ಬೆಂಗಳೂರು(ಡಿ.19): ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಎರಡನೇ ಇನಿಂಗ್ಸ್‌ನಲ್ಲಿ ಕೇವಲ 36 ರನ್‌ಗಳಿಗೆ ಸರ್ವಪತನ ಕಂಡಿದೆ. ಟೀಂ ಇಂಡಿಯಾ ಕೇವಲ 15 ರನ್‌ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ ಐವರು ಬ್ಯಾಟ್ಸ್‌ಮನ್‌ಗಳು ಪೆವಿಲಿಯನ್ ಸೇರಿದ್ದರು.

ಆಸ್ಟ್ರೇಲಿಯಾದ ವೇಗದ ಬೌಲರ್‌ಗಳಾದ ಜೋಸ್‌ ಹೇಜಲ್‌ವುಡ್ ಹಾಗೂ ಪ್ಯಾಟ್ ಕಮಿನ್ಸ್ ಮಾರಕ ದಾಳಿಗೆ ತತ್ತರಿಸಿ ಹೋದ ಭಾರತ ದಾಖಲೆಯ ಅಲ್ಪ ಮೊತ್ತಕ್ಕೆ ಕುಸಿತ ಕಂಡು ಮುಖಭಂಗ ಅನುಭವಿಸಿತು. ಮೊದಲು ಟೀಂ ಇಂಡಿಯಾ  1974ರಲ್ಲಿ ಇಂಗ್ಲೆಂಡ್‌ ಎದುರು ಲಾರ್ಡ್ಸ್‌ ಮೈದಾನದಲ್ಲಿ ಕೇವಲ 42 ರನ್‌ಗಳಿಗೆ ಸರ್ವಪತನ ಕಂಡಿತ್ತು. ಇದೀಗ ವಿರಾಟ್ ಪಡೆ ಆ ದಾಖಲೆಯನ್ನು ಅಳಿಸಿ ಹಾಕಿದೆ. 

ಟೀಂ ಇಂಡಿಯಾ ದಯಾನೀಯ ಬ್ಯಾಟಿಂಗ್ ವೈಫಲ್ಯ ಹೇಗಿತ್ತು ಎಂದರೆ ವಿರಾಟ್ ಕೊಹ್ಲಿ ಪಡೆಯ ಯಾವೊಬ್ಬ ಬ್ಯಾಟ್ಸ್‌ಮನ್‌ ಕೂಡಾ ಎರಡಂಕಿ ಮೊತ್ತ ದಾಖಲಿಸಲು  ಸಾಧ್ಯವಾಗಲಿಲ್ಲ. ಜೋಸ್‌ ಹೇಜಲ್‌ವುಡ್ ಕೇವಲ 8 ರನ್ ನೀಡಿ 5 ವಿಕೆಟ್ ಪಡೆದರೆ, ಪ್ಯಾಟ್ ಕಮಿನ್ಸ್‌ 21 ರನ್ ನೀಡಿ 4 ವಿಕೆಟ್‌ ಕಬಳಿಸುವ ಮೂಲಕ ಟೀಂ ಇಂಡಿಯಾ ಕುಸಿತದಲ್ಲಿ ಪ್ರಮುಖ ಪಾತ್ರ ವಹಿಸಿದರು.

ಟೀಂ ಇಂಡಿಯಾ ನಾಟಕೀಯ ಕುಸಿತ; ಆಸ್ಟ್ರೇಲಿಯಾಗೆ 90 ಟಾರ್ಗೆಟ್
 
ಅಡಿಲೇಡ್‌ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳ ಬ್ಯಾಟಿಂಗ್ ವೈಫಲ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.