ಆರಂಭಿಕರಾದ ಪೃಥ್ವಿ ಶಾ ಹಾಗೂ ಶಿಖರ್ ಧವನ್ ಅತ್ಯುತ್ತಮ ಪ್ರದರ್ಶನಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಸುಲಭವಾಗಿ ಗುರಿ ತಲುಪಿದೆ. ಈ ಗೆಲುವಿನ ಮೂಲಕ ಅಂಕಪಟ್ಟಿಯಲ್ಲೂ ಬಡ್ತಿ ಪಡೆದಿದೆ.

ಅಹಮ್ಮದಾಬಾದ್(ಏ.29): ಕೋಲ್ಕತಾ ನೈಟ್ ರೈಡರ್ಸ್ ನೀಡಿದ ಸ್ಪರ್ಧಾತ್ಮಕ ಟಾರ್ಗೆಟನ್ನು ಡೆಲ್ಲಿ ಕ್ಯಾಪಿಟಲ್ಸ್ ಯಾವುದೇ ಆತಂಕ ಇಲ್ಲದೆ ಗುರಿ ತಲುಪಿದೆ. ಪೃಥ್ವಿ ಶಾ ಹಾಗೂ ಶಿಖರ್ ಅದ್ಭುತ ಆಟದಿಂದ ಡೆಲ್ಲಿ ಕ್ಯಾಪಿಟಲ್ಸ್ 7 ವಿಕೆಟ್ ಭರ್ಜರಿ ಗೆಲುವು ದಾಖಲಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪೃಥ್ವಿ ಶಾ ಹಾಗೂ ಧವನ್ ಉತ್ತಮ ಆರಂಭ ನೀಡಿದರು. ಸ್ಫೋಟಕ ಬ್ಯಾಟಿಂಗ್ ಪ್ರದರ್ಶ ನೀಡಿದ ಶಾ ಹಾಫ್ ಸೆಂಚುರಿ ಸಿಡಿಸಿದರು. ಇತ್ತ ಧವನ್ ಕೂಡ ಉತ್ತಮ ಸಾಥ್ ನೀಡಿದರು. ಧವನ್ 46 ರನ್ ಸಿಡಿಸಿ ಔಟಾದರು. ನಾಯಕ ರಿಷಬ್ ಪಂತ್ 16 ರನ್ ಸಿಡಿಸಿ ಔಟಾದರು.

ಹೋರಾಟ ಮುಂದುವರಿಸಿದ ಪೃಥ್ವಿ ಶಾ 41 ಎಸೆತದಲ್ಲಿ 82 ರನ್ ಸಿಡಿಸಿ ಔಟಾದರು. ಅಷ್ಟರಲ್ಲೇ ಡೆಲ್ಲಿ ಗೆಲುವಿನ ಹಾದಿ ಸುಗಮವಾಯಿತು. ಮಾರ್ಕಸ್ ಸ್ಟೊಯ್ನಿಸ್ ಅಜೇಯ 6 ರನ್ ಸಿಡಿಸಿದರು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ 16.3 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು.