ಮುಂಬೈ(ನ.12): ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥ ರಾಹುಲ್ ದ್ರಾವಿಡ್ ಮೇಲಿನ ಸ್ವಹಿತಾಸಕ್ತಿ ಆರೋಪದ ಕಾರಣ ವಿಚಾರಣೆ ನಡೆಸಿದ ಬಿಸಿಸಿಐ ಇದೀಗ ತೀರ್ಪು ಪ್ರಕಟಿಸಲಿದೆ. ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆ ಸದಸ್ಯ ಸಂಜೀವ್ ಗುಪ್ತಾ ದೂರಿನ ಆಧಾರದಲ್ಲಿ ಬಿಸಿಸಿಐ ಎಥಿಕ್ಸ್ ಅಧಿಕಾರಿ ಡಿಕೆ ಜೈನ್ ವಿಚಾರಣೆ ನಡೆಸಿದ್ದರು. ಇದೀಗ ವಿಚಾರಣೆ ಪೂರ್ಣಗೊಂಡಿದೆ.

ಇದನ್ನೂ ಓದಿ: ಬೆಂಗ್ಳೂರಲ್ಲಿ ಗಂಗೂಲಿ-ದ್ರಾವಿಡ್ ಸುದೀರ್ಘ ಚರ್ಚೆ; NCAಗೆ ಹೊಸ ರೂಪ!.

ರಾಹುಲ್ ದ್ರಾವಿಡ್ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಚೇರ್ಮೆನ್  ಹಾಗೂ ಇಂಡಿಯಾ ಸೆಮೆಂಟ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾರೆ. ಎರಡೆರಡು ಹುದ್ದೆ ಹೊಂದುವುದು ಸ್ವಹಿತಾಸಕ್ತಿ ಸಂಘರ್ಷ ಎಂದು ಸಂಜೀವ್ ಗುಪ್ತಾ ದೂರು ನೀಡಿದ್ದರು. 

ಇದನ್ನೂ ಓದಿ: ಸ್ವಹಿತಾಸಕ್ತಿಗೆ ದ್ರಾವಿಡ್‌ ಒಳಪಡಲ್ಲ: BCCI ಸ್ಪಷ್ಟನೆ

ದೂರಿನ ಆಧಾರದಲ್ಲಿ ಡಿಕೆ ಜೈನ್, NCA ಚೇರ್ಮೆನ್ ದ್ರಾವಿಡ್‌ಗೂ ನೊಟೀಸ್ ನೀಡಿದ್ದರು. ಈ ಹಿನ್ನಲೆಯಲ್ಲಿ ಸೆಪ್ಟೆಂಬರ್ 26 ರಂದು ಬಿಸಿಸಿಐನ ಮುಂಬೈ ಕಚೇರಿಯಲ್ಲಿ ದ್ರಾವಿಡ್ ವಿಚಾರಣೆ ಎದುರಿಸಿದ್ದರು. ಬಳಿಕ ನವೆಂಬರ್ 11ಕ್ಕೆ ಎರಡನೆ ಬಾರಿ ಎಥಿಕ್ಸ್ ಆಫೀಸರ್ ಪ್ರಶ್ನೆಗೆ ಉತ್ತರಿಸಿದ್ದಾರೆ.

ಹಲವು ವಿಚಾರಗಳ ಕುರಿತು ಸ್ಪಷ್ಟತೆ ಬೇಕಿತ್ತು. ರಾಹುಲ್ ದ್ರಾವಿಡ್ ಹಾಗೂ ದೂರು ದಾರ ಸಂಜೀವ್ ಗುಪ್ತಾರನ್ನು ಕರೆಸಿ ಮಾಹಿತಿ ಕಲೆಹಾಕಿದ್ದೇವೆ. ಶೀಘ್ರದಲ್ಲೇ ತೀರ್ಪು ಪ್ರಕಟಿಸಲಿದೆ ಎಂದು ಬಿಸಿಸಿಐ ಎಥಿಕ್ಸ್ ಅಧಿಕಾರಿ ಡಿಕೆ ಜೈನ್ ಹೇಳಿದ್ದಾರೆ.