ಟೀಂ ಇಂಡಿಯಾ ಐತಿಹಾಸಿಕ ಗೆಲುವಿಗೆ ಪ್ರಧಾನಿ ಮೋದಿ, ಸಚಿನ್ ಸೇರಿ ದಿಗ್ಗಜರ ಅಭಿನಂದನೆ!
ಆಸ್ಟ್ರೇಲಿಯಾ ವಿರುದ್ಧದ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 3 ವಿಕೆಟ್ ಗೆಲುವು ದಾಖಲಿಸೋ ಮೂಲಕ ಇತಿಹಾಸ ನಿರ್ಮಿಸಿದೆ. ಆಸೀಸ್ ನೆಲದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾಗೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಸೇರಿದಂತೆ ಹಲವು ದಿಗ್ಗಜರು, ಬಾಲಿವುಡ್ ಸೆಲೆಬ್ರೆಟಿಗಳು, ಮಾಜಿ ಕ್ರಿಕೆಟಿಗರು ಅಭಿನಂದನೆ ಸಲ್ಲಿಸಿದ್ದಾರೆ.
ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಂ ಇಂಡಿಯಾ ಇತಿಹಾಸ ರಚಿಸಿದೆ. ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಟೀಂ ಇಂಡಿಯಾ 2-1 ಅಂತರದಿಂದ ವಶಪಡಿಸಿಕೊಂಡಿದೆ. ಕಳೆದ 32 ವರ್ಷಗಳಿಂದ ಬ್ರಿಸ್ಬೇನ್ ಅಂಗಳದಲ್ಲಿ ಮರೀಚಿಕೆಯಾಗಿದ್ದ ಟೆಸ್ಟ್ ಗೆಲುವನ್ನು ಟೀಂ ಇಂಡಿಯಾ ದಕ್ಕಿಸಿಕೊಂಡಿದೆ.
"
ಇಷ್ಟೇ ಅಲ್ಲ ಕಳೆದ ಪ್ರವಾಸದಲ್ಲೂ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಸರಣಿ ಗೆಲುವು ದಾಖಲಿಸಿ ಇತಿಹಾಸ ರಚಿಸಿತ್ತು. ಇದೀಗ ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ನೇತೃತ್ವದ ತಂಡ ಸರಣಿ ಗೆಲುವು ದಾಖಲಿಸಿದೆ.
ಆಸೀಸ್ ನಾಡಲ್ಲಿ ಟೆಸ್ಟ್ ದಿಗ್ವಿಜಯ; ಟೀಂ ಇಂಡಿಯಾಗೆ ಭರ್ಜರಿ ಬೋನಸ್ ಘೋಷಿಸಿದ ದಾದಾ..!
ಟೀಂ ಇಂಡಿಯಾದ ಐತಿಹಾಸಿಕ ಗೆಲುವನ್ನು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಕ್ರಿಕೆಟಿಗರು, ದಿಗ್ಗಜರು ಟೀಂ ಇಂಡಿಯಾ ಗೆಲುವಿನ ಖುಷಿಯಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಟೀಂ ಇಂಡಿಯಾಗೆ ಶುಭಾಶಯ ತಿಳಿಸಿದ್ದಾರೆ. ವಿರೇಂದ್ರ ಸೆಹ್ವಾಗ್ ತಮ್ಮದೇ ಶೈಲಿಯಲ್ಲಿ ಟೀಂ ಇಂಡಿಯಾ ಐತಿಹಾಸಿಕ ಗೆಲುವಿಗೆ ಅಭಿನಂದನೆ ಹೇಳಿದ್ದಾರೆ.
ಟೀಂ ಇಂಡಿಯಾ ಸರಣಿ ಗೆಲುವು ಹಾಗೂ ದಾಖಲೆಗೆ ದಿಗ್ಗಜ ನಾಯಕರ ಪ್ರತಿಕ್ರಿಯೆ ಹೇಗಿತ್ತು? ಇಲ್ಲಿದೆ ವಿವರ.