Asia Cup 2023: ಭಾರತ-ಪಾಕಿಸ್ತಾನ ನಡುವಿನ ಪಂದ್ಯ ನಡೆಯೋದೇ ಡೌಟ್..!
* ಏಷ್ಯಾಕಪ್ ಟೂರ್ನಿಯಲ್ಲಿ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ
* ಸೆಪ್ಟೆಂಬರ್ 02ರಂದು ಭಾರತ-ಪಾಕಿಸ್ತಾನ ನಡುವಿನ ಪಂದ್ಯ
* ಈ ಹೈವೋಲ್ಟೇಜ್ ಪಂದ್ಯ ನಡೆಯೋದೇ ಡೌಟ್
ಪಲ್ಲಕೆಲೆ(ಸೆ.01): ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿರುವ, ಸೆಪ್ಟೆಂಬರ್ 2ರಂದು ಪಲ್ಲಕೆಲೆಯಲ್ಲಿ ನಿಗದಿಯಾಗಿರುವ ಭಾರತ ಹಾಗೂ ಸಾಂಪ್ರದಾಯಿಕ ಬದ್ಧವೈರಿ ಪಾಕಿಸ್ತಾನ ನಡುವಿನ ಬಹುನಿರೀಕ್ಷಿತ ಏಷ್ಯಾಕಪ್ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಭಾರತ ಹಾಗೂ ಪಾಕಿಸ್ತಾನ ತಂಡಗಳು ಕೇವಲ ಐಸಿಸಿ ಹಾಗೂ ಏಷ್ಯಾಕಪ್ ಟೂರ್ನಿಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತಿವೆ. ಸಾಕಷ್ಟು ರೋಚಕತೆಯಿಂದ ಕೂಡಿರುವ ಪಂದ್ಯವನ್ನು ಕಣ್ತುಂಬಿಕೊಳ್ಳಲು ತುದಿಗಾಲಿನಲ್ಲಿ ನಿಂತಿರುವ ಅಭಿಮಾನಿಗಳಿಗೆ ನಿರಾಸೆ ಎದುರಾಗುವ ಸಾಧ್ಯತೆ ದಟ್ಟವಾಗಿದೆ.
ಸ್ಥಳೀಯ ಹವಾಮಾನ ವರದಿ ಪ್ರಕಾರ ಶನಿವಾರ ಕ್ಯಾಂಡಿ ನಗರದಲ್ಲಿ ಮಳೆ ಬೀಳುವ ಸಾಧ್ಯತೆ ಹೆಚ್ಚಿದೆ. ಪಂದ್ಯ ಆರಂಭಕ್ಕೂ ಮುನ್ನ ಅಂದರೆ ಮಧ್ಯಾಹ್ನ 2.30ರ ವೇಳೆಗೆ ಶೇ.70ರಷ್ಟು ಮಳೆ ಸಾಧ್ಯತೆಯಿದ್ದು, ಸಂಜೆ ಸುಮಾರು 5.30ರ ವೇಳೆಗೆ ಶೇ.60ರಷ್ಟು ಮಳೆ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಅಲ್ಲದೆ ದೇಶದ ವಿವಿಧ ಪ್ರಾಂತ್ಯಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ತಿಳಿಸಿದೆ. ಈ ಬಾರಿ ಟೂರ್ನಿಯ 13 ಪಂದ್ಯಗಳ ಪೈಕಿ 9 ಪಂದ್ಯಗಳು ಲಂಕಾ ಪಲ್ಲಕೆಲೆ ಹಾಗೂ ಕೊಲಂಬೊ ಕ್ರೀಡಾಂಗಣಗಳಲ್ಲಿ ನಡೆಯಲಿದ್ದು, ಬಹುತೇಕ ಪಂದ್ಯಗಳಿಗೆ ಮಳೆ ಭೀತಿ ಇದೆ.
ಟೀಂ ಇಂಡಿಯಾ ಏಕದಿನ ವಿಶ್ವಕಪ್ ಗೆಲ್ಲೋದು ಫಿಕ್ಸ್..! ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಮಾಹಿತಿ
ಈಗಾಗಲೇ ಲಂಕಾಗೆ ಬಂದಿಳಿದಿರುವ ಟೀಂ ಇಂಡಿಯಾ
ಕೊಲಂಬೊ: ಏಷ್ಯಾಕಪ್ ಏಕದಿನ ಟೂರ್ನಿಯಲ್ಲಿ ಪಾಲ್ಗೊಳ್ಳಲು ಭಾರತ ಕ್ರಿಕೆಟ್ ತಂಡ ಬುಧವಾರ ಶ್ರೀಲಂಕಾಗೆ ಬಂದಿಳಿದಿದೆ. ಬೆಂಗಳೂರಿನಿಂದ ಕೊಲಂಬೊಗೆ ಬಂದಿಳಿದ ತಂಡವನ್ನು ವಿಮಾನ ನಿಲ್ದಾಣದಲ್ಲಿ ಲಂಕಾ ಕ್ರಿಕೆಟ್ ಮಂಡಳಿ ಅಧಿಕಾರಿಗಳು ಸ್ವಾಗತಿಸಿದರು. ಬಳಿಕ ರಸ್ತೆ ಮಾರ್ಗವಾಗಿ ತಂಡ ಕ್ಯಾಂಡಿಗೆ ತೆರಳಿತು. ಕೆ.ಎಲ್.ರಾಹುಲ್ ಹೊರತುಪಡಿಸಿ ಉಳಿದೆಲ್ಲಾ ಆಟಗಾರರು ಕ್ಯಾಂಡಿ ತಲುಪಿದ್ದು, ಗುರುವಾರದಿಂದ ಅಭ್ಯಾಸ ಆರಂಭಿಸಿದ್ದಾರೆ. ಟೀಂ ಇಂಡಿಯಾ ಸೆಪ್ಟೆಂಬರ್ 2ರಂದು ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನ ವಿರುದ್ಧ ಆಡಲಿದ್ದು, ಸೆಪ್ಟೆಂಬರ್ 4ರಂದು ಗುಂಪು ಹಂತದ ತನ್ನ 2ನೇ ಪಂದ್ಯದಲ್ಲಿ ನೇಪಾಳ ವಿರುದ್ಧ ಸೆಣಸಲಿದೆ.
Asia Cup 2023: ಲಂಕಾ ಮಾರಕ ದಾಳಿಗೆ ಬಾಂಗ್ಲಾದೇಶ ಧೂಳೀಪಟ..!
ಏಷ್ಯಾಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡ ಹೀಗಿದೆ ನೋಡಿ:
ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ.
ಏಷ್ಯಾಕಪ್ ಟೂರ್ನಿಗೆ ಪಾಕಿಸ್ತಾನ ತಂಡ ಹೀಗಿದೆ ನೋಡಿ:
ಬಾಬರ್ ಅಜಂ(ನಾಯಕ), ಶಾದಾಬ್ ಖಾನ್, ಮೊಹಮ್ಮದ್ ರಿಜ್ವಾನ್(ಉಪನಾಯಕ), ಫಖರ್ ಜಮಾನ್, ಅಬ್ದುಲ್ಲಾ ಶಫೀಕ್, ಇಮಾಮ್ ಉಲ್ ಹಕ್, ಸೌದ್ ಶಕೀಲ್(ಕೇವಲ ಆಪ್ಘಾನಿಸ್ತಾನ ಎದುರಿನ ಸರಣಿಗೆ ಮಾತ್ರ), ಸಲ್ಮಾನ್ ಅಲಿ ಅಘಾ, ಇಫ್ತಿಕರ್ ಅಹಮ್ಮದ್, ಮೊಹಮ್ಮದ್ ನವಾಜ್, ಉಸ್ಮಾನ್ ಮಿರ್, ಹ್ಯಾರಿಸ್ ರೌಫ್, ನಸೀಮ್ ಶಾ, ಶಾಹೀನ್ ಅಫ್ರಿದಿ, ತಯ್ಯಬ್ ತಾಹಿರ್, ಮೊಹಮ್ಮದ್ ಹ್ಯಾರಿಸ್, ಫಾಹೀಮ್ ಅಶ್ರಫ್, ಮೊಹಮ್ಮದ್ ವಾಸೀಂ.