ಇಂದೋರ್(ನ.12): ಟೀಂ ಇಂಡಿಯಾ ಸ್ಪಿನ್ನರ್ ಆರ್ ಅಶ್ವಿನ್ , ಬಾಂಗ್ಲಾದೇಶ ವಿರುದ್ದದ ಟೆಸ್ಟ್ ಸರಣಿಯಲ್ಲಿ ಮಿಂಚಲು ತಯಾರಿ ಆರಂಭಿಸಿದ್ದಾರೆ. ಇಂದೋರ್‌ನಲ್ಲಿ ಅಭ್ಯಾಸ ನಡೆಸುತ್ತಿರುವ ಅಶ್ವಿನ್ ತಮ್ಮ ಮೊದಲ ವೇತನವನ್ನು ಏನು ಮಾಡಿದರು ಅನ್ನೋದನ್ನು ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: ಹರಿಣಗಳ ವಿರುದ್ಧ ಸ್ಪಿನ್ ಮೋಡಿ; ಕುಂಬ್ಳೆ ಸಾಲಿಗೆ ಸೇರಿದ ಅಶ್ವಿನ್!

ಸಾಮಾಜಿಕ ಜಾಲತಾಣದಲ್ಲಿ ಆಸ್ಕ್ ಅಶ್ವಿನ್ ಅಭಿಯಾನದಡಿ, ಅಭಿಮಾನಿಗಳು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಹೀಗೆ ಅಭಿಮಾನಿಯೋರ್ವ ಮೊದಲ ಸ್ಯಾಲರಿಯಲ್ಲಿ ಏನು ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಾನೆ. ಇದಕ್ಕೆ ಉತ್ತರಿಸಿದ ಅಶ್ವಿನ್ ಮೊದಲ ಸ್ಯಾಲರಿಯನ್ನು  ತಾಯಿಗೆ ನೀಡಿದೆ ಎಂದು ಉತ್ತರಿಸಿದ್ದಾರೆ.

 

ಆರ್ ಅಶ್ವಿನ್ ನವೆಂಬರ್ 13 ರಂದು ವೆಡ್ಡಿಂಗ್ ಆ್ಯನಿವರ್ಸರಿ ಆಚರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಮತೊರ್ವ ಅಭಿಮಾನಿ ವೆಡ್ಡಿಂಗ್ ಆ್ಯನಿವರ್ಸರಿಗೆ ನಿಮ್ಮ ಪ್ಲಾನ್ ಏನು ಎಂದು ಪ್ರಶ್ನಿಸಿದ್ದಾನೆ. ಇದಕ್ಕೆ ಉತ್ತರಿಸಿರುವ ಅಶ್ವಿನ್, ಇಂದೋರ್‌ನಲ್ಲಿ ಸಿಗೋಣ ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ:ಅಶ್ವಿನ್, ಜಡೇಜಾಗೆ ಮೊದಲ ಆದ್ಯತೆ; ವರಸೆ ಬದಲಿಸಿದ ಕೊಹ್ಲಿ!

ಸೌತ್ ಆಫ್ರಿಕಾ ಟೆಸ್ಟ್ ಸರಣಿ ಬಳಿಕ ಇದೀಗ ಬಾಂಗ್ಲಾದೇಶ ವಿರುದ್ದದ ಟೆಸ್ಟ್ ಸರಣಿಗೆ ಸಜ್ಜಾಗಿರುವ ಅಶ್ವಿನ್ ನವೆಂಬರ್ 14 ರಿಂದ ಇಂದೋರ್‌ನಲ್ಲಿ ಮೊದಲ ಟೆಸ್ಟ್ ಪಂದ್ಯ ಆಡಲಿದ್ದಾರೆ. ನವೆಂಬರ್ 22 ರಿಂದ ಕೋಲ್ಕತಾದಲ್ಲಿ 2ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ನಡೆಯಲಿದೆ.