ಮಿಚೆಲ್ ಸ್ಟಾರ್ಕ್ ಅವರ 6 ವಿಕೆಟ್‌ಗಳ ಸಾಧನೆಯಿಂದ ಭಾರತ ತಂಡವು ಕೇವಲ 180 ರನ್‌ಗಳಿಗೆ ಆಲೌಟ್ ಆಯಿತು. ಲಬುಶೇನ್ ಮತ್ತು ಮೆಕ್‌ಸ್ವೀನಿ ಅವರ ಅರ್ಧಶತಕದ ಜೊತೆಯಾಟದಿಂದ ಆಸ್ಟ್ರೇಲಿಯಾ 1 ವಿಕೆಟ್‌ಗೆ 86 ರನ್ ಗಳಿಸಿದೆ.
ಅಡಿಲೇಡ್: ಮಿಚೆಲ್ ಸ್ಟಾರ್ಕ್ ಮಾರಕ ಬೌಲಿಂಗ್ ಹಾಗೂ ಮಾರ್ನಸ್ ಲಬುಶೇನ್ ಮತ್ತು ನೇಥನ್ ಮೆಕ್‌ಸ್ವೀನಿ ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಭರ್ಜರಿ ಅರಂಭ ಪಡೆದಿದೆ. ಭಾರತವನ್ನು ಕೇವಲ 180 ರನ್‌ಗಳಿ ಕಟ್ಟಿಹಾಕಿ, ಮೊದಲ ಇನ್ನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ ತಂಡವು ಮೊದಲ ದಿನದಾಟದಂತ್ಯದ ವೇಳೆಗೆ 1 ವಿಕೆಟ್ ಕಳೆದುಕೊಂಡು 86 ರನ್ ಬಾರಿಸಿದ್ದು, ಇನ್ನು 94 ರನ್‌ಗಳ ಹಿನ್ನಡೆಯಲ್ಲಿದೆ.
ಇಲ್ಲಿನ ಅಡಿಲೇಡ್ ಓವಲ್ ಮೈದಾನದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡಕ್ಕೆ ಮೊದಲ ಓವರ್‌ನ ಮೊದಲ ಎಸೆತದಲ್ಲೇ ಮಿಚೆಲ್ ಸ್ಟಾರ್ಕ್ ಶಾಕ್ ನೀಡಿದರು. ಯಶಸ್ವಿ ಜೈಸ್ವಾಲ್ ಶೂನ್ಯ ಸುತ್ತಿ ಪೆವಿಲಿಯನ್ ಸೇರಿದರು. ಇನ್ನು ಎರಡನೇ ವಿಕೆಟ್‌ಗೆ ಕೆ ಎಲ್ ರಾಹುಲ್ ಹಾಗೂ ಶುಭ್‌ಮನ್ ಗಿಲ್ 69 ರನ್‌ಗಳ ಜತೆಯಾಟವಾಡಿದರು. ರಾಹುಲ್ 37 ಹಾಗೂ ಗಿಲ್ 31 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
2011ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಎರಡೆರಡು ಬಾರಿ ಟಾಸ್ ಮಾಡಿದ್ದೇಕೆ? ಧೋನಿ ಮಾಡಿದ್ದೇನು?
ಕೊಹ್ಲಿ 7 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ನಾಯಕ ರೋಹಿತ್ ಶರ್ಮಾ 3 ರನ್ ಗಳಿಸಿ ಪೆವಿಲಿಯನ್ ಸೇರಿದರು. ರಿಷಭ್ ಪಂತ್ 21 ರನ್ ಗಳಿಸಿ ಕಮಿನ್ಸ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಕೆಳ ಕ್ರಮಾಂಕದಲ್ಲಿ ನಿತೀಶ್ ರೆಡ್ಡಿ ಜವಾಬ್ದಾರಿಯುತ 42 ರನ್ ಸಿಡಿಸಿದರೆ, ಅಶ್ವಿನ್ 22 ರನ್ ಬಾರಿಸಿದರು. ಅಂತಿಮವಾಗಿ ಟೀಂ ಇಂಡಿಯಾ 180 ರನ್‌ಗಳಿಗೆ ಸರ್ವಪತನ ಕಂಡಿತು.
ಸ್ಟಾರ್ಕ್‌ಗೆ 5 ವಿಕೆಟ್ ಗೊಂಚಲು: ಎರಡನೇ ಟೆಸ್ಟ್‌ನ ಮೊದಲ ಎಸೆತದಿಂದಲೇ ಆಕ್ರಮಣಕಾರಿ ಬೌಲಿಂಗ್ ಪ್ರದರ್ಶನ ತೋರಿದ ಮಿಚೆಲ್ ಸ್ಟಾರ್ಕ್ ಇದೇ ಮೊದಲ ಬಾರಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ 5+ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಡೇಂಜರಸ್ ವೇಗಿಯಾಗಿರುವ ಸ್ಟಾರ್ಕ್, 4ನೇ ಬಾರಿಗೆ ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ 5+ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂತಿಮವಾಗಿ ಸ್ಟಾರ್ಕ್ 48 ರನ್ ನೀಡಿ 6 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಟೆಸ್ಟ್ ಕ್ರಿಕೆಟ್‌ನಲ್ಲಿ ಸ್ಟಾರ್ಕ್ ಶ್ರೇಷ್ಠ ಬೌಲಿಂಗ್ ಪ್ರದರ್ಶನ ಎನಿಸಿಕೊಂಡಿದೆ.
ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಪರದಾಡಿದ ಟೀಂ ಇಂಡಿಯಾ; ಮೊದಲ ದಿನವೇ ಸಾಧಾರಣ ಮೊತ್ತಕ್ಕೆ ಆಲೌಟ್!
ಇನ್ನು ಮೊದಲ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಬರ್ತ್ ಡೇ ಬಾಯ್ ಜಸ್ಪ್ರೀತ್ ಬುಮ್ರಾ ಆರಂಭದಲ್ಲೇ ಶಾಕ್ ನೀಡಿದರು. ಆರಂಭಿಕ ಬ್ಯಾಟರ್ ಉಸ್ಮಾನ್ ಖವಾಜ 13 ರನ್ ಗಳಿಸಿ ರೋಹಿತ್ ಶರ್ಮಾಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. ಇದಾದ ಬಳಿಕ ಎರಡನೇ ವಿಕೆಟ್‌ಗೆ ಮೆಕ್‌ಸ್ವೀನಿ ಹಾಗೂ ಮಾರ್ನಸ್ ಲಬುಶೇನ್ ಎರಡನೇ ವಿಕೆಟ್‌ಗೆ ಮುರಿಯದ 62 ರನ್ ಬಾರಿಸಿ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
