲ ಟೆಸ್ಟ್ ಪಂದ್ಯ ಜಯಿಸಿರುವ ಟೀಂ ಇಂಡಿಯಾ, ಇದೀಗ ಎರಡನೇ ಟೆಸ್ಟ್ ಪಂದ್ಯವನ್ನು ಜಯಿಸುವ ಮೂಲಕ ಸರಣಿ ಕ್ಲೀನ್ ಸ್ವೀಪ್ ಮಾಡುವತ್ತ ಚಿತ್ತ ನೆಟ್ಟಿದೆ. 

ಡೇ & ನೈಟ್ ಟೆಸ್ಟ್ ಪಂದ್ಯದಲ್ಲಿ ದಾಖಲೆ ಬರೆಯಲು ಕೊಹ್ಲಿ ರೆಡಿ..!

ಚೊಚ್ಚಲ ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನಾಡುತ್ತಿರುವ ಉಭಯ ತಂಡಗಳು ಗೆಲುವಿನ ಮೂಲಕ ಸ್ಮರಣೀಯವಾಗಿಸಿಕೊಳ್ಳಲು ತುದಿಗಾಲಿನಲ್ಲಿ ನಿಂತಿವೆ. ಬಾಂಗ್ಲಾದೇಶ ತಂಡದಲ್ಲಿ ಎರಡು ಬದಲಾವಣೆ ಮಾಡಿಕೊಳ್ಳಲಾಗಿದ್ದು, ಅಲ್ ಅಮಿನ್, ನಯೀಮ್ ಹಸನ್ ತಂಡ ಕೂಡಿಕೊಂಡಿದ್ದಾರೆ. ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಡೇ & ನೈಟ್ ಟೆಸ್ಟ್: ಟೀಂ ಇಂಡಿಯಾಗೆ ಕ್ಲೀನ್ ಸ್ವೀಪ್ ಗುರಿ

ಈ ಐತಿಹಾಸಿಕ ಟೆಸ್ಟ್ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಸಚಿನ್ ತೆಂಡುಲ್ಕರ್, ಬಾಂಗ್ಲಾದೇಶ ಪ್ರಧಾನ ಮಂತ್ರಿ ಶೇಖ್ ಹಸೀನಾ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಂತಾದ ದಿಗ್ಗಜರು ಮೈದಾನದಲ್ಲಿ ಉಪಸ್ಥಿತರಿದ್ದಾರೆ.

ತಂಡಗಳು ಹೀಗಿವೆ;