WTC Final: ಟೆಸ್ಟ್ ವಿಶ್ವಕಪ್ ಚಾಂಪಿಯನ್ ತಂಡಕ್ಕೆ ಸಿಗಲಿದೆ ಕೋಟ್ಯಾಂತರ ರುಪಾಯಿ ಬಹುಮಾನ..!
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಕ್ಷಣಗಣನೆ
ಜೂನ್ 07ರಿಂದ ಲಂಡನ್‌ನ ದಿ ಓವಲ್ ಮೈದಾನದಲ್ಲಿ ಟೆಸ್ಟ್ ವಿಶ್ವಕಪ್
ಟೆಸ್ಟ್ ವಿಶ್ವಕಪ್ ಬಹುಮಾನ ಮೊತ್ತ ಘೋಷಣೆ
ದುಬೈ(ಮೇ.27): 2019-21ರ ಚೊಚ್ಚಲ ಆವೃತ್ತಿಯಂತೆಯೇ 2021-23ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲೂ ಪ್ರಶಸ್ತಿ ವಿಜೇತ ತಂಡಕ್ಕೆ 1.6 ಮಿಲಿಯನ್ ಅಮೆರಿಕನ್ ಡಾಲರ್(ಸುಮಾರು 13.2 ಕೋಟಿ ರು.) ನಗದು ಬಹುಮಾನ ಸಿಗಲಿದೆ ಎಂದು ಐಸಿಸಿ ಶುಕ್ರವಾರ ತಿಳಿಸಿದೆ. ಜೂನ್ 7ರಿಂದ ಭಾರತ ಹಾಗೂ ಆಸ್ಪ್ರೇಲಿಯಾ ನಡುವೆ ಟೆಸ್ಟ್ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದ್ದು, ರನ್ನರ್-ಅಪ್ ತಂಡ 8 ಲಕ್ಷ ಅಮೆರಿಕನ್ ಡಾಲರ್(ಸುಮಾರು 6.6 ಕೋಟಿ ರು.) ಪಡೆದುಕೊಳ್ಳಲಿದೆ ಎಂದು ಐಸಿಸಿ ಮಾಹಿತಿ ನೀಡಿದೆ.
3ನೇ ಸ್ಥಾನಿಯಾಗಿರುವ ದಕ್ಷಿಣ ಆಫ್ರಿಕಾ 3.7 ಕೋಟಿ ರುಪಾಯಿ ಪಡೆಯಲಿದ್ದು, 4ನೇ ಸ್ಥಾನ ಪಡೆದಿರುವ ಇಂಗ್ಲೆಂಡ್ 2.8 ಕೋಟಿ ರುಪಾಯಿ, 5ನೇ ಸ್ಥಾನಿ ಶ್ರೀಲಂಕಾ 1.6 ಕೋಟಿ ರುಪಾಯಿ ಪಡೆಯಲಿದೆ ಎಂದಿದೆ. ನ್ಯೂಜಿಲೆಂಡ್, ಪಾಕಿಸ್ತಾನ, ವೆಸ್ಟ್ಇಂಡೀಸ್, ಬಾಂಗ್ಲಾದೇಶ ತಂಡಗಳಿಗೆ ಬಹುಮಾನದ ರೂಪದಲ್ಲಿ ತಲಾ 82 ಲಕ್ಷ ರುಪಾಯಿ ಸಿಗಲಿದೆ.
ಕಳೆದ ಆವೃತ್ತಿಯಲ್ಲಿ ರನ್ನರ್ ಅಪ್‌ಗೆ ತೃಪ್ತಿಪಟ್ಟ ಭಾರತ: 2019-21ನೇ ಸಾಲಿನ ಚೊಚ್ಚಲ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಫೈನಲ್ ಪ್ರವೇಶಿಸಿತ್ತು. ಆದರೆ ಫೈನಲ್‌ನಲ್ಲಿ ನ್ಯೂಜಿಲೆಂಡ್ ಎದುರು ಎಂಟು ವಿಕೆಟ್ ಸೋಲು ಅನುಭವಿಸುವ ಮೂಲಕ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.
ಆಫ್ಘನ್ ವಿರುದ್ಧ ಸರಣಿಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಇಲ್ಲ?
ದಶಕದ ಬಳಿಕ ಐಸಿಸಿ ಟ್ರೋಫಿ ಬರ ನೀಗಿಸಿಕೊಳ್ಳುತ್ತಾ ಭಾರತ? : ಭಾರತ ಕ್ರಿಕೆಟ್ ತಂಡವು 2013ರಲ್ಲಿ ಕೊನೆಯ ಬಾರಿಗೆ ಐಸಿಸಿ ಟ್ರೋಫಿಯನ್ನು ಜಯಿಸಿತ್ತು. ಇದಾಗಿ ಒಂದು ದಶಕದಲ್ಲಿ ಟೀಂ ಇಂಡಿಯಾ ಯಾವುದೇ ಐಸಿಸಿ ಟ್ರೋಫಿ ಗೆಲ್ಲಲು ಸಫಲವಾಗಿಲ್ಲ. 2013ರಲ್ಲಿ ಇಂಗ್ಲೆಂಡ್‌ನಲ್ಲಿಯೇ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟೀಂ ಇಂಡಿಯಾ, ಆತಿಥೇಯ ಇಂಗ್ಲೆಂಡ್ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದಾದ ಬಳಿಕ ಏಕದಿನ ವಿಶ್ವಕ್, ಟಿ20 ವಿಶ್ವಕಪ್ ಸೇರಿದಂತೆ ಐಸಿಸಿ ಹಲವು ಟೂರ್ನಿಗಳಲ್ಲಿ ಪಾಲ್ಗೊಂಡರೂ ಸಹಾ ಟೀಂ ಇಂಡಿಯಾ ನಾಕೌಟ್ ಹಂತದಲ್ಲಿ ಮುಗ್ಗರಿಸುವ ಮೂಲಕ ನಿರಾಸೆ ಅನುಭವಿಸಿದೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೆ ಭಾರತ ತಂಡ ಹೀಗಿದೆ ನೋಡಿ:
ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಇಶಾನ್ ಕಿಶನ್, ಕೆ ಎಸ್ ಭರತ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕತ್.
ಮೀಸಲು ಆಟಗಾರರು: ಋುತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ವೇಗಿ ಮುಕೇಶ್ ಕುಮಾರ್
ಆಸ್ಟ್ರೇಲಿಯಾ ತಂಡ:
ಪ್ಯಾಟ್ ಕಮಿನ್ಸ್(ನಾಯಕ), ಡೇವಿಡ್ ವಾರ್ನರ್, ಉಸ್ಮಾನ್ ಖವಾಜ, ಮ್ಯಾಟ್ ರೆನ್ಶಾ, ಮಾರ್ಕಸ್ ಹ್ಯಾರಿಸ್, ಮಾರ್ನಸ್ ಲಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮರೋನ್ ಗ್ರೀನ್, ಮಿಚೆಲ್ ಮಾರ್ಷ್, ಅಲೆಕ್ಸ್ ಕೇರ್ರಿ, ಜೋಶ್ ಇಂಗ್ಲಿಸ್, ಮಿಚೆಲ್ ಸ್ಟಾರ್ಕ್, ಜೋಸ್ ಹೇಜಲ್‌ವುಡ್, ಸ್ಕಾಟ್ ಬೋಲೆಂಡ್, ನೇಥನ್ ಲಯನ್, ಟೋಡ್ ಮರ್ಫಿ.