ಕೊರೋನಾ ವಿರುದ್ಧ ಹೋರಾಡಲು ಯುವಿ-ಕೈಫ್ ಜೊತೆಯಾಟ ನೆನಪಿಸಿದ ಪ್ರಧಾನಿ ಮೋದಿ!
ಕೊರೋನಾ ವೈರಸ್ ಹರಡದಂತೆ ತಡೆಯಲು ಪ್ರಧಾನಿ ಮೋದಿ ಜನತಾ ಕರ್ಫ್ಯೂಗೆ ಕರೆನೀಡಿದ್ದಾರೆ. ಮೋದಿ ನಿರ್ಧಾರ ಬೆಂಬಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಟ್ವೀಟ್ ಮೂಲಕ ಜನರಲ್ಲಿ ಮನವಿ ಮಾಡಿದ್ದರು. ಇದೀಗ ಪ್ರಧಾನಿ ಮೋದಿ ಕೈಫ್ ಟ್ವೀಟ್‌ಗೆ ಅದ್ಬುತ ಪ್ರತಿಕ್ರಿಯೆ ನೀಡಿದ್ದಾರೆ.
ನವದೆಹಲಿ(ಮಾ.21): ಕೊರೋನಾ ವೈರಸ್ ಪ್ರಕರಣಗಳು ಭಾರತದಲ್ಲಿ ಹೆಚ್ಚಾಗುತ್ತಿದೆ.ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ(ಮಾ.22) ರಂದು ಜನತಾ ಕರ್ಫ್ಯೂಗೆ ಮನವಿ ಮಾಡಿದ್ದಾರೆ. ಪ್ರಧಾನಿ ಮನವಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಸೆಲೆಬ್ರೆಟಿಗಳು, ಕ್ರಿಕೆಟಿಗರು ಸೇರಿದಂತೆ ಬಹುತೇಕರು ಮೋದಿ ನಿರ್ಧಾರವನ್ನು ಸ್ವಾಗತಿಸಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್, ವಿಶ್ವ ಟಿ20ಗೂ ಕೊರೋನಾ ಅಡ್ಡಿ?
ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಕೂಡ ಮೋದಿ ಕರೆ ನೀಡಿದ ಜನತಾ ಕರ್ಫ್ಯೂ ಪಾಲಿಸಲು ಮನವಿ ಮಾಡಿದ್ದರು. ಈ ಕುರಿತು ಟ್ವೀಟ್ ಮೂಲಕೈಫ್ ಭಾರತೀಯರಲ್ಲಿ ಮನವಿ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ನರೇಂದ್ರ ಮೋದಿ ಟ್ವೀಟ್ ಮೂಲಕ ಅದ್ಭುತ ಪ್ರತಿಕ್ರಿಯೆ ನೀಡಿದ್ದಾರೆ. ಕೊರೋನಾ ವೈರಸ್ ವಿರುದ್ಧ ಹೋರಾಡಲು ನಾಟ್‌ವೆಸ್ಟ್ ಸರಣಿಯಲ್ಲಿ ಯುವರಾಜ್ ಸಿಂಗ್ ಹಾಗೂ ಮೊಹಮ್ಮದ್ ಕೈಫ್ ಜೊತೆಯಾಟದಿಂದ ಭಾರತ ತಂಡ ಇಂಗ್ಲೆಂಡ್ ಮಣಿಸಿ ಟ್ರೋಫಿ ಗೆದ್ದಿತ್ತು. ಇದೇ ಉದಾಹರಣೆಯನ್ನು ನೀಡಿದ್ದಾರೆ.
ಕೊರೋನಾ ವಿರುದ್ಧ ಮಾಜಿ ಹಾಕಿ ಕೋಚ್ ಹೋರಾಟ!
ಇಬ್ಬರು ಅತ್ಯುತ್ತಮ ಕ್ರಿಕೆಟಿಗರು ಜೊತೆಯಾಟವನ್ನು ನಾವು ಯಾವತ್ತು ಮರೆಯುವುದಿಲ್ಲ. ಇದೀಗ ಅದೇ ಕ್ರಿಕೆಟಿಗರು ಭಾರತೀಯರಲ್ಲಿ ಮತ್ತೊಂದು ಜೊತೆಯಾಟಕ್ಕೆ ಮನವಿ ಮಾಡಿದ್ದಾರೆ. ಇದು ನಾವೆಲ್ಲಾ ಜೊತೆಯಾಗಿ ಕೊರೋನಾ ವಿರುದ್ಧ ಹೋರಾಡುವ ಸಮಯ. ಜೊತೆಯಾಟದ ಮೂಲಕ ಮಾರಣಾಂತಿಕ ಕಾಯಿಲೆ ತೊಲಗಿಸೋಣ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.