IPL 2021: ಟೂರ್ನಿಯಿಂದ ಹೊರಬಿತ್ತು ರಾಜಸ್ಥಾನ, ಮುಂಬೈಗೆ ಪ್ಲೇ ಆಫ್ ಆಸೆ ಜೀವಂತ
* ಆರ್ಆರ್ ವಿರುದ್ದ ಮುಂಬೈ ಇಂಡಿಯನ್ಸ್ಗೆ ಭರ್ಜರಿ ಜಯ
* ಮುಂಬೈ ಇಂಡಿಯನ್ಸ್ ಪ್ಲೇ ಆಫ್ ಆಸೆ ಜೀವಂತ
* ಟೂರ್ನಿಯಿಂದ ಹೊರಬಿದ್ದ ರಾಜಸ್ಥಾನ
ಶಾರ್ಜಾ(ಅ.05): 14ನೇ ಆವೃತ್ತಿ ಐಪಿಎಲ್ ಟೂರ್ನಿಯ ಪ್ಲೇ ಆಫ್ (Play Off) ಹಂತದ ಸ್ಥಾನಕ್ಕಾಗಿ ನಡೆದ ಹೋರಾಟದಲ್ಲಿ ಮುಂಬೈ ಇಂಡಿಯನ್ಸ್ (Mumbai Indians) ಒಂದು ಹೆಜ್ಜೆ ಮುಂದೆ ಇಟ್ಟಿದೆ.
ರಾಜಸ್ಥಾನ ರಾಯಲ್ಸ್ (Rajasthan Royals) ವಿರುದ್ಧದ ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 8.2 ಓವರ್‌ಗಳಲ್ಲಿ 8 ವಿಕೆಟ್‌ಳಿಂದ ಗೆಲುವು ಸಾಧಿಸಿದೆ. ಭರ್ಜರಿ ಗೆಲವಿನೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ. ಇನ್ನು ರಾಜಸ್ಥಾನ ರಾಯಲ್ಸ್ ಪ್ಲೇ ಆಫ್ ಕನಸು ಬಹುತೇಕ ಕಮರಿದೆ.
IPL 2021: ಮುಂಬೈ ದಾಳಿಗೆ ತತ್ತರಿಸಿದ ರಾಜಸ್ಥಾನ, ರೋಹಿತ್ ಪಡೆಗೆ ಸುಲಭ ಟಾರ್ಗೆಟ್!
ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು (ಅ.04) ಮುನ್ನ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 90 ರನ್ ಕಲೆಹಾಕಿತು.
ಮುಂಬೈ ಇಂಡಿಯನ್ಸ್ ತಂಡಕ್ಕೆ ಕೇವಲ ಗೆಲುವು ಮಾತ್ರವಲ್ಲ, ಗೆಲುವಿನೊಂದಿಗೆ ಉತ್ತಮ ರನ್‌ರೇಟ್ ಕೂಡ ಅವಶ್ಯಕತೆ ಇತ್ತು. ಹೀಗಾಗಿ ಚೇಸಿಂಗ್ ಆರಂಭದಿಂದಲೇ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನಕ್ಕೆ ಮುಂದಾಗಿ ಕೇವಲ 8.2 ಓವರ್‌ಗಳಲ್ಲಿ 94ರನ್ ಬಾರಿಸಿ ಗೆಲುವಿನ ನಗೆ ಬೀರಿತು.
ಆರಂಭದಿಂದಲೇ ಅಬ್ಬರಿಸಿದ ರೋಹಿತ್ ಶರ್ಮಾ 13 ಎಸೆತದಲ್ಲಿ 22 ರನ್ ಸಿಡಿಸಿ ಔಟಾದರು. ರೋಹಿತ್ ಶರ್ಮಾ ವಿಕೆಟ್ ಪತನದ ಬೆನ್ನಲ್ಲೇ ಇಶಾನ್ ಕಿಶನ್ ಜೊತೆ ಇನ್ನಿಂಗ್ಸ್ ಮುಂದುವರಿಸಿದ ಸೂರ್ಯಕುಮಾರ್ 13 ರನ್ ಸಿಡಿಸಿ ಔಟಾದರು. ಆದರೆ ಸುಲಭ ಟಾರ್ಗೆಟ್ ಕಾರಣ ಮುಂಬೈ ತಂಡದಲ್ಲಿ ಯಾವುದೇ ಆತಂಕ ಕಾಣಲಿಲ್ಲ. ಇದರೊಂದಿಗೆ ರೋಹಿತ್ ಬಳಗ ಪಾಯಿಂಟ್ಸ್ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದ್ದು, ಪ್ಲೇ ಆಫ್ ಬಾಗಿಲಲ್ಲಿ ನಿಂತಿದೆ.