ಮುಂಬೈ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಮಾರಕ ದಾಳಿಗೆ ತತ್ತರಿಸಿದ ನ್ಯೂಜಿಲೆಂಡ್ ತಂಡವು 235 ರನ್‌ಗಳಿಗೆ ಆಲೌಟ್ ಆಗಿದೆ
ಮುಂಬೈ: ರವೀಂದ್ರ ಜಡೇಜಾ ಹಾಗೂ ವಾಷಿಂಗ್ಟನ್ ಸುಂದರ್ ಮಾರಕ ದಾಳಿಗೆ ತತ್ತರಿಸಿದ ನ್ಯೂಜಿಲೆಂಡ್ ತಂಡವು ಮುಂಬೈ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 235 ರನ್‌ಗಳ ಸಾಧಾರಣ ಮೊತ್ತಕ್ಕೆ ಸರ್ವಪತನ ಕಂಡಿದೆ. ರವೀಂದ್ರ ಜಡೇಜಾ 5 ವಿಕೆಟ್ ಕಬಳಿಸಿದರೆ, ವಾಷಿಂಗ್ಟನ್ ಸುಂದರ್ 4 ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡರು.
ಇಲ್ಲಿನ ವಾಂಖೇಡೆ ಮೈದಾನದಲ್ಲಿ ಟಾಸ್ ಗೆದ್ದ ಕಿವೀಸ್ ತಂಡದ ನಾಯಕ ಟಾಮ್ ಲೇಥಮ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ದೊಡ್ಡ ಮೊತ್ತ ಕಲೆಹಾಕುವ ಲೆಕ್ಕಾಚಾರದೊಂದಿಗೆ ಕಣಕ್ಕಿಳಿದ ನ್ಯೂಜಿಲೆಂಡ್ ತಂಡಕ್ಕೆ ಆಕಾಶ್‌ದೀಪ್ ಆರಂಭದಲ್ಲೇ ಶಾಕ್ ನೀಡಿದರು. ನ್ಯೂಜಿಲೆಂಡ್ ತಂಡದ ನಂಬಿಗಸ್ಥ ಆರಂಭಿಕ ಬ್ಯಾಟರ್ ಡೆವೊನ್ ಕಾನ್‌ವೇಯನ್ನು ಎಲ್‌ಬಿ ಬಲೆಗೆ ಕೆಡವಿದರು. ಇನ್ನು ಟಾಮ್ ಲೇಥಮ್ ಹಾಗೂ ರಚಿನ್ ರವೀಂದ್ರ ಅವರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ವಾಷಿಂಗ್ಟನ್ ಸುಂದರ್ ಭಾರತಕ್ಕೆ ಸ್ಪಷ್ಟ ಮುನ್ನಡೆ ಒದಗಿಸಿಕೊಟ್ಟರು. ಒಂದು ಹಂತದಲ್ಲಿ 72 ರನ್ ಗಳಿಸುವಷ್ಟರಲ್ಲಿ ನ್ಯೂಜಿಲೆಂಡ್ ತಂಡವು ಅಗ್ರಕ್ರಮಾಂಕದ ಪ್ರಮುಖ ಮೂರು ವಿಕೆಟ್ ಕಳೆದುಕೊಂಡಿತು.
ಮುಂಬೈ ಟೆಸ್ಟ್: ಭಾರತ ಎದುರು ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ
ಇನ್ನು ಇದಾದ ಬಳಿಕ 4ನೇ ವಿಕೆಟ್‌ಗೆ ಜತೆಯಾದ ವಿಲ್ ಯಂಗ್ ಹಾಗೂ ಡೇರಲ್ ಮಿಚೆಲ್ ನೆಲಕಚ್ಚಿ ಆಡುವ ಮೂಲಕ ತಂಡಕ್ಕೆ ಆಸರೆಯಾಗಲು ಯತ್ನಿಸಿದರು. ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಕೊನೆಗೂ ಜಡೇಜಾ ಯಶಸ್ವಿಯಾದರು. ವಿಲ್ ಯಂಗ್ 138 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 71 ರನ್ ಸಿಡಿಸಿ ಜಡ್ಡುಗೆ ವಿಕೆಟ್ ಒಪ್ಪಿಸಿದರು. ಇನ್ನು ಡೇರಲ್ ಮಿಚೆಲ್ 82 ರನ್ ಸಿಡಿಸಿ 9ನೇ ಯವರಾಗಿ ವಿಕೆಟ್ ಒಪ್ಪಿಸಿದರು.
ಮಿಂಚಿದ ಜಡ್ಡು, ಸುಂದರ್: ಟೀಂ ಇಂಡಿಯಾ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ ಮಾರಕ ದಾಳಿ ನಡೆಸುವ ಮೂಲಕ ಕಿವೀಸ್ ಬ್ಯಾಟರ್‌ಗಳನ್ನು ಕಾಡಿದರು. ಶಿಸ್ತುಬದ್ದ ದಾಳಿ ನಡೆಸಿದ ಜಡ್ಡು 14ನೇ ಬಾರಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ 5+ ವಿಕೆಟ್ ಸಾಧನೆ ಮಾಡಿದರು. ಇನ್ನು ತಮಿಳುನಾಡು ಮೂಲದ ಆಫ್‌ಸ್ಪಿನ್ನರ್ ವಾಷಿಂಗ್ಟನ್ ಸುಂದರ್ 4 ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡರು.
