ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿರುವ ಕೆಕೆಆರ್ ಹಾಗೂ ರಾಜಸ್ಥಾನ ರಾಯಲ್ಸ್ ಇದೀಗ ಗೆಲುವಿನ ಅದೃಷ್ಠ ಪರೀಕ್ಷೆ ನಡೆಸಲಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ ರಾಯಲ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿನ ಬದಲಾವಣೆ ವಿವರ ಇಲ್ಲಿದೆ.

ಮುಂಬೈ(ಏ.24); ಐಪಿಎಲ್ 2021 ಟೂರ್ನಿಯ 18ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.ರಾಜಸ್ಥಾನ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ.ಕೆಕೆಆರ್ ತಂಡದಲ್ಲಿ 1 ಬದಲಾವಣೆ ಮಾಡಲಾಗಿದೆ. ಕಮಲೇಶ್ ನಾಗರಕೋಟಿ ಬದಲು ಶಿವಂ ಮಾವಿ ತಂಡ ಸೇರಿಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Scroll to load tweet…

ರಾಜಸ್ಥಾನ ರಾಯಲ್ಸ್ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇನ್ನು ಕೆಕೆಆರ್ ಒಂದು ಸ್ಥಾನಕ್ಕೆ ಮೇಲಕ್ಕೆ ಅಂದರೆ 7ನೇ ಸ್ಥಾನದಲ್ಲಿದೆ. ಉಭಯ ತಂಡಗಳು ಆಡಿದ 4 ಪಂದ್ಯದಲ್ಲಿ ಒಂದೊಂದೆ ಗೆಲುವು ದಾಖಲಿಸಿದೆ. ಹೀಗಾಗಿ ಇಂದಿನ ಗೆಲುವು ಅನಿವಾರ್ಯವಾಗಿದೆ.