ಪುಣೆ(ಜ.10): ಭಾರತ ಹಾಗೂ ಶ್ರೀಲಂಕಾ ನಡುವಿನ 3 ಪಂದ್ಯಗಳ ಟ20 ಸರಣಿ ಅಂತಿಮ ಘಟ್ಟ ತಲುಪಿದೆ. ಪುಣೆಯಲ್ಲಿ ನಡೆಯುತ್ತಿರುವ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತ ತಂಡದಲ್ಲಿ 3 ಬದಲಾವಣೆ ಮಾಡಲಾಗಿದೆ. ಮನೀಶ್ ಪಾಂಡೆ, ಸಂಜು ಸಾಮ್ಸನ್ ಹಾಗೂ ಯಜುವೇಂದ್ರ ಚಹಾಲ್ ತಂಡ ಸೇರಿಕೊಂಡಿದ್ದಾರೆ.ಶಿವಂ ದುಬೆ , ಕುಲ್ದೀಪ್ ಹಾಗೂ ರಿಷಪ್ ಪಂತ್ ತಂಡದಿಂದ ಹೊರಗುಳಿದಿದ್ದಾರೆ. ಹಲವು ದಿನಗಳ ಬಳಿಕ ಮನೀಶ್ ಪಾಂಡೆ ಹಾಗೂ ಸಂಜು ಸಾಮ್ಸನ್‌ಗೆ ಅವಕಾಶ ನೀಡಲಾಗಿದೆ.  

ಶ್ರೀಲಂಕಾ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಸಂದಕನ ಹಾಗೂ ಎಂಜೋಲೋ ಮ್ಯಾಥ್ಯೂಸ್ ತಂಡ ಸೇರಿಕೊಂಡಿದ್ದಾರೆ. 

ಇದನ್ನೂ ಓದಿ: ಧೋನಿ ನಿವೃತ್ತಿ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ರವಿಶಾಸ್ತ್ರಿ..!.

ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾಗಿತ್ತು. 2ನೇ ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಗೆಲುವು ಸಾಧಿಸಿತು. ಈ ಮೂಲಕ ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಇದೀಗ ಅಂತಿಮ ಪಂದ್ಯ ಗೆದ್ದು ಸರಣಿ ಕೈವಶ ಮಾಡಲು ಮುಂದಾಗಿದೆ. ಇತ್ತ ಲಂಕಾ ಸರಣಿ ಉಳಿಸಿಕೊಳ್ಳಲು ಸಜ್ಜಾಗಿದೆ.